ಡಿಸೆಂಬರ್ 2ನೇ ವಾರದಲ್ಲಿ ಸಂಸತ್ ಚಳಿಗಾಲದ ಅಧಿವೇಶನ ಆರಂಭ ಸಾಧ್ಯತೆ
ಸಂಸತ್ ಚಳಿಗಾಲದ ಅಧಿವೇಶನ ಡಿಸೆಂಬರ್ ಎರಡನೇ ವಾರದಲ್ಲಿ ಆರಂಭವಾಗುವ ಸಾಧ್ಯತೆಯಿದೆ ಮತ್ತು ಕ್ರಿಸ್‌ಮಸ್‌ಗೆ ಮುಂಚಿತವಾಗಿ ಮುಕ್ತಾಯಗೊಳ್ಳಬಹುದು ಎಂದು ಮೂಲಗಳು ಬುಧವಾರ ತಿಳಿಸಿವೆ.

ನವದೆಹಲಿ: ಸಂಸತ್ ಚಳಿಗಾಲದ ಅಧಿವೇಶನ ಡಿಸೆಂಬರ್ ಎರಡನೇ ವಾರದಲ್ಲಿ ಆರಂಭವಾಗುವ ಸಾಧ್ಯತೆಯಿದೆ ಮತ್ತು ಕ್ರಿಸ್‌ಮಸ್‌ಗೆ ಮುಂಚಿತವಾಗಿ ಮುಕ್ತಾಯಗೊಳ್ಳಬಹುದು ಎಂದು ಮೂಲಗಳು ಬುಧವಾರ ತಿಳಿಸಿವೆ.
ಡಿಸೆಂಬರ್ 3 ರಂದು ಐದು ರಾಜ್ಯಗಳ ವಿಧಾನಸಭೆ ಚುನಾವಣೆಯ ಫಲಿತಾಂಶ ಪ್ರಕಟವಾದ ನಂತರ ಸಂಸತ್ ಅಧಿವೇಶನ ಪ್ರಾರಂಭವಾಗಬಹುದು ಎಂದು ಅವರು ಹೇಳಿದ್ದಾರೆ.
ಚಳಿಗಾಲದ ಅಧಿವೇಶನವು ಸಾಮಾನ್ಯವಾಗಿ ನವೆಂಬರ್ ಮೂರನೇ ವಾರದಲ್ಲಿ ಪ್ರಾರಂಭವಾಗುತ್ತದೆ ಮತ್ತು ಡಿಸೆಂಬರ್ 25ಕ್ಕೆ ಮುಂಚಿತವಾಗಿ ಮುಕ್ತಾಯಗೊಳ್ಳುತ್ತದೆ. ಆದರೆ ಈ ಬಾರಿ ಡಿಸೆಂಬರ್ ನಲ್ಲಿ ಆರಂಭವಾಗುವ ಸಾಧ್ಯತೆ ಇದೆ.
ಐಪಿಸಿ, ಸಿಆರ್‌ಪಿಸಿ ಮತ್ತು ಎವಿಡೆನ್ಸ್ ಆಕ್ಟ್ ಅನ್ನು ಬದಲಿಸಲು ಮೂರು ಪ್ರಮುಖ ಮಸೂದೆಗಳನ್ನು ಚಳಿಗಾಲದ ಅಧಿವೇಶನದಲ್ಲಿ ಮಂಡಿಸುವ ಸಾಧ್ಯತೆ ಇದೆ. ಗೃಹ ಇಲಾಖೆ ಸ್ಥಾಯಿ ಸಮಿತಿಯು ಈಗಾಗಲೇ ಈ ಮೂರು ಮಸೂದೆಗೆ ಸಂಬಂಧಿಸಿದ ವರದಿಗಳನ್ನು ಇತ್ತೀಚೆಗೆ ಅಂಗೀಕರಿಸಿದೆ.
ಸಂಸತ್ತಿನಲ್ಲಿ ಬಾಕಿ ಉಳಿದಿರುವ ಮತ್ತೊಂದು ಪ್ರಮುಖ ಮಸೂದೆ ಮುಖ್ಯ ಚುನಾವಣಾ ಆಯುಕ್ತ ಮತ್ತು ಚುನಾವಣಾ ಆಯುಕ್ತರ ನೇಮಕಾತಿಗೆ ಸಂಬಂಧಿಸಿದ ವಿಧೇಯಕವನ್ನು ಈ ಚಳಿಗಾಲದ ಅಧಿವೇಶನದಲ್ಲಿ ಅಂಗೀಕರಿಸುವ ಸಾಧ್ಯತೆ ಇದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


