ಬಿಹಾರ ಜಾತಿ ಗಣತಿಯಲ್ಲಿ ಮುಸ್ಲಿಂ, ಯಾದವರ ಸಂಖ್ಯೆ ಹೆಚ್ಚು ತೋರಿಸಲಾಗಿದೆ: ಅಮಿತ್ ಶಾ
ಬಿಹಾರ ಜಾತಿ ಗಣತಿ ವಿಷಯವಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಬಿಹಾರದ ನಿತೀಶ್ ಕುಮಾರ್ ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.

ಪಾಟ್ನಾ: ಬಿಹಾರ ಜಾತಿ ಗಣತಿ ವಿಷಯವಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಬಿಹಾರದ ನಿತೀಶ್ ಕುಮಾರ್ ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.
ಬಿಹಾರ ಸರ್ಕಾರ ತನ್ನ ತುಷ್ಟೀಕರಣ ರಾಜಕಾರಣದ ಭಾಗವಾಗಿ ಮುಸ್ಲಿಮರು ಹಾಗೂ ಯಾದವರ ಜನಸಂಖ್ಯೆಯನ್ನು ಉದ್ದೇಶಪೂರ್ವಕವಾಗಿ ಹೆಚ್ಚು ತೋರಿಸಿದೆ ಎಂದು ಅಮಿತ್ ಶಾ ಗಂಭೀರ ಆರೋಪ ಮಾಡಿದ್ದಾರೆ.
ಮುಜಾಫರ್ ಜಿಲ್ಲೆಯಲ್ಲಿ ರ್ಯಾಲಿಯೊಂದನ್ನು ಉದ್ದೇಶಿಸಿ ಮಾತನಾಡಿದ ಅಮಿತ್ ಶಾ, ರಾಜ್ಯದಲ್ಲಿ ಜಾತಿ ಗಣತಿ ನಡೆಸಲು , ನಿತೀಶ್ ಕುಮಾರ್ ಅವರ ಸಂಯುಕ್ತ ಜನತಾದಳ ಎನ್ ಡಿಎ ಮಿತ್ರಪಕ್ಷವಾಗಿದ್ದಾಗ ತೀರ್ಮಾನ ತೆಗೆದುಕೊಳ್ಳಲಾಗಿತ್ತು ಎಂದು ಅಮಿತ್ ಶಾ ಹೇಳಿದ್ದಾರೆ.
ಕಳೆದ ವರ್ಷ ಜೆಡಿಯು ಬಿಜೆಪಿ ಜೊತೆ ಮೈತ್ರಿ ಮುರಿದುಕೊಂಡು ಕಾಂಗ್ರೆಸ್, ಆರ್ ಜೆಡಿ, ಎಡಪಕ್ಷಗಳ ಮಹಾಘಟಬಂಧನ್ ಜೊತೆ ಸೇರಿ ಮತ್ತೆ ಸರ್ಕಾರ ರಚಿಸಿದ್ದರು.
ವಿಪಕ್ಷಗಳ ಮೈತ್ರಿಕೂಟ INDIA ವಿರುದ್ಧ ವಾಗ್ದಾಳಿ ನಡೆಸಿರುವ ಅಮಿತ್ ಶಾ, ಈ ಮೈತ್ರಿಕೂಟದ ಒಂದೇ ಒಂದು ಉದ್ದೇಶ ಅಂದರೆ ಅದು ಪ್ರಧಾನಿ ಮೋದಿ ಅವರನ್ನು ವಿರೋಧಿಸುವುದಾಗಿದೆ ಎಂದು ಆರೋಪಿಸಿದ್ದಾರೆ.
"ನಿತೀಶ್ ಕುಮಾರ್ ಮುಂದಿನ ಪ್ರಧಾನಿಯಾಗುವ ಕನಸು ಕಾಣುವುದನ್ನು ನಿಲ್ಲಿಸಬೇಕು. ವಿಪಕ್ಷಗಳ ಮೈತ್ರಿಕೂಟ ಅವರನ್ನು ಅದರ ಸಂಚಾಲಕನನ್ನಾಗಿ ಕೂಡಾ ಮಾಡಲಿಲ್ಲ" ಎಂದು ಅಮಿತ್ ಶಾ ಟೀಕಾ ಪ್ರಹಾರ ನಡೆಸಿದ್ದಾರೆ.
ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಬಿಹಾರದ ಎಲ್ಲಾ 40 ಸ್ಥಾನಗಳನ್ನು ಬಿಜೆಪಿ ಗೆಲ್ಲಲಿದೆ ಎಂದು ಅಮಿತ್ ಶಾ ವಿಶ್ವಾಸ ವ್ಯಕ್ತಪಡಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


