ನೂತನ ಸಂಸತ್ ಭವನದ ಹೊರಗೆ ಪ್ರತಿಭಟನೆ: ಕುಸ್ತಿಪಟುಗಳು ಸೇರಿ ಹಲವರು ವಶಕ್ಕೆ
ನೂತನವಾಗಿ ಉದ್ಘಾಟನೆಗೊಂಡ ಸಂಸತ್ ಭವನದ ಹೊರಗೆ ಪ್ರತಿಭಟನೆ ನಡೆಸಲು ಯತ್ನಿಸಿದ ಒಲಿಂಪಿಯನ್‌ಗಳು ಮತ್ತು ಕಾಮನ್‌ವೆಲ್ತ್ ಗೇಮ್ಸ್ ಚಾಂಪಿಯನ್‌ಗಳು ಸೇರಿದಂತೆ ಭಾರತದ ಅಗ್ರಮಾನ್ಯ ಕುಸ್ತಿಪಟುಗಳನ್ನು ಬಂಧನಕ್ಕೊಳಪಡಿಸಲಾಗಿದೆ ಎಂದು ಭಾನುವಾರ ತಿಳಿದುಬಂದಿದೆ.

ನವದೆಹಲಿ: ನೂತನವಾಗಿ ಉದ್ಘಾಟನೆಗೊಂಡ ಸಂಸತ್ ಭವನದ ಹೊರಗೆ ಪ್ರತಿಭಟನೆ ನಡೆಸಲು ಯತ್ನಿಸಿದ ಒಲಿಂಪಿಯನ್‌ಗಳು ಮತ್ತು ಕಾಮನ್‌ವೆಲ್ತ್ ಗೇಮ್ಸ್ ಚಾಂಪಿಯನ್‌ಗಳು ಸೇರಿದಂತೆ ಭಾರತದ ಅಗ್ರಮಾನ್ಯ ಕುಸ್ತಿಪಟುಗಳನ್ನು ಬಂಧನಕ್ಕೊಳಪಡಿಸಲಾಗಿದೆ ಎಂದು ಭಾನುವಾರ ತಿಳಿದುಬಂದಿದೆ.
ಲೈಂಗಿಕ ಕಿರುಕುಳ ಮತ್ತು ಬೆದರಿಕೆ ಆರೋಪದ ಮೇಲೆ ಕುಸ್ತಿ ಫೆಡರೇಶನ್ ಆಫ್ ಇಂಡಿಯಾ ಅಧ್ಯಕ್ಷ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಬಂಧಿಸಬೇಕೆಂದು ಪಟ್ಟುಹಿಡಿದು ಹಲವು ದಿನಗಳಿಂದಲೂ ಪ್ರತಿಭಟನೆ ನಡೆಸುತ್ತಿದ್ದಾರೆ.
ನೂತನ ಸಂಸತ್ ಭವನ ಉದ್ಘಾಟನೆ ವೇಳೆ ಕುಸ್ತಿಪಟುಗಳು ಪ್ರತಿಭಟನೆ ನಡೆಸುವ ಸಾಧ್ಯತೆಗಳಿದ್ದ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿತ್ತು. ಇದರಂತೆ ದೆಹಲಿ ಮೆಟ್ರೋದ ಕೇಂದ್ರ ಸಚಿವಾಲಯ ಮತ್ತು ಉದ್ಯೋಗ್ ಭವನ ನಿಲ್ದಾಣಗಳಲ್ಲಿನ ಎಲ್ಲಾ ಪ್ರವೇಶ ಮತ್ತು ನಿರ್ಗಮನ ಗೇಟ್‌ಗಳನ್ನು ಅಧಿಕಾರಿಗಳು ಬಂದ್ ಮಾಡಿದ್ದರು.
ಪ್ರತಿಭಟನೆಗೆ ನಿರಾಕರಿಸಿದರೂ ಹಿಂಜರಿದ ಕುಸ್ತಿಪಟುಗಳು ಪ್ರತಿಭಟನೆ ಆರಂಭಿಸಿದ್ದರು. ಈ ಹಿನ್ನೆಲೆಯಲ್ಲಿ ಭದ್ರತೆಗೆ ನಿಯೋಜನೆಗೊಂಡಿದ್ದ ಪೊಲೀಸರು ಕುಸ್ತಿಪಟುಗಳು ಸೇರಿದಂತೆ ಹಲವನ್ನು ಬಂಧನಕ್ಕೊಳಪಡಿಸಿದ್ದಾರೆಂದು ತಿಳಿದುಬಂದಿದೆ.
ನಾವು ನಮ್ಮ ಕ್ರೀಡಾಪಟುಗಳನ್ನು ಗೌರವಿಸುತ್ತೇವೆ. ಆದರೆ, ಉದ್ಘಾಟನೆಯಲ್ಲಿ ಯಾವುದೇ ಸಮಸ್ಯೆಗಳಾಗಲು ನಾವು ಬಿಡುವುದಿಲ್ಲ ಎಂದು ಕಾನೂನು ಮತ್ತು ಸುವ್ಯವಸ್ಥೆಯ ವಿಶೇಷ ಪೊಲೀಸ್ ಆಯುಕ್ತ ದೇಪೇಂದ್ರ ಪಾಠಕ್ ಅವರು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


