ಲೈಂಗಿಕ ಕಿರುಕುಳ ಆರೋಪ ಮಾಡಿದ್ದ ವ್ಯಕ್ತಿಯನ್ನೇ ಕೊಚ್ಚಿ ಬರ್ಬರವಾಗಿ ಹತ್ಯೆಗೈದ್ಯ ದುಷ್ಕರ್ಮಿಗಳು!
30 ವರ್ಷದ ವ್ಯಕ್ತಿಯನ್ನು ಕನಿಷ್ಠ ನಾಲ್ವರು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ.

ಭುವನೇಶ್ವರ್(ಒಡಿಶಾ): 30 ವರ್ಷದ ವ್ಯಕ್ತಿಯನ್ನು ಕನಿಷ್ಠ ನಾಲ್ವರು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ.
ಸುಶಾಂತ್ ನಾಯಕ್ ಅವರ ಸೊಸೆಗೆ ಹತ್ಯೆಗೈದ ದುಷ್ಕರ್ಮಿಗಳಲ್ಲಿ ಒಬ್ಬ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ವರದಿಯಾದ ಬೆನ್ನಲ್ಲೇ ಸುಶಾಂತ್ ನಾಯಕ್ ನನ್ನು ದುಷ್ಕರ್ಮಿಗಳು ಮುಂಜಾನೆ ದಾಳಿ ನಡೆಸಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಆತ ತನ್ನ ಮನೆಗೆ ಹಿಂದಿರುಗುತ್ತಿದ್ದಾಗ ಹಲ್ಲೆ ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ನಾಯಕ್, ಯುನಿಟ್-1 ರಲ್ಲಿ ಗರ್ಲ್ಸ್ ಹೈಸ್ಕೂಲ್ ಬಳಿಯ ಜಿಇಡಿ ಸ್ಲಮ್ ನಿವಾಸಿಯಾಗಿದ್ದು, ಇಲ್ಲಿನ ಐಜಿನಿಯಾ ಪ್ರದೇಶದ ಸೆಂಟ್ರಲ್ ಹಾರ್ಟಿಕಲ್ಚರಲ್ ಎಕ್ಸ್‌ಪರಿಮೆಂಟ್ ಸ್ಟೇಷನ್ (ಸಿಎಚ್‌ಇಎಸ್) ನಲ್ಲಿ ಹೌಸ್‌ಕೀಪಿಂಗ್ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದರು. ದಾಳಿಯ ನಂತರ ಕುಟುಂಬಸ್ಥರು ಅವರನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಘಟನೆಯ ನಂತರ ಎಲ್ಲಾ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ.
'ಸುಶಾಂತ್ ತನ್ನ ಪತ್ನಿ ಸರಸ್ವತಿ ನಾಯಕ್ ಅವರನ್ನು ಬೆಳಿಗ್ಗೆ ತನ್ನ ಕೆಲಸದ ಸ್ಥಳಕ್ಕೆ ಬಿಡಲು ಹೋಗಿದ್ದರು. ಸರಸ್ವತಿ ಭುವನೇಶ್ವರ ಮುನ್ಸಿಪಲ್ ಕಾರ್ಪೊರೇಷನ್ (BMC) ನಲ್ಲಿ ಸ್ವೀಪರ್ ಆಗಿ ಕೆಲಸ ಮಾಡುತ್ತಿದ್ದಾರೆ. ಅವರು ಹಿಂದಿರುಗುತ್ತಿದ್ದಾಗ ದಾರಿಯಲ್ಲಿ ದುಷ್ಕರ್ಮಿಗಳು ಅವರ ಮೇಲೆ ದಾಳಿ ಮಾಡಿದ್ದಾರೆ" ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಆರೋಪಿಗಳನ್ನು ಬಂಧಿಸಲು ಪೊಲೀಸರು ಶೋಧ ಕಾರ್ಯ ಆರಂಭಿಸಿದ್ದಾರೆ. ಈ ಹಿಂದೆ ಆರೋಪಿಗಳಲ್ಲಿ ಒಬ್ಬರು ಸುಶಾಂತ್ ಅವರ ಸೊಸೆಗೆ ಕಿರುಕುಳ ನೀಡಿದ್ದು ಅಂದಿನಿಂದ ಆತ ತಲೆಮರೆಸಿಕೊಂಡಿದ್ದಾನೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದೆ ಪ್ರಕರಣವನ್ನು ದಾಖಲಿಸಲಾಗಿತ್ತು. ನಮ್ಮ ಪ್ರಾಥಮಿಕ ತನಿಖೆಯ ಪ್ರಕಾರ ಕಿರುಕುಳ ಪ್ರಕರಣದ ಆರೋಪಿಗಳು ಮತ್ತು ಅವರ ಸಂಬಂಧಿಕರು ಕೊಲೆ ಮಾಡಿರಬಹುದು ಎಂಬ ಶಂಕೆಯಿದ್ದು, ಹಂತಕರನ್ನು ಬಂಧಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದು ಪೊಲೀಸರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


