ದೆಹಲಿಯಲ್ಲಿ ಮಿತಿಮೀರಿದ ಮಾಲಿನ್ಯ: ಟ್ರಕ್, ವಾಣಿಜ್ಯ ವಾಹನಗಳ ಪ್ರವೇಶ ನಿಷೇಧ
ದೆಹಲಿಯಲ್ಲಿ ವಾಯು ಮಾಲಿನ್ಯ ಮಿತಿ ಮೀರಿದ್ದು, ಸಾರ್ವಜನಿಕ ಯೋಜನೆಗಳಿಗೆ ಸಂಬಂಧಿಸಿದ ನಿರ್ಮಾಣ ಕಾರ್ಯಗಳನ್ನು ಮತ್ತು ಟ್ರಕ್ಗಳು ಹಾಗೂ ವಾಣಿಜ್ಯ ಬಳಕೆ ನಾಲ್ಕು ಚಕ್ರಗಳ ವಾಹನಗಳು ರಾಷ್ಟ್ರ ರಾಜಧಾನಿ ಪ್ರವೇಶ ನಿಷೇಧಿಸಿ...

ನವದೆಹಲಿ: ದೆಹಲಿಯಲ್ಲಿ ವಾಯು ಮಾಲಿನ್ಯ ಮಿತಿ ಮೀರಿದ್ದು, ಸಾರ್ವಜನಿಕ ಯೋಜನೆಗಳಿಗೆ ಸಂಬಂಧಿಸಿದ ನಿರ್ಮಾಣ ಕಾರ್ಯಗಳನ್ನು ಮತ್ತು ಟ್ರಕ್ಗಳು ಹಾಗೂ ವಾಣಿಜ್ಯ ಬಳಕೆ ನಾಲ್ಕು ಚಕ್ರಗಳ ವಾಹನಗಳು ರಾಷ್ಟ್ರ ರಾಜಧಾನಿ ಪ್ರವೇಶ ನಿಷೇಧಿಸಿ ಕೇಂದ್ರ ಸರ್ಕಾರ ಭಾನುವಾರ ಆದೇಶ ಹೊರಡಿಸಿದೆ.
ಕೇಂದ್ರದ ವಾಯುಮಾಲಿನ್ಯ ನಿಯಂತ್ರಣ ಯೋಜನೆ ಅಡಿ ಈಗಾಗಲೇ ಮೂರು ಹಂತದಲ್ಲಿ ನಿಬಂಧನೆಗಳನ್ನು ವಿಧಿಸಲಾಗಿದ್ದು, ಈಗ ನಾಲ್ಕನೇ ಹಂತದ ನಿರ್ಬಂಧಗಳನ್ನು ವಿಧಿಸಲಾಗುತ್ತಿದೆ.
ದೆಹಲಿಯಲ್ಲಿ ಮಾಲಿನ್ಯಕಾರಕ ಟ್ರಕ್ಗಳು ಮತ್ತು ವಾಣಿಜ್ಯ ವಾಹನಗಳ ಸಂಚಾರಕ್ಕೆ ನಿಷೇಧಿಸಲಾಗಿದೆ. ಇತರ ರಾಜ್ಯಗಳ ಸಿಎನ್ಜಿ, ಎಲೆಕ್ಟ್ರಿಕ್, ಬಿಎಸ್ 4 ವಾಹನಗಳಿಗೆ ಮಾತ್ರ ದೆಹಲಿಯನ್ನು ಪ್ರವೇಶಿಸಲು ಅನುಮತಿ ನೀಡಲಾಗಿದೆ.
ಇನ್ನು ಸರ್ಕಾರಿ ಮತ್ತು ಖಾಸಗಿ ಕಚೇರಿಗಳಿಗೆ ಶೇ. 50 ರಷ್ಟು ಸಿಬ್ಬಂದಿಯೊಂದಿಗೆ ಕಾರ್ಯನಿರ್ವಹಿಸಲು ಕೇಂದ್ರ ನಿರ್ದೇಶಿಸಿದೆ. ಉಳಿದ ಶೇ. 50 ರಷ್ಟು ಉದ್ಯೋಗಿಗಳು ಮನೆಯಿಂದಲೇ ಕೆಲಸ ಮಾಡಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


