ಮಹಾರಾಷ್ಟ್ರದ ಔಷಧಿ ಕಾರ್ಖಾನೆಯಲ್ಲಿ ಭಾರಿ ಅಗ್ನಿ ಅವಘಡ; ಎಂಟು ಮಂದಿ ಸಾವು, ಮೂವರು ನಾಪತ್ತೆ
ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಔಷಧ ಕಾರ್ಖಾನೆಯೊಂದರಲ್ಲಿ ಶುಕ್ರವಾರ ಸಂಭವಿಸಿದ ಭಾರಿ ಅಗ್ನಿ ಅವಘಡದಲ್ಲಿ ಎಂಟು ಮಂದಿ ಸಜೀವ ದಹನವಾಗಿದ್ದು, ಮೂವರು ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.

ರಾಯಗಢ: ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಔಷಧ ಕಾರ್ಖಾನೆಯೊಂದರಲ್ಲಿ ಶುಕ್ರವಾರ ಸಂಭವಿಸಿದ ಭಾರಿ ಅಗ್ನಿ ಅವಘಡದಲ್ಲಿ ಎಂಟು ಮಂದಿ ಸಜೀವ ದಹನವಾಗಿದ್ದು, ಮೂವರು ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.
ರಾಯಗಢದ ಮಹಾಡ್ ಎಂಐಡಿಸಿಯಲ್ಲಿರುವ ಬ್ಲೂ ಜೆಟ್ ಹೆಲ್ತ್‌ಕೇರ್‌ನಲ್ಲಿ ಬೆಳಗ್ಗೆ 11 ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ ಎಂದು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ(ಎನ್‌ಡಿಆರ್‌ಎಫ್) ಅಧಿಕಾರಿ ತಿಳಿಸಿದ್ದಾರೆ.
"ಇಂದು ಸಂಜೆ 5 ಗಂಟೆಯವರೆಗೆ ಒಟ್ಟು ಎಂಟು ಮೃತದೇಹಗಳು ಪತ್ತೆಯಾಗಿವೆ. ಇನ್ನೂ ಮೂವರು ನಾಪತ್ತೆಯಾಗಿದ್ದು, ಅವರಿಗಾಗಿ ಶೋಧ ಕಾರ್ಯ ನಡೆಯುತ್ತಿದೆ ಎಂದು ಅಧಿಕಾರಿ ಹೇಳಿದ್ದಾರೆ.
ಪ್ರಾಥಮಿಕ ತನಿಖೆಯ ಪ್ರಕಾರ, ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿರಬಹುದು. ಇದು ಸ್ಥಳದಲ್ಲಿದ್ದ ರಾಸಾಯನಿಕ ತುಂಬಿದ ಬ್ಯಾರೆಲ್‌ಗಳು ಸ್ಫೋಟಗೊಳ್ಳಲು ಕಾರಣವಾಗಿದೆ ಮತ್ತು ಬೆಂಕಿಯನ್ನು ಮತ್ತಷ್ಟು ತೀವ್ರಗೊಳಿಸಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


