ದೇಶ

ರಾಜಸ್ಥಾನದಲ್ಲಿ ಭೀಕರ ಅಪಘಾತ; ಸೇತುವೆಯಿಂದ ಬಸ್ ಕೆಳಗೆ ಬಿದ್ದು ನಾಲ್ವರು ಸಾವು, ಹಲವರಿಗೆ ಗಾಯ

ಸೋಮವಾರ ಮುಂಜಾನೆ ನಿಯಂತ್ರಣ ತಪ್ಪಿದ ಬಸ್ಸೊಂದು ರಾಜಸ್ಥಾನದ ದೌಸಾದಲ್ಲಿ ಸೇತುವೆ ಮೇಲಿಂದ ರೈಲ್ವೆ ಹಳಿಗಳ ಮೇಲೆ ಬಿದ್ದ ಪರಿಣಾಮ ಕನಿಷ್ಠ ನಾಲ್ವರು ಸಾವಿಗೀಡಾಗಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾಜಸ್ಥಾನದಲ್ಲಿ ಭೀಕರ ಅಪಘಾತ; ಸೇತುವೆಯಿಂದ ಬಸ್ ಕೆಳಗೆ ಬಿದ್ದು ನಾಲ್ವರು ಸಾವು, ಹಲವರಿಗೆ ಗಾಯ
ನಿಯಂತ್ರಣ ತಪ್ಪಿ ಸೇತುವೆಯಿಂದ ಕೆಳಗೆ ಬಿದ್ದ ಬಸ್
Published On :

ಜೈಪುರ: ಸೋಮವಾರ ಮುಂಜಾನೆ ನಿಯಂತ್ರಣ ತಪ್ಪಿದ ಬಸ್ಸೊಂದು ರಾಜಸ್ಥಾನದ ದೌಸಾದಲ್ಲಿ ಸೇತುವೆ ಮೇಲಿಂದ ರೈಲ್ವೆ ಹಳಿಗಳ ಮೇಲೆ ಬಿದ್ದ ಪರಿಣಾಮ ಕನಿಷ್ಠ ನಾಲ್ವರು ಸಾವಿಗೀಡಾಗಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ವರದಿಗಳ ಪ್ರಕಾರ, ಅಪಘಾತದ ವೇಳೆ ಬಸ್‌ನಲ್ಲಿ ಸುಮಾರು 30 ಮಂದಿ ಪ್ರಯಾಣ ಮಾಡುತ್ತಿದ್ದರು ಎನ್ನಲಾಗಿದೆ.

ಸದ್ಯ 28 ಮಂದಿಯನ್ನು ಆಸ್ಪತ್ರೆಗೆ ಸಾಗಿಸಲಾಗಿದ್ದು, ಅದರಲ್ಲಿ ನಾಲ್ವರು ಸಾವಿಗೀಡಾಗಿದ್ದಾರೆ. ಎಂದು ಕಸ್ವಾ ದೌಸಾ ಎಡಿಎಂ ರಾಜ್‌ಕುಮಾರ್ ಸುದ್ದಿಸಂಸ್ಥೆ ಎಎನ್‌ಐಗೆ ತಿಳಿಸಿದ್ದಾರೆ. 

'ಅಪಘಾತದ ನಂತರ 28 ಜನರನ್ನು ಆಸ್ಪತ್ರೆಗೆ ಕರೆತರಲಾಯಿತು. ಅದರಲ್ಲಿ 4 ಜನರು ಮೃತಪಟ್ಟಿದ್ದಾರೆ. ಗಾಯಾಳುಗಳಿಗೆ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ. ಘಟನೆ ಬಗ್ಗೆ ತನಿಖೆಗಾಗಿ ಎಸ್‌ಡಿಎಂ ಅನ್ನು ಸ್ಥಳಕ್ಕೆ ಕಳುಹಿಸಲಾಗಿದೆ' ಎಂದು ರಾಜ್‌ಕುಮಾರ್ ಹೇಳಿದರು.

ಘಟನೆ ನಡೆದಾಗ ಬಸ್ ಹರಿದ್ವಾರದಿಂದ ಉದಯಪುರಕ್ಕೆ ತೆರಳುತ್ತಿತ್ತು ಎಂದು ಹಿರಿಯ ಅಧಿಕಾರಿ ತಿಳಿಸಿದ್ದಾರೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.