ದೇಶ

ತೆಲಂಗಾಣ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪರ ನಾಳೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಪ್ರಚಾರ

ತೆಲಂಗಾಣ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಕಾಂಗ್ರೆಸ್ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲಿದ್ದಾರೆ.

ತೆಲಂಗಾಣ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪರ ನಾಳೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಪ್ರಚಾರ
ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್
Published On :

ಬೆಂಗಳೂರು:ತೆಲಂಗಾಣ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಕಾಂಗ್ರೆಸ್ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲಿದ್ದಾರೆ.

ತೆಲಂಗಾಣ ಕಾಂಗ್ರೆಸ್ ಅಧ್ಯಕ್ಷ ಎ ರೇವಂತ್ ರೆಡ್ಡಿ ಸ್ಪರ್ಧಿಸಿರುವ ಕಾಮರೆಡ್ಡಿಯಲ್ಲಿ ನಡೆಯಲಿರುವ  ಸಾರ್ವಜನಿಕ ಸಭೆಯಲ್ಲಿ ಸಿದ್ದರಾಮಯ್ಯ ಪಾಲ್ಗೊಂಡು, ಜನರನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ. ಇಲ್ಲಿ ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್ ವಿರುದ್ಧ ಎ. ರೇವಂತ್ ರೆಡ್ಡಿ ಕಣಕ್ಕಿಳಿದಿದ್ದಾರೆ.

ಕರ್ನಾಟಕ ಕಾಂಗ್ರೆಸ್ ಮುಖ್ಯಸ್ಥರೂ ಆಗಿರುವ ಶಿವಕುಮಾರ್, ಕೋದಾಡು ಮತ್ತು ಹುಜೂರ್‌ನಗರದಲ್ಲಿ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಲಿದ್ದಾರೆ ಎಂದು ಅವರ ಕಚೇರಿ ಮಾಹಿತಿ ಹಂಚಿಕೊಂಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.