ಹೊಸ ಸಂಸತ್ ಭವನ ಉದ್ಘಾಟನೆ ಒಂದು ಧಾರ್ಮಿಕ ಕಾರ್ಯಕ್ರಮವಾಗಿತ್ತು: ಕೇರಳ ಸಿಎಂ ಪಿಣರಾಯಿ
ಭಾರತೀಯ ಜನತಾ ಪಕ್ಷದ ನೇತೃತ್ವದ ಕೇಂದ್ರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು, ಹೊಸ ಸಂಸತ್ ಭವನ ಉದ್ಘಾಟನಾ ಸಮಾರಂಭ ದೇಶದಲ್ಲಿ "ಪ್ರಜಾಪ್ರಭುತ್ವದ ಮೇಲೆ...

ತಿರುವನಂತಪುರಂ: ಭಾರತೀಯ ಜನತಾ ಪಕ್ಷದ ನೇತೃತ್ವದ ಕೇಂದ್ರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು, ಹೊಸ ಸಂಸತ್ ಭವನ ಉದ್ಘಾಟನಾ ಸಮಾರಂಭ ದೇಶದಲ್ಲಿ "ಪ್ರಜಾಪ್ರಭುತ್ವದ ಮೇಲೆ ನಡೆಯುತ್ತಿರುವ ದಾಳಿಗೆ" ಮತ್ತೊಂದು ಉದಾಹರಣೆಯಾಗಿದೆ ಎಂದು ಹೇಳಿದ್ದಾರೆ.
ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಕೇರಳ ಸಿಎಂ, ಇಂದು ಉದ್ದೇಶಪೂರ್ವಕವಾಗಿ ಪ್ರಜಾಪ್ರಭುತ್ವದ ಮೇಲೆ ದಾಳಿ ಮಾಡುವ ಯತ್ನಗಳು ನಡೆಯುತ್ತಿದ್ದು, ಸಂಸತ್ತಿನ ಉದ್ಘಾಟನಾ ಸಮಾರಂಭವೇ ಇದಕ್ಕೆ ಅತ್ಯುತ್ತಮ ಉದಾಹರಣೆಯಾಗಿದೆ ಎಂದರು.
ನಮ್ಮ ದೇಶದಲ್ಲಿ ಜಾತ್ಯತೀತತೆ ಮೇಲೆ ದಾಳಿ ನಡೆಯುತ್ತಿದೆ. ಭಾರತ ಜಾತ್ಯತೀತ ರಾಷ್ಟ್ರ ಎಂಬುದನ್ನು ಒಪ್ಪಲು ಆರ್‌ಎಸ್‌ಎಸ್ ಸಿದ್ಧವಿಲ್ಲ. ಆದ್ದರಿಂದ ಅವರು ಭಾರತವನ್ನು ಧಾರ್ಮಿಕ ದೇಶವಾಗಿ ಬದಲಾಯಿಸಲು ಬಯಸುತ್ತಾರೆ. ಸಂಸತ್ತಿನಲ್ಲಿ ಧಾರ್ಮಿಕ ಸಮಾರಂಭ ನಡೆಯಬಾರದು ಎಂದು ಕೇರಳ ಸಿಎಂ ವಿಜಯನ್ ಹೇಳಿದ್ದಾರೆ.
ಪ್ರಜಾಸತ್ತಾತ್ಮಕ ಸರ್ಕಾರದಲ್ಲಿ ಸಂಸತ್ತಿನಲ್ಲಿ ನಿರ್ದಿಷ್ಟ ಧರ್ಮದ ಧಾರ್ಮಿಕ ಕಾರ್ಯಕ್ರಮ ನಡೆಯಬಾರದು. ಇದು ಜಾತ್ಯತೀತ ರಾಷ್ಟ್ರಕ್ಕೆ ಹೊಂದಿಕೆಯಾಗುವುದಿಲ್ಲ. ದೇಶ ಸಂದಿಗ್ಧ ಕಾಲವನ್ನು ಎದುರಿಸುತ್ತಿದೆ ಎಂದು ಪಿಣರಾಯಿ ವಿಜಯನ್ ಕಳವಳ ವ್ಯಕ್ತಪಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


