ದೆಹಲಿಯಲ್ಲಿ ವಾಯು ಮಾಲಿನ್ಯ ತಡೆಯಲು ಕೃತಕ ಮಳೆ ಸುರಿಸಲು ಚಿಂತನೆ
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಾಯು ಮಾಲಿನ್ಯ ಮಿತಿಮೀರುತ್ತಿದ್ದು, ವಾಯು ಮಾಲಿನ್ಯ ನಿಯಂತ್ರಿಸಲು ಈ ತಿಂಗಳು ಮೋಡ ಬಿತ್ತನೆ ಮೂಲಕ ಕೃತಕ ಮಳೆ ಸುರಿಸಲು ಸರ್ಕಾರ ಯೋಜಿಸುತ್ತಿದೆ ಎಂದು ಪರಿಸರ ಸಚಿವ ಗೋಪಾಲ್ ರೈ ಅವರು...

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಾಯು ಮಾಲಿನ್ಯ ಮಿತಿಮೀರುತ್ತಿದ್ದು, ವಾಯು ಮಾಲಿನ್ಯ ನಿಯಂತ್ರಿಸಲು ಈ ತಿಂಗಳು ಮೋಡ ಬಿತ್ತನೆ ಮೂಲಕ ಕೃತಕ ಮಳೆ ಸುರಿಸಲು ಸರ್ಕಾರ ಯೋಜಿಸುತ್ತಿದೆ ಎಂದು ಪರಿಸರ ಸಚಿವ ಗೋಪಾಲ್ ರೈ ಅವರು ಬುಧವಾರ ಹೇಳಿದ್ದಾರೆ.
ಈ ಸಂಬಂಧ ಸಚಿವ ರೈ ಅವರು ಐಐಟಿ ಕಾನ್ಪುರ ವಿಜ್ಞಾನಿಗಳೊಂದಿಗೆ ಸಭೆ ನಡೆಸಿದ್ದು, ವಾತಾವರಣದಲ್ಲಿ ಮೋಡಗಳು ಅಥವಾ ತೇವಾಂಶವಿದ್ದರೆ ಮಾತ್ರ ಮೋಡ ಬಿತ್ತನೆ ಮಾಡಲು ಯತ್ನಿಸಬಹುದು ಎಂದಿದ್ದಾರೆ.
"ನವೆಂಬರ್ 20-21ರ ಸುಮಾರಿಗೆ ಮೋಡ ಬಿತ್ತನೆಗೆ ಸೂಕ್ತ ವಾತಾವರಣ ಸೃಷ್ಟಿಯಾಗಬಹುದು ಎಂದು ತಜ್ಞರು ಹೇಳಿದ್ದಾರೆ. ಈ ನಿಟ್ಟಿನಲ್ಲಿ ಪ್ರಸ್ತಾವನೆಯನ್ನು ಸಿದ್ಧಪಡಿಸಲು ನಾವು ವಿಜ್ಞಾನಿಗಳಿಗೆ ಕೇಳಿಕೊಂಡಿದ್ದೇವೆ. ಅದನ್ನು ಸುಪ್ರೀಂ ಕೋರ್ಟ್‌ಗೆ ಸಲ್ಲಿಸಲಾಗುವುದು" ಎಂದು ಸಚಿವರು ತಿಳಿಸಿದ್ದಾರೆ.
ಇದೇ ವೇಳೆ, ಸುಪ್ರೀಂ ಕೋರ್ಟ್ ಆದೇಶದಂತೆ ದೆಹಲಿಗೆ ಆಪ್ ಆಧಾರಿತ ಟ್ಯಾಕ್ಸಿಗಳ ಪ್ರವೇಶವನ್ನು ನಿಷೇಧಿಸಲಾಗಿದೆ ಎಂದು ಸಚಿವ ಗೋಪಾಲ್ ರೈ ಅವರು ಹೇಳಿದ್ದಾರೆ.
ರಾಷ್ಟ್ರ ರಾಜಧಾನಿಯಲ್ಲಿ ಕಾರುಗಳಿಗೆ ಸಮ-ಬೆಸ ನಿಯಮ ಜಾರಿಗೊಳಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
ಕೃತಕ ಮಳೆಯ ಕುರಿತು ಜಾಗತಿಕ ಮಟ್ಟದಲ್ಲಿ ಸಂಶೋಧನೆ ನಡೆಸಲಾಗುತ್ತಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ಮಹಾನಿರ್ದೇಶಕ ಮೃತ್ಯುಂಜಯ್ ಮೊಹಾಪಾತ್ರ ಅವರು ಪಿಟಿಐಗೆ ತಿಳಿಸಿದ್ದಾರೆ.
"ಭಾರತದಲ್ಲಿ... ತೆಲಂಗಾಣ, ತಮಿಳುನಾಡು ಮತ್ತು ಕರ್ನಾಟಕದಲ್ಲಿ ಕೆಲವು ಪ್ರಯತ್ನಗಳು ನಡೆದಿವೆ. ಜಾಗತಿಕವಾಗಿ, ಕೃತಕ ಮಳೆಯ ಬಗ್ಗೆ ಸಂಶೋಧನೆ ನಡೆಸಲಾಗುತ್ತಿದೆ. ಇದಕ್ಕೆ ಮೋಡಗಳು ಅಥವಾ ತೇವಾಂಶದ ವಾತಾವರಣ ಅಗತ್ಯವಿರುತ್ತದೆ ಎಂದು ಅವರು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


