ಭಯೋತ್ಪಾದನೆಗೆ ಸಂಚು ಪ್ರಕರಣ: ಎನ್‌ಐಎನಿಂದ ಕಾಶ್ಮೀರದಲ್ಲಿ ಜೆಇಎಂ ಉಗ್ರನ ಬಂಧನ
ಜಮ್ಮು ಮತ್ತು ಕಾಶ್ಮೀರದಲ್ಲಿ ಭದ್ರತಾ ಪಡೆಗಳ ಚಲನವಲನದ ಬಗ್ಗೆ ರಹಸ್ಯ ಮಾಹಿತಿ ರವಾನಿಸುತ್ತಿದ್ದ ಪಾಕಿಸ್ತಾನ ಮೂಲದ ಜೈಶ್-ಎ-ಮೊಹಮ್ಮದ್(ಜೆಇಎಂ) ಭಯೋತ್ಪಾದಕ ಸಂಘಟನೆಯ ಉಗ್ರನನ್ನು ಬಂಧಿಸಲಾಗಿದೆ ಎಂದು ಎನ್ಐಎ...

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಭದ್ರತಾ ಪಡೆಗಳ ಚಲನವಲನದ ಬಗ್ಗೆ ರಹಸ್ಯ ಮಾಹಿತಿ ರವಾನಿಸುತ್ತಿದ್ದ ಪಾಕಿಸ್ತಾನ ಮೂಲದ ಜೈಶ್-ಎ-ಮೊಹಮ್ಮದ್(ಜೆಇಎಂ) ಭಯೋತ್ಪಾದಕ ಸಂಘಟನೆಯ ಉಗ್ರನನ್ನು ಬಂಧಿಸಲಾಗಿದೆ ಎಂದು ಎನ್ಐಎ ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.
ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕ ದಾಳಿಗಳ ಮೂಲಕ ಭಾರತವನ್ನು ಅಸ್ಥಿರಗೊಳಿಸಲು ಗಡಿಯಾಚೆಗಿನ ಭಯೋತ್ಪಾದಕ ಸಂಘಟನೆಗಳು ನಡೆಸುತ್ತಿರುವ ಸಂಚಿನ ವಿರುದ್ಧದ ಹೋರಾಟದ ನಡುವೆ ಉತ್ತರ ಕಾಶ್ಮೀರದ ಕುಪ್ವಾರದಲ್ಲಿ ಉಗ್ರ ಮೊಹಮ್ಮದ್ ಉಬೈದ್ ಮಲಿಕ್ ನನ್ನು ಬಂಧಿಸಲಾಗಿದೆ ಎಂದು ಎನ್ಐಎ ವಕ್ತಾರರು ಹೇಳಿದ್ದಾರೆ.
ಭಯೋತ್ಪಾದನೆಗೆ ಸಂಚು ರೂಪಿಸುತ್ತಿದ್ದ ಮಲಿಕ್, ಪಾಕಿಸ್ತಾನ ಮೂಲದ ಜೆಇಎಂ ಕಮಾಂಡರ್ ಜತೆ ನಿರಂತರ ಸಂಪರ್ಕದಲ್ಲಿದ್ದರು ಎಂದು ಅವರು ತಿಳಿಸಿದ್ದಾರೆ.
ಬಂಧಿತ ಉಗ್ರ, ಪಾಕಿಸ್ತಾನ ಮೂಲದ ಕಮಾಂಡರ್‌ಗೆ ವಿಶೇಷವಾಗಿ ಸೈನಿಕರು ಮತ್ತು ಭದ್ರತಾ ಪಡೆಗಳ ಚಲನವಲನದ ಬಗ್ಗೆ ರಹಸ್ಯ ಮಾಹಿತಿ ರವಾನಿಸುತ್ತಿದ್ದ ಎಂಬುದು ತನಿಖೆಯಿಂದ ತಿಳಿದುಬಂದಿದೆ ಎಂದು ವಕ್ತಾರರು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


