ಅಶೋಕ್ ಗೆಹ್ಲೋಟ್ ಬಳಿಕ ರಾಜಸ್ಥಾನ ಕಾಂಗ್ರೆಸ್ ಅಧ್ಯಕ್ಷರ ಪುತ್ರರಿಗೂ ಇಡಿ ಸಮನ್ಸ್!
ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ಪುತ್ರನಿಗೆ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿಗೊಳಿಸಿದ ಬೆನ್ನಲ್ಲೇ ರಾಜಸ್ಥಾನ ಕಾಂಗ್ರೆಸ್ ಅಧ್ಯಕ್ಷ ಗೋವಿಂದ್ ಸಿಂಗ್ ದೊಸ್ತಾರಾ ಅವರ ಇಬ್ಬರು ಪುತ್ರರಿಗೂ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿ ಮಾಡಿದೆ.

ಜೈಪುರ: ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ಪುತ್ರನಿಗೆ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿಗೊಳಿಸಿದ ಬೆನ್ನಲ್ಲೇ ರಾಜಸ್ಥಾನ ಕಾಂಗ್ರೆಸ್ ಅಧ್ಯಕ್ಷ ಗೋವಿಂದ್ ಸಿಂಗ್ ದೊಸ್ತಾರಾ ಅವರ ಇಬ್ಬರು ಪುತ್ರರಿಗೂ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿ ಮಾಡಿದೆ.
ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಅಭಿಲಾಶ್ ಹಾಗೂ ಅವಿನಾಶ್ ಗೆ ನ.7-9 ರಂದು ಹಾಜರಾಗುವಂತೆ ನೊಟೀಸ್ ನಲ್ಲಿ ತಿಳಿಸಲಾಗಿದೆ.
ಅ.26 ರಂದು ಜಾರಿ ನಿರ್ದೇಶನಾಲಯ ದೊತ್ಸಾರಾ ಹಾಗೂ ಅವರ ಪುತ್ರರಿಗೆ ಸಂಬಂಧಿಸಿದ ಆಸ್ತಿಗಳ ಮೇಲೆ ದಾಳಿ ನಡೆಸಿತ್ತು. ಕಾಂಗ್ರೆಸ್ ಪಕ್ಷ ಇದಕ್ಕೆ ತೀಕ್ಷ್ಣವಾಗಿ ಪ್ರತಿಕ್ರಿಯೆ ನೀಡಿತ್ತು.
ದೋತಸ್ರಾ ಅವರ ಜೈಪುರ ಮತ್ತು ಸಿಕರ್ ನಿವಾಸಗಳು ಮತ್ತು ಅವರ ರಾಜಕೀಯ ಕಚೇರಿಯ ಹೊರತಾಗಿ, ಅದೇ ಆವರಣದಲ್ಲಿ ವಾಸಿಸುವ ಅವರ ಇಬ್ಬರು ಪುತ್ರರ ನಿವಾಸವನ್ನೂ ಇಡಿ ಶೋಧಿಸಿತ್ತು.
ಈ ಬಾರಿ ರಾಜಸ್ಥಾನ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಕಣಕ್ಕಿಳಿದಿರುವ ಸ್ವತಂತ್ರ ಶಾಸಕ ಓಂ ಪ್ರಕಾಶ್ ಹುದ್ಲಾ ಕೂಡ ಇ.ಡಿ ಪರಿಶೀಲನೆಗೆ ಒಳಗಾಗಿದ್ದಾರೆ.
ನಾಗರಿಕ ಸೇವೆಗಳು ಮತ್ತು ರಾಜ್ಯ ನಾಗರಿಕ ಸೇವೆಗಳಿಗೆ ವಿದ್ಯಾರ್ಥಿಗಳನ್ನು ತಯಾರಿ ಮಾಡುವ ಸಿಕಾರ್‌ನಲ್ಲಿರುವ ಕಲಾಂ ಅಕಾಡೆಮಿಯ ಆವರಣವನ್ನು ಇಡಿ ಶೋಧಿಸಿದೆ. ಕಲಾಂ ಅಕಾಡೆಮಿಗೂ ತನಗೂ ಯಾವುದೇ ಸಂಬಂಧವಿಲ್ಲ ಎಂದು ದೋತಸ್ರಾ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


