ಜಿ 20 ಶೃಂಗಸಭೆ: ಮೆಗಾ ಪವರ್ ಸ್ಟಾರ್ ರಾಮಚರಣ್ ವಿಶೇಷ ಆಕರ್ಷಣೆ!
ಜಿ 20 ಶೃಂಗಸಭೆಯಲ್ಲಿ ಮೆಗಾ ಪವರ್ ಸ್ಟಾರ್ ರಾಮ್ ಚರಣ್ ವಿಶೇಷ ಆಕರ್ಷಣೆಯಾಗಿದ್ದಾರೆ. ಭಾರತ ಸರ್ಕಾರ ಆಯೋಜಿಸಿರುವ ಪ್ರತಿಷ್ಠಿತ ಜಿ-20 ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಶ್ರೀನಗರ ವಿಮಾನ ನಿಲ್ದಾಣಕ್ಕೆ ಆಗಮಿಸಿದ ನಟನನ್ನು ಅಧಿಕಾರಿಗಳು ಆತ್ಮೀಯವಾಗಿ ಬರಮಾಡಿಕೊಂಡರು.

ಶ್ರೀನಗರ: ಜಿ 20 ಶೃಂಗಸಭೆಯಲ್ಲಿ ಮೆಗಾ ಪವರ್ ಸ್ಟಾರ್ ರಾಮ್ ಚರಣ್ ವಿಶೇಷ ಆಕರ್ಷಣೆಯಾಗಿದ್ದಾರೆ. ಭಾರತ ಸರ್ಕಾರ ಆಯೋಜಿಸಿರುವ ಪ್ರತಿಷ್ಠಿತ ಜಿ-20 ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಶ್ರೀನಗರ ವಿಮಾನ ನಿಲ್ದಾಣಕ್ಕೆ ಆಗಮಿಸಿದ ನಟನನ್ನು ಅಧಿಕಾರಿಗಳು ಆತ್ಮೀಯವಾಗಿ ಬರಮಾಡಿಕೊಂಡರು.
ಪ್ರವಾಸೋದ್ಯಮ ಮತ್ತಿತರ ಅಂಶಗಳನ್ನು ಉತ್ತೇಜಿಸುವ ಉದ್ದೇಶದಿಂದ ಜಮ್ಮು-ಕಾಶ್ಮೀರದ ಶ್ರೀನಗರದಲ್ಲಿ ಜಿ-20 ಪ್ರವಾಸೋದ್ಯಮ ಕಾರ್ಯಕಾರಿ ಗುಂಪಿನ ಸಭೆ ಆಯೋಜಿಸಲಾಗಿದೆ.
ಮೇ 22 ರಿಂದ ಮೇ 24 ರವರೆಗೆ ಮೂರು ದಿನಗಳ ಕಾಲ ಈ ಸಭೆ ನಡೆಯಲಿದೆ. 2019 ರಲ್ಲಿ ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ತೆಗೆದುಹಾಕಿದ ನಂತರ ಕಾಶ್ಮೀರದಲ್ಲಿ ಇದೇ ಮೊದಲ ಬಾರಿಗೆ ಇಂತಹ ಬೃಹತ್ ಸಭೆ ನಡೆಯುತ್ತಿದ್ದು, ಈ ಕಾರ್ಯಕ್ರಮಕ್ಕಾಗಿ ಮೂರು ಹಂತದ ಭದ್ರತಾ ವ್ಯವಸ್ಥೆ ಒದಗಿಸಲಾಗಿದೆ.
ಅತಿಥಿಗಳ ಭದ್ರತೆಗಾಗಿ ರಾಷ್ಟ್ರೀಯ ಭದ್ರತಾ ಸಿಬ್ಬಂದಿ (ಎನ್‌ಎಸ್‌ಜಿ) ಮತ್ತು ಮಾರ್ಕೋಸ್ ಕಮಾಂಡೋಗಳನ್ನು ನಿಯೋಜಿಸಲಾಗಿದೆ. ಈ ಕಮಾಂಡೋಗಳು ಕಾರ್ಯಕ್ರಮ ಸ್ಥಳದ ಸುತ್ತಲೂ ಹದ್ದಿನ ಕಣ್ಣು ಇಟ್ಟಿರುತ್ತಾರೆ ಮತ್ತು ಜಮ್ಮು ಮತ್ತು ಕಾಶ್ಮೀರದ ವಿಶೇಷ ಕಾರ್ಯಾಚರಣೆ ಗುಂಪು ಕೂಡ ಭದ್ರತಾ ವ್ಯವಸ್ಥೆ ಒದಗಿಸಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


