ಛತ್ತೀಸ್‌ಗಢ: ಆಕಸ್ಮಿಕವಾಗಿ ಗ್ರೆನೇಡ್ ಸ್ಫೋಟ, ಚುನಾವಣಾ ಕರ್ತವ್ಯದಲ್ಲಿದ್ದ ಬಿಎಸ್‌ಎಫ್ ಯೋಧ ಸಾವು
ಛತ್ತೀಸ್‌ಗಢದ ದಾಂತೇವಾಡ ಜಿಲ್ಲೆಯಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಗಡಿ ಭದ್ರತಾ ಪಡೆಯ ಯೋಧನೊಬ್ಬ ತನ್ನ ಬಳಿಯಿದ್ದ ಗ್ರೆನೇಡ್ ಆಕಸ್ಮಿಕವಾಗಿ ಸ್ಫೋಟಗೊಂಡ ಪರಿಣಾಮ ಮೃತಪಟ್ಟಿದ್ದಾರೆ ಎಂದು ಪೊಲೀಸರು...

ದಾಂತೇವಾಡ: ಛತ್ತೀಸ್‌ಗಢದ ದಾಂತೇವಾಡ ಜಿಲ್ಲೆಯಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಗಡಿ ಭದ್ರತಾ ಪಡೆಯ ಯೋಧನೊಬ್ಬ ತನ್ನ ಬಳಿಯಿದ್ದ ಗ್ರೆನೇಡ್ ಆಕಸ್ಮಿಕವಾಗಿ ಸ್ಫೋಟಗೊಂಡ ಪರಿಣಾಮ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಚುನಾವಣಾ ಕರ್ತವ್ಯಕ್ಕಾಗಿ ಕಾಟೇಕಲ್ಯಾಣ ಪೊಲೀಸ್ ಠಾಣೆಯಲ್ಲಿ ಬೀಡುಬಿಟ್ಟಿದ್ದ ಬಿಎಸ್‌ಎಫ್‌ನ 70ನೇ ಬೆಟಾಲಿಯನ್ ತಂಡ ಶೋಧ ಕಾರ್ಯಾಚರಣೆ ಆರಂಭಿಸಲು ಮುಂದಾದಾಗ ಈ ಸ್ಫೋಟ ಸಂಭವಿಸಿದೆ ಎಂದು ದಾಂತೇವಾಡದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಇದನ್ನು ಓದಿ: ಛತ್ತೀಸ್ ಗಢ: ನಕ್ಸಲರಿಂದ ಬಿಜೆಪಿ ಮುಖಂಡನ ಹತ್ಯೆ
ಪೆಟ್ರೋಲಿಂಗ್ ತಂಡ, ಪೊಲೀಸ್ ಠಾಣೆ ಆವರಣದಿಂದ ಹೊರಗೆ ಹೋಗುತ್ತಿದ್ದಾಗ ಹೆಡ್ ಕಾನ್‌ಸ್ಟೆಬಲ್ ಬಲ್ಬೀರ್ ಚಂದ್ ಅವರು ಧರಿಸಿದ್ದ ಪೌಚ್‌ನಲ್ಲಿದ್ದ ಹ್ಯಾಂಡ್ ಗ್ರೆನೇಡ್ ಸ್ಫೋಟಗೊಂಡಿದೆ ಎಂದು ಅವರು ಹೇಳಿದ್ದಾರೆ.
ಸ್ಫೋಟದಲ್ಲಿ ಚಾಂದ್ ಅವರು ಗಂಭೀರವಾಗಿ ಗಾಯಗೊಂಡಿದ್ದು, ತಕ್ಷಣವೇ ಅವರನ್ನು ದಾಂತೇವಾಡ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿತ್ತು. ಆದರೆ ವೈದ್ಯರು ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಚಂದ್ ಹಿಮಾಚಲ ಪ್ರದೇಶದ ನಿವಾಸಿಯಾಗಿದ್ದು, ಘಟನೆಯ ಬಗ್ಗೆ ಅವರ ಕುಟುಂಬ ಸದಸ್ಯರಿಗೆ ಮಾಹಿತಿ ನೀಡಲಾಗಿದೆ ಎಂದು ಅವರು ಹೇಳಿದ್ದಾರೆ.
ದಾಂತೇವಾಡ ಸೇರಿದಂತೆ ಛತ್ತೀಸ್‌ಗಢದ 20 ವಿಧಾನಸಭಾ ಕ್ಷೇತ್ರಗಳಲ್ಲಿ ನವೆಂಬರ್ 7 ರಂದು ಮೊದಲ ಹಂತದ ಚುನಾವಣೆ ನಡೆಯಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


