ದೇಶ

ದೆಹಲಿ ಐಐಟಿಯ ಬಿಟೆಕ್ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು 

ದೆಹಲಿಯ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ(ಐಐಟಿ)ಯ ನಾಲ್ಕನೇ ವರ್ಷದ ಬಿಟೆಕ್ ವಿದ್ಯಾರ್ಥಿ ಪ್ರಣವ್ ಜೈನ್ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಮೂಲಗಳು ಖಚಿತಪಡಿಸಿವೆ.

ದೆಹಲಿ ಐಐಟಿಯ ಬಿಟೆಕ್ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು 
ಸಾಂದರ್ಭಿಕ ಚಿತ್ರ
Published On :

ನವದೆಹಲಿ: ದೆಹಲಿಯ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ(ಐಐಟಿ)ಯ ನಾಲ್ಕನೇ ವರ್ಷದ ಬಿಟೆಕ್ ವಿದ್ಯಾರ್ಥಿ ಪ್ರಣವ್ ಜೈನ್ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಮೂಲಗಳು ಖಚಿತಪಡಿಸಿವೆ. 

ದೆಹಲಿ ನಿವಾಸಿಯಾಗಿರುವ ಪ್ರಣವ್ ಅವರು ತಮ್ಮ ನಿವಾಸದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.

ಈ ಸಂಬಂಧ ದೆಹಲಿ ಐಐಟಿಯನ್ನು ಸಂಪರ್ಕಿಸಿದಾಗ, ಇನ್ಸ್ಟಿಟ್ಯೂಟ್ ಗೆ ಸಾವಿನ ಬಗ್ಗೆ ಮಾಹಿತಿ ಇಲ್ಲ. ಅನಾಮಧೇಯ ವಿದ್ಯಾರ್ಥಿಯೊಬ್ಬರು ಮಾಹಿತಿ ನೀಡಿದ್ದಾರೆ. ಆದರೆ ಈ ಘಟನೆ ಅವರ ಮನೆಯಲ್ಲಿ ನಡೆದಿರುವುದರಿಂದ ಹೆಚ್ಚಿನ ಜನರಿಗೆ, ವಿಶೇಷವಾಗಿ ಸಂಸ್ಥೆಗೆ ಮಾಹಿತಿ ಇಲ್ಲ" ಎಂದಿದ್ದಾರೆ.

ವಿಂದ್ಯಾಂಚಲ್ ಹಾಸ್ಟೆಲ್‌ನಲ್ಲಿ ವಾಸಿಸುತ್ತಿದ್ದ ಬಿಟೆಕ್ ವಿದ್ಯಾರ್ಥಿ ಪ್ರಣವ್ ಜೈನ್ ತನ್ನ ಪ್ರಾಣ ಕಳೆದುಕೊಂಡಿರುವ ಹೃದಯ ವಿದ್ರಾವಕ ಸುದ್ದಿಯನ್ನು ನಾವು ಕೇಳುತ್ತಿದ್ದೇವೆ ಎಂದು VoiceofIITD ಇಂದು ಸಂಜೆ ಟ್ವೀಟ್ ಮಾಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.