ದೆಹಲಿ ಅಬಕಾರಿ ಹಗರಣ: ಮನೀಶ್ ಸಿಸೋಡಿಯಾ ಜಾಮೀನು ಅರ್ಜಿ ತಿರಸ್ಕೃತ
ದೆಹಲಿ ಅಬಕಾರಿ ನೀತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ಸಂಸ್ಥೆ (ಸಿಬಿಐ) ಪ್ರಕರಣದಲ್ಲಿ ದೆಹಲಿ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರಿಗೆ ದೆಹಲಿ ಹೈಕೋರ್ಟ್ ಮಂಗಳವಾರ ಜಾಮೀನು ನಿರಾಕರಿಸಿದೆ.

ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ಸಂಸ್ಥೆ (ಸಿಬಿಐ) ಪ್ರಕರಣದಲ್ಲಿ ದೆಹಲಿ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರಿಗೆ ದೆಹಲಿ ಹೈಕೋರ್ಟ್ ಮಂಗಳವಾರ ಜಾಮೀನು ನಿರಾಕರಿಸಿದೆ.
ಜಾಮೀನು ಅರ್ಜಿಯನ್ನು ವಜಾಗೊಳಿಸಿದ ನ್ಯಾಯಮೂರ್ತಿ ದಿನೇಶ್ ಕುಮಾರ್ ಶರ್ಮಾ ನೇತೃತ್ವದ ಏಕಸದಸ್ಯ ಪೀಠ, ಮನೀಶ್ ಸಿಸೋಡಿಯಾ ವಿರುದ್ಧದ ಆರೋಪಗಳು ಗಂಭೀರವಾಗಿವೆ ಎಂದು ಹೇಳಿದೆ.
ಜಾಮೀನು ಅರ್ಜಿಯ ಕುರಿತು ತೀರ್ಪು ಪ್ರಕಟಿಸಿದ ಹೈಕೋರ್ಟ್, ಸಿಸೋಡಿಯಾ ಪ್ರಭಾವಿ ವ್ಯಕ್ತಿಯಾಗಿದ್ದು, ಜಾಮೀನಿನ ಮೇಲೆ ಬಿಡುಗಡೆಯಾದರೆ ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆಯನ್ನು ತಳ್ಳಿಹಾಕಲು ಸಾಧ್ಯವಿಲ್ಲ ಎಂದು ಹೇಳಿದೆ.
ಈ ನಡುವೆ ಅಬಕಾರಿ ನೀತಿ ಹಗರಣದ ಪ್ರಕರಣದಲ್ಲಿ ಜಾಮೀನು ನೀಡಲು ದೆಹಲಿ ಹೈಕೋರ್ಟ್ ನಿರಾಕರಿಸಿದ್ದು, ಈ ಆದೇಶ ಪ್ರಶ್ನಿಸಿ ಸಿಸೋಡಿಯಾ ಅವರು ಸುಪ್ರೀಂಕೋರ್ಟ್ ಮೆಟ್ಟಿಲೇರಲು ನಿರ್ಧರಿಸಿದ್ದಾರೆಂದು ಮೂಲಗಳಿಂದ ತಿಳಿದುಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


