ನೇಪಾಳದಲ್ಲಿ ಪ್ರಬಲ ಭೂಕಂಪ: ಉತ್ತರ ಭಾರತದಲ್ಲೂ ಭೂಮಿ ಕಂಪಿಸಿದ ಅನುಭವ
ನೇಪಾಳದಲ್ಲಿ ಪ್ರಬಲ ಭೂಕಂಪ ಸಂಭವಿಸಿದ್ದು, ರಿಕ್ಟಾರ್ ಮಾಪಕದಲ್ಲಿ 6.4 ತೀವ್ರತೆ ದಾಖಲಾಗಿದೆ.

ನವದೆಹಲಿ: ನೇಪಾಳದಲ್ಲಿ ಪ್ರಬಲ ಭೂಕಂಪ ಸಂಭವಿಸಿದ್ದು, ರಿಕ್ಟಾರ್ ಮಾಪಕದಲ್ಲಿ 6.4 ತೀವ್ರತೆ ದಾಖಲಾಗಿದೆ.
ಭೂಕಂಪ ಉತ್ತರ ಭಾರತದಲ್ಲಿಯೂ ಅನುಭವನಕ್ಕೆ ಬಂದಿದ್ದು, ದೆಹಲಿ ಎನ್ ಸಿಆರ್ ಸೇರಿದಂತೆ ಹಲವೆಡೆ ಕಂಪನದ ಅನುಭವವಾಗಿದೆ ಎಂದು ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರ ತಿಳಿಸಿದೆ.
ಭೂಕಂಪದ ಕೇಂದ್ರಬಿಂದು ನೇಪಾಳದಲ್ಲಿ 10 ಕಿ.ಮೀ ಆಳದಲ್ಲಿದೆ ಎಂದು ಎನ್‌ಸಿಎಸ್ ತಿಳಿಸಿದೆ. ದೆಹಲಿ ಮತ್ತು ರಾಷ್ಟ್ರೀಯ ರಾಜಧಾನಿ ಪ್ರದೇಶದಲ್ಲಿ (ಎನ್‌ಸಿಆರ್) ಜನರು ಬಲವಾದ ಕಂಪನವನ್ನು ಅನುಭವಿಸಿದ ಪರಿಣಾಮ ತಮ್ಮ ಮನೆಗಳಿಂದ ಹೊರಗೆ ಧಾವಿಸಿದರು. ನೇಪಾಳದಲ್ಲಿ ಪ್ರಬಲ ಭೂಕಂಪ ಸಂಭವಿಸಿದ್ದು ಒಂದು ತಿಂಗಳಲ್ಲಿ ಇದು ಮೂರನೇ ಬಾರಿ ಸಂಭವಿಸಿರುವ ಭೂಕಂಪವಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


