ನೂತನ ಸಂಸತ್ ಕಟ್ಟಡ ವಿವಾದ: ರಾಷ್ಟ್ರಪತಿಯೇ ಉದ್ಘಾಟಿಸಬೇಕೆಂದು ಕೋರಿ ಸುಪ್ರೀಂ ಕೋರ್ಟ್ ಗೆ ಪಿಐಎಲ್ ಸಲ್ಲಿಕೆ
ನೂತನ ಸಂಸತ್ ಕಟ್ಟಡವನ್ನು ಮೇ 28 ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರೇ ಉದ್ಘಾಟಿಸಬೇಕು ಎಂದು ನಿರ್ದೇಶನ ನೀಡುವಂತೆ ಕೋರಿ ಗುರುವಾರ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ.

ನವದೆಹಲಿ: ನೂತನ ಸಂಸತ್ ಕಟ್ಟಡವನ್ನು ಮೇ 28 ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರೇ ಉದ್ಘಾಟಿಸಬೇಕು ಎಂದು ನಿರ್ದೇಶನ ನೀಡುವಂತೆ ಕೋರಿ ಗುರುವಾರ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ. ಲೋಕ ಸಭೆಯ ಸಚಿವಾಲಯವು ರಾಷ್ಟ್ರಪತಿಗಳನ್ನು ಉದ್ಘಾಟನೆಗೆ ಆಹ್ವಾನಿಸದೆ ಸಂವಿಧಾನವನ್ನು ಉಲ್ಲಂಘಿಸಿದೆ ಎಂದು ಪಿಐಎಲ್ ನಲ್ಲಿ ಹೇಳಲಾಗಿದೆ.
ನೂತನ ಸಂಸತ್ ಭವನದ ಉದ್ಘಾಟನೆ ಕುರಿತು ಮೇ 18 ರಂದು ಲೋಕಸಭೆಯ ಕಾರ್ಯದರ್ಶಿ ನೀಡಿದ ಹೇಳಿಕೆ ಮತ್ತು ರಾಷ್ಟ್ರಪತಿಗಳನ್ನು ಕಾರ್ಯಕ್ರಮಕ್ಕೆ ಆಹ್ವಾನ ನೀಡದಿರುವುದು ಸಂವಿಧಾನದ ಉಲ್ಲಂಘನೆಯಾಗಿದೆ ಎಂದು ವಕೀಲರಾದ ಜಯ ಸುಕಿನ್ ಸಲ್ಲಿಸಿರುವ ಅರ್ಜಿಯಲ್ಲಿ ಪ್ರತಿಪಾದಿಸಿದ್ದಾರೆ. ರಾಷ್ಟ್ರಪತಿಗಳು ಭಾರತದ ಪ್ರಥಮ ಪ್ರಜೆ ಮತ್ತು ಸಂಸತ್ತಿನ ಮುಖ್ಯಸ್ಥರಾಗಿದ್ದು, ಅವರಿಂದಲೇ ನೂತನ ಕಟ್ಟಡ ಉದ್ಘಾಟಿಸುವಂತೆ ನಿರ್ದೇಶಿಸಬೇಕೆಂದು ಅವರು ಕೋರಿದ್ದಾರೆ.
ಲೋಕಸಭೆ ಸ್ಪೀಕರ್ ಅವರ ಆಹ್ವಾನದ ಮೇರೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಮೇ 28 ರಂದು ನೂತನ ಸಂಸತ್ ಕಟ್ಟಡವನ್ನು ಉದ್ಘಾಟಿಸಲಿದ್ದಾರೆ. ಸುಮಾರು 20 ವಿರೋಧ ಪಕ್ಷಗಳು ನೂತನ ಸಂಸತ್ತಿನ ಕಟ್ಟಡವನ್ನು ಪ್ರಧಾನ ಮಂತ್ರಿ ಉದ್ಘಾಟಿಸುವುದನ್ನು ಖಂಡಿಸಿದ್ದು, ಉದ್ಘಾಟನಾ ಸಮಾರಂಭವನ್ನು ಬಹಿಷ್ಕರಿಸಲು ನಿರ್ಧರಿಸಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


