ದೇಶ

ರಾಜಸ್ಥಾನ: ಚುನಾವಣಾ ಪ್ರಚಾರದ ವೇಳೆ ರಥಕ್ಕೆ ತಗುಲಿದೆ ವಿದ್ಯುತ್ ತಂತಿ; ಅಮಿತ್ ಶಾ ಸ್ವಲ್ಪದರಲ್ಲೇ ಪಾರು

ರಾಜಸ್ಥಾನದ ನಾಗೌರ್‌ನಲ್ಲಿ ಚುನಾವಣಾ ಪ್ರಚಾರ ಕೈಗೊಂಡಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಪ್ರಯಾಣಿಸುತ್ತಿದ್ದ ರಥಕ್ಕೆ ವಿದ್ಯುತ್ ತಂತಿ ತಗುಲಿದ್ದು, ಸ್ವಲ್ಪದರಲ್ಲೇ ಅಪಾಯದಿಂದ ಪಾರಾಗಿದ್ದಾರೆ.

ರಾಜಸ್ಥಾನ: ಚುನಾವಣಾ ಪ್ರಚಾರದ ವೇಳೆ ರಥಕ್ಕೆ ತಗುಲಿದೆ ವಿದ್ಯುತ್ ತಂತಿ; ಅಮಿತ್ ಶಾ ಸ್ವಲ್ಪದರಲ್ಲೇ ಪಾರು
ಅಮಿತ್ ಶಾ
Published On :

ನಾಗೌರ್: ರಾಜಸ್ಥಾನದ ನಾಗೌರ್‌ನಲ್ಲಿ ಚುನಾವಣಾ ಪ್ರಚಾರ ಕೈಗೊಂಡಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಪ್ರಯಾಣಿಸುತ್ತಿದ್ದ ರಥಕ್ಕೆ ವಿದ್ಯುತ್ ತಂತಿ ತಗುಲಿದ್ದು, ಸ್ವಲ್ಪದರಲ್ಲೇ ಅಪಾಯದಿಂದ ಪಾರಾಗಿದ್ದಾರೆ.

ಅಮಿತ್ ಶಾ ಅವರು ಇಂದು ನಾಗೌರ್‌ನ ಕುಚಮಾನ್ಸಿಟಿ ಮತ್ತು ಮಕ್ರಾನಾ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ ನಂತರ ಪರ್ಬತ್ ಸರ್ ಗೆ ತೆರಳಿದರು.

ಪರ್ಬತ್ಸರ್‌ನಲ್ಲಿ ಎರಡೂ ಬದಿಗಳಲ್ಲಿ ಅಂಗಡಿಗಳು ಮತ್ತು ಮನೆಗಳಿರುವ ಮಾರ್ಗದ ಮೂಲಕ ಹಾದುಹೋಗುವಾಗ, ಅವರ 'ರಥ'(ವಿಶೇಷವಾಗಿ ವಿನ್ಯಾಸಗೊಳಿಸಲಾದ ವಾಹನ)ಕ್ಕೆ ವಿದ್ಯುತ್ ತಂತಿ ತಗುಲಿ ಕಿಡಿ ಹೊತ್ತಿಕೊಂಡಿದೆ. ತಕ್ಷಣ ಎಚ್ಚೆತ್ತುಕೊಂಡ ಭದ್ರತಾ ಸಿಬ್ಬಂದಿ ವಾಹನ ನಿಲ್ಲಿಸಿ ಸಂಭವಿಸಲಿದ್ದ ಅನಾಹುತವನ್ನು ತಪ್ಪಿಸಿದ್ದಾರೆ.

ಘಟನೆಯ ನಂತರ ಕೇಂದ್ರ ಗೃಹ ಸಚಿವರು ರೋಡ್ ಶೋವನ್ನು ರದ್ದುಗೊಳಿಸಿದ್ದು, ಅಲ್ಲಿಂದ ಕಾರಿನಲ್ಲಿ ತೆರಳಿದರು.

ಘಟನೆಯ ಕುರಿತು ತನಿಖೆ ನಡೆಸಲಾಗುವುದು ಎಂದು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ಹೇಳಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.