ಪ್ರಣಯ್ ರಾಯ್, ರಾಧಿಕಾ ರಾಯ್ ವಿದೇಶ ಪ್ರಯಾಣಕ್ಕೆ ದೆಹಲಿ ಹೈಕೋರ್ಟ್ ಅನುಮತಿ
ಎನ್ಡಿಟಿವಿ ಸಂಸ್ಥಾಪಕರಾದ ಪ್ರಣಯ್ ರಾಯ್ ಮತ್ತು ಅವರ ಪತ್ನಿ ರಾಧಿಕಾ ರಾಯ್ ಅವರಿಗೆ ವ್ಯಾಪಾರ ಉದ್ದೇಶ ಮತ್ತು ವೈಯಕ್ತಿಕ ಕಾರಣಗಳಿಗಾಗಿ ಮೂರು ವಾರಗಳ ಕಾಲ ವಿದೇಶ ಪ್ರವಾಸಕ್ಕೆ ತೆರಳಲು ದೆಹಲಿ ಹೈಕೋರ್ಟ್ ಮಂಗಳವಾರ...

ನವದೆಹಲಿ: ಎನ್ಡಿಟಿವಿ ಸಂಸ್ಥಾಪಕರಾದ ಪ್ರಣಯ್ ರಾಯ್ ಮತ್ತು ಅವರ ಪತ್ನಿ ರಾಧಿಕಾ ರಾಯ್ ಅವರಿಗೆ ವ್ಯಾಪಾರ ಉದ್ದೇಶ ಮತ್ತು ವೈಯಕ್ತಿಕ ಕಾರಣಗಳಿಗಾಗಿ ಮೂರು ವಾರಗಳ ಕಾಲ ವಿದೇಶ ಪ್ರವಾಸಕ್ಕೆ ತೆರಳಲು ದೆಹಲಿ ಹೈಕೋರ್ಟ್ ಮಂಗಳವಾರ ಅನುಮತಿ ನೀಡಿದೆ.
ಅರ್ಜಿದಾರರ ವೃತ್ತಿಪರ ನಿಲುವಿನಿಂದಾಗಿ, ಅವರು ದೇಶ ತೊರೆಯುವ ಅಪಾಯ ಇಲ್ಲ ಮತ್ತು ಜುಲೈ 25 ರಿಂದ ಆಗಸ್ಟ್ 15 ರವರೆಗೆ ವಿದೇಶ ಪ್ರಯಾಣಕ್ಕೆ ಅನುಮತಿ ನೀಡಲಾಗಿದೆ ಎಂದು ನ್ಯಾಯಮೂರ್ತಿ ಪ್ರತಿಭಾ ಎಂ ಸಿಂಗ್ ಅವರು ಹೇಳಿದ್ದಾರೆ.
ನ್ಯಾಯಾಲಯವು ರಿಜಿಸ್ಟ್ರಾರ್ ಮುಂದೆ ವಿಧಿಸಿದ ಅಗತ್ಯ ಷರತ್ತುಗಳನ್ನು ಪೂರೈಸಿದ ನಂತರ ರಾಯ್ ದಂಪತಿಗೆ ಯುನೈಟೆಡ್ ಕಿಂಗ್ಡಮ್ಗೆ ಭೇಟಿ ನೀಡಲು ಹೈಕೋರ್ಟ್ ಅನುಮತಿ ನೀಡಿದೆ.
ಇದನ್ನು ಓದಿ: ಹಿರಿಯ ಪತ್ರಕರ್ತೆ ಸಾರಾ ಜಾಕೋಬ್ NDTVಗೆ ರಾಜೀನಾಮೆ
ಪ್ರಣಯ್ ರಾಯ್ ಮತ್ತು ರಾಧಿಕಾ ರಾಯ್ ಅವರು ತಮ್ಮ ಪ್ರಯಾಣದ ವಿವರಗಳನ್ನು ಹೈಕೋರ್ಟ್ನ ರಿಜಿಸ್ಟ್ರಾರ್ಗೆ ನೀಡುವಂತೆಯೂ ಕೋರ್ಟ್ ಸೂಚಿಸಿದೆ.
ಭ್ರಷ್ಟಾಚಾರದ ಆರೋಪಕ್ಕೆ ಸಂಬಂಧಿಸಿದಂತೆ ರಾಯ್ ದಂಪತಿ ವಿರುದ್ಧ ಎರಡು ಎಫ್ಐಆರ್ಗಳನ್ನು ದಾಖಲಿಸಿರುವ ಕೇಂದ್ರೀಯ ತನಿಖಾ ಸಂಸ್ಥೆ(ಸಿಬಿಐ) ಆದೇಶದ ಮೇರೆಗೆ ತಮ್ಮ ವಿರುದ್ಧ ಹೊರಡಿಸಲಾಗಿರುವ ಲುಕ್ಔಟ್ ನೋಟಿಸ್ ಅನ್ನು ಪ್ರಶ್ನಿಸಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


