ಛತ್ತೀಸ್‌ಗಢ ವಿಧಾನಸಭೆ ಚುನಾವಣೆಗೆ ಮತದಾನ: ಸುಕ್ಮಾದಲ್ಲಿ ಐಇಡಿ ಸ್ಫೋಟ; ಸಿಆರ್‌ಪಿಎಫ್ ಕಮಾಂಡೋಗೆ ಗಾಯ
ಛತ್ತೀಸ್‌ಗಢ ವಿಧಾನಸಭೆ ಚುನಾವಣೆಗೆ ಮೊದಲ ಹಂತದ ಮತದಾನ ಇಂದು ಬೆಳಿಗ್ಗೆ ಆರಂಭವಾಗಿದೆ. ಈ ನಡುವೆ ಸುಕ್ಮಾ ಜಿಲ್ಲೆಯಲ್ಲಿ ನಕ್ಸಲರು ನಡೆಸಿದ ಐಇಡಿ ಸ್ಫೋಟದಲ್ಲಿ ಓರ್ವ ಕೋಬ್ರಾ ಕಮಾಂಡೊ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾಯ್ಪುರ: ಛತ್ತೀಸ್‌ಗಢ ವಿಧಾನಸಭೆ ಚುನಾವಣೆಗೆ ಮೊದಲ ಹಂತದ ಮತದಾನ ಇಂದು ಬೆಳಿಗ್ಗೆ ಆರಂಭವಾಗಿದೆ. ಈ ನಡುವೆ ಸುಕ್ಮಾ ಜಿಲ್ಲೆಯಲ್ಲಿ ನಕ್ಸಲರು ನಡೆಸಿದ ಐಇಡಿ ಸ್ಫೋಟದಲ್ಲಿ ಓರ್ವ ಕೋಬ್ರಾ ಕಮಾಂಡೊ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಮತದಾನದ ಸಂದರ್ಭದಲ್ಲಿ ಭದ್ರತೆಯನ್ನು ಏರ್ಪಡಿಸಲು ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಮತ್ತು ಕಮಾಂಡೊ ಬೆಟಾಲಿಯನ್ ಫಾರ್ ರೆಸೊಲ್ಯೂಟ್ ಆ್ಯಕ್ಷನ್ (ಕೋಬ್ರಾ) 206ನೇ ತುಕಡಿಯ ಜಂಟಿ ತಂಡವು ಟೊಂಡಮಾರ್ಕ ಕ್ಯಾಂಪ್‌ನಿಂದ ಎಲ್ಮಗುಂಡ ಗ್ರಾಮದಲ್ಲಿ ಗಸ್ತು ತಿರುಗುತ್ತಿದ್ದ ಸಂದರ್ಭದಲ್ಲಿ ಈ ಸ್ಫೋಟ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ನಕ್ಸಲರು ಆಳವಡಿಸಿದ್ದ ಐಇಡಿ ಸ್ಫೋಟಗೊಂಡು ಕೋಬ್ರಾ ಕಮಾಂಡೊ, ಇನ್‌ಸ್ಪೆಕ್ಟರ್ ಶ್ರೀಕಾಂತ್ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಕೊಂಟ ವಿಧಾನಸಭೆ ಕ್ಷೇತ್ರಕ್ಕೆ ಸೇರಿದ ಪ್ರದೇಶ ಇದಾಗಿದೆ ಛತ್ತೀಸಗಢ ವಿಧಾನಸಭೆಗೆ ಮೊದಲ ಹಂತದಲ್ಲಿ 20 ಸ್ಥಾನಗಳಿಗೆ ಇಂದು ಚುನಾವಣೆ ನಡೆಯುತ್ತಿದೆ. ಭದ್ರತೆಗಾಗಿ 25,249 ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.
90 ಸದಸ್ಯ ಬಲದ ರಾಜ್ಯ ವಿಧಾನಸಭೆಗೆ ಎರಡು ಹಂತದ ಚುನಾವಣೆಯ ಮೊದಲ ಹಂತದಲ್ಲಿ ಮಂಗಳವಾರ ಮತದಾನ ನಡೆಯುತ್ತಿರುವ 20 ಕ್ಷೇತ್ರಗಳ ಪೈಕಿ ಈ ಪ್ರದೇಶವು ಕೊಂಟಾ ವಿಧಾನಸಭಾ ವಿಭಾಗದ ಅಡಿಯಲ್ಲಿ ಬರುತ್ತದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


