ದೇಶ

ಮಹಾರಾಷ್ಟ್ರ: ಮುಂಬೈ ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದ ಯುವಕನ ಬಂಧನ

"ಮುಂಬೈ ಸ್ಫೋಟಿಸುವುದಾಗಿ" ಟ್ವೀಟ್ ಮೂಲಕ ಬೆದರಿಕೆ ಹಾಕಿದ್ದ ಮಹಾರಾಷ್ಟ್ರದ ನಾಂದೇಡ್‌ನ 19 ವರ್ಷದ ಯುವಕನನ್ನು ಮುಂಬೈ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.

ಮಹಾರಾಷ್ಟ್ರ: ಮುಂಬೈ ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದ ಯುವಕನ ಬಂಧನ
ಸಾಂದರ್ಭಿಕ ಚಿತ್ರ
Published On :

ನಾಂದೇಡ್‌: "ಮುಂಬೈ ಸ್ಫೋಟಿಸುವುದಾಗಿ" ಟ್ವೀಟ್ ಮೂಲಕ ಬೆದರಿಕೆ ಹಾಕಿದ್ದ ಮಹಾರಾಷ್ಟ್ರದ ನಾಂದೇಡ್‌ನ 19 ವರ್ಷದ ಯುವಕನನ್ನು ಮುಂಬೈ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.

ಮುಂಬೈ ಪೊಲೀಸರನ್ನು ಟ್ಯಾಗ್ ಮಾಡಿ, "ನಾನು ಶೀಘ್ರದಲ್ಲೇ ಮುಂಬೈಯನ್ನು ಸ್ಫೋಟಿಸಲಿದ್ದೇನೆ" ಎಂದು ಟ್ವೀಟ್ ಮಾಡಿದ್ದ ಯುವಕನನ್ನು ನಾಂದೇಡ್ ನಲ್ಲಿ ಬಂಧಿಸಲಾಗಿದೆ.

ಮುಂಬೈನಿಂದ ಸುಮಾರು 625 ಕಿಮೀ ದೂರದಲ್ಲಿರುವ ನಾಂದೇಡ್ ನಗರದಲ್ಲಿ ಟ್ವೀಟ್ ಮಾಡಿದ ಯುವಕನನ್ನು ಪತ್ತೆಹಚ್ಚಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

19 ವರ್ಷದ ಯುವಕ "ಶಾಲಾ ವಿದ್ಯಾರ್ಥಿ" ಎಂದು ಮುಂಬೈ ಪೊಲೀಸ ತಡರಾತ್ರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮುಂಬೈ ಪೊಲೀಸ್ ಅಪರಾಧ ವಿಭಾಗವು ಭಯೋತ್ಪಾದನಾ ನಿಗ್ರಹ ದಳ ನಾಂದೇಡ್ ಘಟಕದ ಸಹಾಯದಿಂದ ಆತನನ್ನು ಬಂಧಿಸಿದೆ ಮತ್ತು ಆರೋಪಿಯನ್ನು ಮುಂಬೈಗೆ ಕರೆದೊಯ್ಯಲಾಗುತ್ತಿದೆ ಎಂದು ಹೇಳಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.