ಜಮ್ಮು-ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯಲ್ಲಿ ಒಳನುಸುಳುಕೋರನ ಹತ್ಯೆ
ಜಮ್ಮು- ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯ ಉದ್ದಕ್ಕೆ ಪಾಕಿಸ್ತಾನದಿಂದ ಒಳನುಸುಳುಕೋರನನ್ನು ಶನಿವಾರ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಶ್ರೀನಗರ: ಜಮ್ಮು- ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯ ಉದ್ದಕ್ಕೆ ಪಾಕಿಸ್ತಾನದಿಂದ ಒಳನುಸುಳುಕೋರನನ್ನು ಶನಿವಾರ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನುಸುಳುಕೋರನು ಗಡಿಯಾಚೆಯಿಂದ ಈ ಭಾಗಕ್ಕೆ ನುಸುಳಲು ಪ್ರಯತ್ನಿಸುತ್ತಿದ್ದಾಗ ಮೆಂಧಾರ್ ಉಪ ವಿಭಾಗದ ಬಾಲಾಕೋಟ್ ಸೆಕ್ಟರ್‌ನಲ್ಲಿ ಕಾವಲು ಕಾಯುತ್ತಿದ್ದ ಪಡೆಗಳಿಂದ ಹೊಡೆದುರುಳಿಸಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಒಳನುಗ್ಗುವವನಿಗೆ ಅಧಿಕಾರಿಗಳು ಎಚ್ಚರಿಸಿದರೂ ಗಮನ ನೀಡಲಿಲ್ಲ. ಆಗ ಭದ್ರತಾ ಪಡೆ ಯೋಧರು ಗುಂಡು ಹಾರಿಸಿದಾಗ ಹಿಂತಿರುಗಲು ಪಲಾಯನ ಮಾಡಲು ಪ್ರಯತ್ನಿಸುತ್ತಿರುವಾಗ ಗುಂಡೇಟಿಗೆ ಸಿಲುಕಿ ಮೃತಪಟ್ಟಿದ್ದಾನೆ.
ಘಟನೆ ನಡೆದ ಸ್ಥಳದಲ್ಲಿ ಪ್ರದೇಶವನ್ನು ಸುತ್ತುವರಿದಿದ್ದು, ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


