ಸಂಪುಟ ವಿಸ್ತರಣೆ, ಖಾತೆ ಹಂಚಿಕೆ ಕಸರತ್ತು: ದೆಹಲಿಯಲ್ಲಿ ಕಾಂಗ್ರೆಸ್ ವಾರ್ ರೂಂನಲ್ಲಿ ಸಿಎಂ ಸಿದ್ದರಾಮಯ್ಯ ಸಭೆ
ರಾಜ್ಯ ಸಚಿವ ಸಂಪುಟ ರಚನೆ ಕುರಿತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಕರ್ನಾಟಕದ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಮತ್ತು ಪಕ್ಷದ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಅವರೊಂದಿಗೆ ಸಭೆ ನಡೆಸಿದ ನಂತರ ಸಿಎಂ ಸಿದ್ದರಾಮಯ್ಯ ಅವರು 15 ಜಿಆರ್‌ಜಿಗೆ ವಾರ್ ರೂಂನಿಂದ ಹೊರಟರು.

ನವದೆಹಲಿ: ಕಾಂಗ್ರೆಸ್ ಹೈಕಮಾಂಡ್ ಮುಂದೆ ರಾಜ್ಯ ನಾಯಕರ ಸಚಿವ ಸಂಪುಟ ರಚನೆ ಕಸರತ್ತು ಮುಂದುವರಿದಿದೆ. ರಾಜ್ಯ ಸಚಿವ ಸಂಪುಟ ರಚನೆ ಕುರಿತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಕರ್ನಾಟಕದ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಮತ್ತು ಪಕ್ಷದ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಅವರೊಂದಿಗೆ ಸಭೆ ನಡೆಸಿದ ನಂತರ ಸಿಎಂ ಸಿದ್ದರಾಮಯ್ಯ ಅವರು 15 ಜಿಆರ್‌ಜಿಗೆ ವಾರ್ ರೂಂನಿಂದ ಹೊರಟರು.
ದೆಹಲಿಯ ಜಿಆರ್ಜಿ ರಸ್ತೆಯಲ್ಲಿರುವ ಕಾಂಗ್ರೆಸ್ ವಾರ್ ರೂಮ್ನಲ್ಲಿ ಬೆಳಗ್ಗೆ 11.30ರಿಂದ ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅವರ ಜೊತೆ ಸಭೆ ನಡೆಸಿದರು. ಸದ್ಯ ಸಿದ್ದರಾಮಯ್ಯ ಅವರು ಭೋಜನ ವಿರಾಮಕ್ಕಾಗಿ ಹೊರಬಂದಿದ್ದಾರೆ. ಸಂಪುಟ ವಿಸ್ತರಣೆ, ಖಾತೆ ಹಂಚಿಕೆ ಬಗ್ಗೆ ವಿಸ್ತೃತವಾಗಿ ಚರ್ಚೆ ನಡೆಸಲಾಗುತ್ತಿದೆ.
224 ಸದಸ್ಯ ಬಲದ ಕರ್ನಾಟಕ ವಿಧಾನಸಭೆಗೆ ಮೇ 10 ರಂದು ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ 135 ಸ್ಥಾನಗಳನ್ನು ಗೆದ್ದುಕೊಂಡಿದೆ. ಚುನಾವಣೆಯಲ್ಲಿ ಪಕ್ಷವನ್ನು ಬಲವಾಗಿ ಬೆಂಬಲಿಸಿದ ಸಮುದಾಯಗಳ ಆಧಾರದ ಮೇಲೆ ಸಚಿವರ ನಿರ್ಧಾರಗಳನ್ನು ತೆಗೆದುಕೊಳ್ಳಬೇಕೆಂದು ಕೆಲವು ಹಿರಿಯ ಕಾಂಗ್ರೆಸ್ ನಾಯಕರು ಹೈಕಮಾಂಡ್ ಗೆ ಮನವಿ ಮಾಡಿದ್ದಾರೆ ಎಂದು ತಿಳಿದುಬಂದಿದೆ.
ಒಕ್ಕಲಿಗ ಸಮುದಾಯಕ್ಕೆ ಸೇರಿದ ಡಿ ಕೆ ಶಿವಕುಮಾರ್ ಅವರನ್ನು ಮಾತ್ರ ಡಿಸಿಎಂ ಮಾಡಿರುವುದು ಪಕ್ಷದಲ್ಲಿ ಅನೇಕ ಹಿರಿಯ ಶಾಸಕರಿಗೆ ಅಸಮಾಧಾನ ತಂದಿದೆ ಎಂದು ಹೇಳಲಾಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


