ರಾಜಸ್ಥಾನ ಚುನಾವಣೆ: 23 ಅಭ್ಯರ್ಥಿಗಳ 6ನೇ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್
ಮುಂಬರುವ ರಾಜಸ್ಥಾನ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ತನ್ನ 23 ಅಭ್ಯರ್ಥಿಗಳ ಆರನೇ ಪಟ್ಟಿಯನ್ನು ಶನಿವಾರ ಬಿಡುಗಡೆ ಮಾಡಿದೆ. ರಾಜಸ್ಥಾನದಲ್ಲಿ ನವೆಂಬರ್ 25 ರಂದು ಚುನಾವಣೆ ನಡೆಯಲಿದ್ದು, ಡಿಸೆಂಬರ್ 3 ರಂದು ಫಲಿತಾಂಶ...

ನವದೆಹಲಿ: ಮುಂಬರುವ ರಾಜಸ್ಥಾನ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ತನ್ನ 23 ಅಭ್ಯರ್ಥಿಗಳ ಆರನೇ ಪಟ್ಟಿಯನ್ನು ಶನಿವಾರ ಬಿಡುಗಡೆ ಮಾಡಿದೆ. ರಾಜಸ್ಥಾನದಲ್ಲಿ ನವೆಂಬರ್ 25 ರಂದು ಚುನಾವಣೆ ನಡೆಯಲಿದ್ದು, ಡಿಸೆಂಬರ್ 3 ರಂದು ಫಲಿತಾಂಶ ಪ್ರಕಟವಾಗಲಿದೆ.
ಕಾಂಗ್ರೆಸ್ ತನ್ನ ಹೊಸ ಪಟ್ಟಿಯಲ್ಲಿ, ಅಲ್ವಾರ್ ಅರ್ಬನ್, ಭಿಲ್ವಾರಾ, ಹವಾ ಮಹಲ್, ಪಿಲಾನಿ-ಎಸ್‌ಸಿ, ಭರತ್‌ಪುರ, ಮಲ್ಪುರ, ಫಲೋಡಿ, ಲೋಹಾವತ್ ಸೇರಿದಂತೆ ಕೆಲವು ಪ್ರಮುಖ ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದೆ.
ಸಂಗಾರಿಯಾ ವಿಧಾನಸಭಾ ಕ್ಷೇತ್ರದಿಂದ ಅಭಿಮನ್ಯು ಪೂನಿಯಾ, ಭದ್ರಾ ವಿಧಾನಸಭಾ ಕ್ಷೇತ್ರದಿಂದ ಅಜೀತ್ ಬೇನಿವಾಲ್, ದಂತ ರಾಮಗಢದಿಂದ ವೀರೇಂದ್ರ ಸಿಂಗ್ ಅವರನ್ನು ಕಾಂಗ್ರೆಸ್ ಕಣಕ್ಕಿಳಿಸಿದೆ.
ಅಹೋರ್‌ನಿಂದ ಸರೋಜ್ ಚೌಧರಿ, ಲಾಡ್‌ಪುರದಿಂದ ನೈಮುದ್ದೀನ್ ಗುಡ್ಡು, ಸೂರ್‌ಸಾಗರ್‌ನಿಂದ ಶಹಜದ್ ಖಾನ್, ಶೇರ್ಹಾರ್ ವಿಧಾನಸಭಾ ಕ್ಷೇತ್ರದಿಂದ ಮೀನಾ ಕನ್ವರ್ ಅವರನ್ನು ಕಣಕ್ಕಿಳಿಸಿದೆ.
ಇಂದು ಘೋಷಿಸಿದ 23 ಅಭ್ಯರ್ಥಿಗಳೊಂದಿಗೆ ಮತ್ತು ಆರ್ ಎಲ್ ಡಿಯ ಒಂದು ಅಭ್ಯರ್ಥಿ ಸೇರಿದಂತೆ ಕಾಂಗ್ರೆಸ್ ಇದುವರೆಗೆ 179 ಅಭ್ಯರ್ಥಿಗಳನ್ನು ಘೋಷಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


