ರಾಜಸ್ಥಾನ ಅಪಘಾತದ ನಂತರ ಮಿಗ್ -21 ಯುದ್ಧ ವಿಮಾನ ಹಾರಾಟ ನಿಷೇಧಿಸಿದ ಐಎಎಫ್
ಈ ತಿಂಗಳ ಆರಂಭದಲ್ಲಿ ರಾಜಸ್ಥಾನದಲ್ಲಿ ಸಂಭವಿಸಿದ ಅಪಘಾತದ ನಂತರ ಭಾರತೀಯ ವಾಯುಪಡೆ(ಐಎಎಫ್) ಮಿಗ್ -21 ಯುದ್ಧ ವಿಮಾನಗಳ ಹಾರಾಟವನ್ನು ಸಂಪೂರ್ಣ ನಿಷೇಧಿಸಿದೆ.

ನವದೆಹಲಿ: ಈ ತಿಂಗಳ ಆರಂಭದಲ್ಲಿ ರಾಜಸ್ಥಾನದಲ್ಲಿ ಸಂಭವಿಸಿದ ಅಪಘಾತದ ನಂತರ ಭಾರತೀಯ ವಾಯುಪಡೆ(ಐಎಎಫ್) ಮಿಗ್ -21 ಯುದ್ಧ ವಿಮಾನಗಳ ಹಾರಾಟವನ್ನು ಸಂಪೂರ್ಣ ನಿಷೇಧಿಸಿದೆ.
ಅನ್ನು ತಪಾಸಣೆ ನಡೆಸುವವರೆಗೆ ಮತ್ತು ಈ ತಿಂಗಳ ಆರಂಭದಲ್ಲಿ ರಾಜಸ್ಥಾನದಲ್ಲಿ ಅಪಘಾತದ ಹಿಂದಿನ ಕಾರಣಗಳ ಬಗ್ಗೆ ತನಿಖೆಗಳನ್ನು ಕಂಡುಹಿಡಿಯುವವರೆಗೆ ನೆಲಸಮಗೊಳಿಸಿದೆ.
ಮೇ 8 ರಂದು ಸೂರತ್‌ಗಢದ ವಾಯುನೆಲೆಯಿಂದ ಮಿಗ್ -21 ಬೈಸನ್ ಯುದ್ಧ ವಿಮಾನ ಹನುಮಾನ್‌ಗಢದ ಹಳ್ಳಿಯೊಂದರಲ್ಲಿ ಪತನಗೊಂಡಿತ್ತು. ಈ ಅಪಘಾತದಲ್ಲಿ ಮೂವರು ಮೃತಪಟ್ಟಿದ್ದರು. ಇದಕ್ಕೂ ಮುನ್ನ ಇಂತಹ ಹಲವು ಅಪಘಾತಗಳು ದಾಖಲಾಗಿದ್ದು, ಇದರಲ್ಲಿ ಪೈಲಟ್‌ಗಳು ಪ್ರಾಣ ಕಳೆದುಕೊಂಡಿದ್ದಾರೆ.
ಪದೇಪದೆ ಅಪಘಾತಗಳಿಗೆ ಗುರಿಯಾಗುತ್ತಿರುವ ಮಿಗ್ 21 ವಿಮಾನಗಳ ಹಾರಾಟವನ್ನು, ಸಂಪೂರ್ಣ ತಪಾಸಣೆ ನಡೆಸುವವರೆಗೆ ಮತ್ತು ರಾಜಸ್ಥಾನದಲ್ಲಿ ಸಂಭವಿಸಿದ ಅಪಘಾತದ ಹಿಂದಿನ ಕಾರಣಗಳ ಬಗ್ಗೆ ತನಿಖೆ ನಡೆಸುವವರೆಗೆ ತಾತ್ಕಾಲಿಕವಾಗಿ ಐಎಎಫ್, ಮಿಗ್-21 ವಿಮಾನಗಳ ಹಾರಾಟ ನಿಷೇಧಿಸಿದೆ.
"ತನಿಖೆ ಪೂರ್ಣಗೊಳ್ಳುವವರೆಗೆ ಮತ್ತು ಅಪಘಾತಕ್ಕೆ ಕಾರಣಗಳನ್ನು ಕಂಡುಹಿಡಿಯುವವರೆಗೆ MiG-21 ಹಾರಾಟ ನಿಷೇಧಿಸಲಾಗಿದೆ" ಎಂದು ಹಿರಿಯ ರಕ್ಷಣಾ ಅಧಿಕಾರಿಗಳು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


