ಇಡಿ ಸಮನ್ಸ್‌ನ ಕಾನೂನುಬದ್ಧತೆ ಪ್ರಶ್ನಿಸಿದ ಕೇಜ್ರಿವಾಲ್; ನೋಟಿಸ್ ಹಿಂಪಡೆಯುವಂತೆ ದೆಹಲಿ ಸಿಎಂ ಪತ್ರ
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು, ಅಬಕಾರಿ ನೀತಿ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ತಮಗೆ ನೀಡಿರುವ ಸಮನ್ಸ್‌ನ ಕಾನೂನುಬದ್ಧತೆಯನ್ನು ಪ್ರಶ್ನಿಸಿದ್ದಾರೆ.

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು, ಅಬಕಾರಿ ನೀತಿ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ತಮಗೆ ನೀಡಿರುವ ಸಮನ್ಸ್‌ನ ಕಾನೂನುಬದ್ಧತೆಯನ್ನು ಪ್ರಶ್ನಿಸಿದ್ದಾರೆ.
ತನ್ನ ಮುಂದೆ ವಿಚಾರಣೆಗೆ ಹಾಜರಾಗುವಂತೆ ಇಡಿ ಅಕ್ಟೋಬರ್ 30 ರಂದು ದೆಹಲಿ ಸಿಎಂ ಕೇಜ್ರಿವಾಲ್ ಅವರಿಗೆ ಸಮನ್ಸ್ ನೀಡಿದೆ. ಈ ಸಮನ್ಸ್ ಕಾನೂನುಬಾಹಿರ ಮತ್ತು ರಾಜಕೀಯ ಪ್ರೇರಿತ ಎಂದಿರುವ ದೆಹಲಿ ಸಿಎಂ, ನೋಟಿಸ್ ಹಿಂಪಡೆಯುವಂತೆ ಕೇಂದ್ರ ತನಿಖಾ ಸಂಸ್ಥೆಗೆ ಪತ್ರ ಬರೆದು ಆಗ್ರಹಿಸಿದ್ದಾರೆ.
ನಾಲ್ಕು ರಾಜ್ಯಗಳ ವಿಧಾನಸಭೆ ಚುನಾವಣಾ ಪ್ರಚಾರಕ್ಕೆ ನಾನು ಹೋಗದಂತೆ ತಡೆಯಲು, ಬಿಜೆಪಿ ಒತ್ತಾಯದ ಮೆರೆಗೆ ನನಗೆ ನೋಟಿಸ್ ಕಳುಹಿಸಲಾಗಿದೆ. ಇಡಿ ತಕ್ಷಣ ಈ ನೋಟಿಸ್ ಅನ್ನು ಹಿಂಪಡೆಯಬೇಕು ಎಂದು ಕೇಜ್ರಿವಾಲ್ ಹೇಳಿದ್ದಾರೆ.
ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಇಂದು ಬೆಳಗ್ಗೆ 11 ಗಂಟೆಗೆ ದೆಹಲಿಯ ತನಿಖಾ ಸಂಸ್ಥೆಯ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಇಡಿ, ಅರವಿಂದ್ ಕೇಜ್ರಿವಾಲ್ ಅವರಿಗೆ ಸಮನ್ಸ್ ನೀಡಿದೆ.
ಆಡಳಿತಾರೂಢ ಆಮ್ ಆದ್ಮಿ ಪಕ್ಷ(ಎಎಪಿ)ದ ಮೂಲಗಳ ಪ್ರಕಾರ, ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಇಂದು ಇಡಿ ಮುಂದೆ ವಿಚಾರಣೆಗೆ ಹಾಜರಾಗುವುದಿಲ್ಲ. ಮಧ್ಯ ಪ್ರದೇಶ ಚುನಾವಣಾ ಪ್ರಚಾರಕ್ಕೆ ತೆರಳಲಿದ್ದಾರೆ.
"ಅವರು ಮಧ್ಯಪ್ರದೇಶದ ಸಿಂಗ್ರೌಲಿಗೆ ಹೋಗಲಿದ್ದು, ಅಲ್ಲಿ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರೊಂದಿಗೆ ರೋಡ್ ಶೋನಲ್ಲಿ ಭಾಗವಹಿಸಲಿದ್ದಾರೆ. ಸ್ವಲ್ಪ ಸಮಯದ ನಂತರ ಅವರು ಮಧ್ಯಪ್ರದೇಶಕ್ಕೆ ತೆರಳಲಿದ್ದಾರೆ" ಎಂದು ಪಕ್ಷದ ಮೂಲಗಳು ತಿಳಿಸಿವೆ.
"ಕೇಜ್ರಿವಾಲ್ ಅವರು ಮಧ್ಯಪ್ರದೇಶದ ಸಿಂಗ್ರೌಲಿಗೆ ಹೋಗಲಿದ್ದು, ಅಲ್ಲಿ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರೊಂದಿಗೆ ರೋಡ್ ಶೋನಲ್ಲಿ ಭಾಗವಹಿಸಲಿದ್ದಾರೆ. ಇನ್ನು ಸ್ವಲ್ಪ ಸಮಯದಲ್ಲೇ ಅವರು ಮಧ್ಯಪ್ರದೇಶಕ್ಕೆ ತೆರಳಲಿದ್ದಾರೆ" ಎಂದು ಪಕ್ಷದ ಮೂಲಗಳು ತಿಳಿಸಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


