ಭಯೋತ್ಪಾದನೆಗೆ ಆರ್ಥಿಕ ನೆರವು ಪ್ರಕರಣ: ಮಧ್ಯ ಪ್ರದೇಶದ ಜಬಲ್‌ಪುರದ 13 ಸ್ಥಳಗಳಲ್ಲಿ ಎನ್‌ಐಎ ದಾಳಿ
ಭಯೋತ್ಪಾದನೆ ಸಂಚು, ಉಗ್ರದಾಳಿಗೆ ಆರ್ಥಿಕ ನೆರವು ಲಭ್ಯವಾಗುತ್ತಿದ್ದ ಪ್ರಕರಣದಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಶನಿವಾರ ಮಧ್ಯ ಪ್ರದೇಶದ ಜಬಲ್‌ಪುರದ 13 ಸ್ಥಳಗಳಲ್ಲಿ ದಾಳಿ ನಡೆಸಿದೆ.

ಭೋಪಾಲ್: ಭಯೋತ್ಪಾದನೆ ಸಂಚು, ಉಗ್ರದಾಳಿಗೆ ಆರ್ಥಿಕ ನೆರವು ಲಭ್ಯವಾಗುತ್ತಿದ್ದ ಪ್ರಕರಣದಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಶನಿವಾರ ಮಧ್ಯ ಪ್ರದೇಶದ ಜಬಲ್‌ಪುರದ 13 ಸ್ಥಳಗಳಲ್ಲಿ ದಾಳಿ ನಡೆಸಿದೆ.
ಬಾಂಗ್ಲಾದೇಶದ ಜಮಾತ್-ಉಲ್-ಮುಜಾಹಿದ್ದೀನ್ ಗೆ ಭೋಪಾಲ್ ನಲ್ಲಿ ಆರ್ಥಿಕ ನೆರವು ಸಿಗುತ್ತಿದ್ದಕ್ಕೆ ಸಂಬಂಧಿಸಿದ ಪ್ರಕರಣ ಇದಾಗಿದ್ದು, ಪ್ರಕರಣದಲ್ಲಿ ಶಾಮೀಲಾಗಿರುವವರ ಶಂಕಿತರ ಸ್ಥಳಗಳಲ್ಲಿ ಶೋಧಕಾರ್ಯಾಚರಣೆ ಮುಂದುವರೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮಧ್ಯಪ್ರದೇಶದ ಪೊಲೀಸರ ಸಹಕಾರದೊಂದಿಗೆ ಎನ್ಐಎ ಈ ದಾಳಿ ನಡೆಸಿದೆ. ಮೇ.25 ರಂದು ಎನ್ಐಎ ಭೋಪಾಲ್ ನಲ್ಲಿ 2 ಸ್ಥಳಗಳಲ್ಲಿ ದಾಳಿ ನಡೆಸಿ, ಉಗ್ರರಿಗೆ ಸಿಗುತ್ತಿರುವ ಆರ್ಥಿಕ ನೆರವಿನ ಪ್ರಕರಣದಲ್ಲಿ ಶೋಧಕಾರ್ಯಾಚರಣೆ ನಡೆಸಿತ್ತು.
ಈಗಾಗಲೇ ಬಂಧಿತರಾಗಿರುವ 10 ಆರೋಪಿಗಳು ಮತ್ತು ಚಾರ್ಜ್‌ಶೀಟ್ ನಲ್ಲಿ ಹೆಸರು ಉಲ್ಲೇಖಗೊಂಡಿರುವವರ ಮತ್ತಷ್ಟು ಸಂಪರ್ಕಗಳು ಮತ್ತು ಪಿತೂರಿಗಳನ್ನು ಬಹಿರಂಗಪಡಿಸಲು ಈ ದಾಳಿಗಳು ನಡೆದಿವೆ. ಬಂಧನಕ್ಕೊಳಗಾಗಿರುವ 10 ಮಂದಿ ಪೈಕಿ 6 ಮಂದಿ ಬಾಂಗ್ಲಾದೇಶಿ ಪ್ರಜೆಗಳಾಗಿದ್ದು, ಜೆಎಂಬಿ ಸಂಘಟನೆಯ ಸಕ್ರಿಯ ಸದಸ್ಯರಾಗಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


