ಪ್ರಧಾನಿ ಮೋದಿ ಪ್ರಚಾರಕ್ಕೆ ಬರುವ ಮುನ್ನ ಇ.ಡಿ, ಐಟಿ ಮತ್ತು ಸಿಬಿಐ ಕಳುಹಿಸುತ್ತಾರೆ: ಮಲ್ಲಿಕಾರ್ಜುನ ಖರ್ಗೆ
ಇಡಿ, ಸಿಬಿಐ ಮತ್ತು ಆದಾಯ ತೆರಿಗೆ ಇಲಾಖೆಯನ್ನು ನರೇಂದ್ರ ಮೋದಿಯವರ 'ಜವಾನರು' ಎಂದು ಲೇವಡಿ ಮಾಡಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪ್ರಧಾನಿ ನರೇಂದ್ರ ಮೋದಿಯವರು ಪ್ರಚಾರಕ್ಕೆ ಬರುವ ಮುನ್ನವೇ ಅವರು ಪ್ರತಿಪಕ್ಷಗಳನ್ನು ಗುರಿಯಾಗಿಸಲು ಕೇಂದ್ರದ ತನಿಖಾ ಸಂಸ್ಥೆಗಳನ್ನು ಕಳುಹಿಸುತ್ತಾರೆ ಎಂದು ಹೇಳಿದರು.

ಜೋಧ್‌ಪುರ: ಇಡಿ, ಸಿಬಿಐ ಮತ್ತು ಆದಾಯ ತೆರಿಗೆ ಇಲಾಖೆಯನ್ನು ನರೇಂದ್ರ ಮೋದಿಯವರ 'ಜವಾನರು' ಎಂದು ಲೇವಡಿ ಮಾಡಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪ್ರಧಾನಿ ನರೇಂದ್ರ ಮೋದಿಯವರು ಪ್ರಚಾರಕ್ಕೆ ಬರುವ ಮುನ್ನವೇ ಅವರು ಪ್ರತಿಪಕ್ಷಗಳ ನಾಯಕರನ್ನು ಗುರಿಯಾಗಿಸಲು ಕೇಂದ್ರದ ತನಿಖಾ ಸಂಸ್ಥೆಗಳನ್ನು ಕಳುಹಿಸುತ್ತಾರೆ ಎಂದು ಹೇಳಿದರು.
ನವೆಂಬರ್ 25ರ ವಿಧಾನಸಭಾ ಚುನಾವಣೆಗೆ ಮುನ್ನ ರಾಜಸ್ಥಾನದ ಜೋಧ್‌ಪುರದಲ್ಲಿ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, ಇದು ಚುನಾವಣಾ ಸಮಯವಾದ್ದರಿಂದ ಪ್ರಧಾನಿ ಈಗ ಬಡವರ ಬಗ್ಗೆ ಯೋಚಿಸುತ್ತಿದ್ದಾರೆ ಎಂದು ಹೇಳಿದರು.
ಉಚಿತ ಪಡಿತರ ಯೋಜನೆಯನ್ನು ಐದು ವರ್ಷಗಳವರೆಗೆ ವಿಸ್ತರಿಸುವುದಾಗಿ ಪ್ರಧಾನಿ ಘೋಷಿಸಿದ ಕೆಲವೇ ದಿನಗಳ ಬಳಿಕ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.
ಮೋದಿ ಸರ್ಕಾರವು ಬಡವರಿಗೆ ತೊಂದರೆ ನೀಡುತ್ತಿದೆ ಮತ್ತು ಅದಾನಿ ಅವರಂತಹ ಕೈಗಾರಿಕೋದ್ಯಮಿ ಸ್ನೇಹಿತರನ್ನು ಬೆಂಬಲಿಸುತ್ತಿದೆ. ಯಾವುದೇ ಒಬ್ಬ ರಾಜ, ಮುಖ್ಯಮಂತ್ರಿ ಅಥವಾ ಪ್ರಧಾನಿ ಸಾಮಾನ್ಯವಾಗಿ ಬಡವರಿಗೆ ಸಹಾಯ ಮಾಡುತ್ತಾರೆ. ಆದರೆ, ಒಬ್ಬ ವ್ಯಕ್ತಿ ಮಾತ್ರ ಬಡವರಿಂದ ಮತ ಪಡೆದ ನಂತರ ಶ್ರೀಮಂತರಿಗೆ ಸಹಾಯ ಮಾಡುತ್ತಾರೆ ಎಂದು ಆರೋಪಿಸಿದರು.
'ಅವರ (ಮೋದಿ) ಆಡಳಿತದ ಅವಧಿಯಲ್ಲಿ, ಶ್ರೀಮಂತರು ಶ್ರೀಮಂತರಾಗುತ್ತಿದ್ದಾರೆ ಮತ್ತು ಬಡವರು ಬಡವರಾಗುತ್ತಿದ್ದಾರೆ. ಈಗ ಚುನಾವಣೆಗಳು ಸಮೀಪಿಸುತ್ತಿರುವ ಕಾರಣ ಪ್ರಧಾನಿ ಮೋದಿ ಬಡವರ ಬಗ್ಗೆ ಯೋಚಿಸುತ್ತಿದ್ದಾರೆ' ಎಂದು ವ್ಯಂಗ್ಯವಾಡಿದರು.
ಚುನಾವಣೆ ನಡೆಯಲಿರುವ ರಾಜ್ಯಗಳ ಕಾಂಗ್ರೆಸ್ ನಾಯಕರ ಮೇಲೆ ತನಿಖಾ ಸಂಸ್ಥೆಗಳ ಇತ್ತೀಚಿನ ದಾಳಿಯನ್ನು ಉಲ್ಲೇಖಿಸಿದ ಅವರು, ಚುನಾವಣಾ ಪ್ರಚಾರಕ್ಕೆ ತೆರಳಿ ಭಾಷಣ ಮಾಡುವ ಮುನ್ನ ಪ್ರಧಾನಿ ಮೋದಿ ಅವರು ಜಾರಿ ನಿರ್ದೇಶನಾಲಯ (ಇ.ಡಿ), ಆದಾಯ ತೆರಿಗೆ ಮತ್ತು ಕೇಂದ್ರದ ತನಿಖಾ ದಳವನ್ನು (ಸಿಬಿಐ) ಪ್ರಚಾರಕ್ಕಾಗಿ ಕಳುಹಿಸುತ್ತಾರೆ ಎಂದು ದೂರಿದರು.
ಅವರು ಕೇಂದ್ರ ತನಿಖಾ ಸಂಸ್ಥೆಗಳನ್ನು ಪ್ರಧಾನಿ ಮೋದಿಯ 'ಜವಾನರು' ಎಂದೂ ಕರೆದರು.
ನವೆಂಬರ್ 25ರ ಚುನಾವಣೆಗೆ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ನಾಮಪತ್ರ ಸಲ್ಲಿಸಿದ ನಂತರ ಸಾರ್ವಜನಿಕ ರ್ಯಾಲಿಯನ್ನು ನಡೆಸಲಾಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


