ಎಎಪಿ ಗೋವಾ ಘಟಕ: ಅಧ್ಯಕ್ಷ ಸ್ಥಾನ ಹೊರತುಪಡಿಸಿ ಉಳಿದೆಲ್ಲಾ ಪದಾಧಿಕಾರಿಗಳು, ಸಂಘಟನಾ ಸ್ಥಾನಗಳು ವಿಸರ್ಜನೆ
ಆಮ್ ಆದ್ಮಿ ಪಕ್ಷ (ಎಎಪಿ) ರಾಷ್ಟ್ರೀಯ ಸಮಿತಿಯು ತನ್ನ ಗೋವಾ ಘಟಕದ ಸಂಘಟನೆಯನ್ನು ವಿಸರ್ಜಿಸಿದೆ.

ನವದೆಹಲಿ: ಆಮ್ ಆದ್ಮಿ ಪಕ್ಷ (ಎಎಪಿ) ರಾಷ್ಟ್ರೀಯ ಸಮಿತಿಯು ತನ್ನ ಗೋವಾ ಘಟಕದ ಸಂಘಟನೆಯನ್ನು ವಿಸರ್ಜಿಸಿದೆ.
ಈ ಕುರಿತು ಎಎಪಿ ಶನಿವಾರ ಸಂಜೆ ಟ್ವೀಟ್ ಮಾಡಿದ್ದು, ಎಎಪಿ ಗೋವಾ ರಾಜ್ಯ ಘಟಕದ ಅಧ್ಯಕ್ಷ ಸ್ಥಾನ ಹೊರತುಪಡಿಸಿ ಉಳಿದೆಲ್ಲಾ ಘಟಕದ ಪದಾಧಿಕಾರಿಗಳು ಸ್ಥಾನಗಳು, ಇತರೆ ಸಂಘಟನಾ ಸ್ಥಾನಗಳು ವಿಸರ್ಜನೆಯಾಗಲಿವೆ. ಇದು ತಕ್ಷಣವೇ ಜಾರಿಗೆ ಬರಲಿದೆ ಎಂದು ಎಎಪಿಯ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಡಾ. ಸಂದೀಪ್ ಪಾಠಕ್ ತಿಳಿಸಿದ್ದಾರೆ.
ಪ್ರಸ್ತುತ ಎಎಪಿ ಗೋವಾ ರಾಜ್ಯ ಘಟಕದ ಅಧ್ಯಕ್ಷ ಅಮಿತ್ ಪಾಲೇಕರ್ ಹೊರತುಪಡಿಸಿದರೆ ಉಳಿದ ಸಂಘಟನಾ ಹುದ್ದೆಗಳನ್ನು ಶೀಘ್ರದಲ್ಲೇ ಪುನರ್ ರಚಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


