ಗುರುಗ್ರಾಮ್: ಚಲಿಸುತ್ತಿದ್ದ ಸ್ಲೀಪರ್ ಬಸ್ ಗೆ ಬೆಂಕಿ, ಇಬ್ಬರು ಸಾವು, 12 ಮಂದಿ ಪ್ರಯಾಣಿಕರಿಗೆ ಗಾಯ
ಜೈಪುರ-ದೆಹಲಿ-ಗುರುಗ್ರಾಮ್ ಎಕ್ಸ್‌ಪ್ರೆಸ್‌ವೇಯಲ್ಲಿ ನಿನ್ನೆ ಬುಧವಾರ ರಾತ್ರಿ ಚಲಿಸುತ್ತಿದ್ದ ಸ್ಲೀಪರ್ ಬಸ್‌ಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಇಬ್ಬರು ಪ್ರಯಾಣಿಕರು ಸಜೀವ ದಹನವಾಗಿದ್ದು, 12 ಮಂದಿ ಪ್ರಯಾಣಿಕರು ಸುಟ್ಟು ಗಾಯಗೊಂಡಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಗುರುಗ್ರಾಮ್(ದೆಹಲಿ): ಜೈಪುರ-ದೆಹಲಿ-ಗುರುಗ್ರಾಮ್ ಎಕ್ಸ್‌ಪ್ರೆಸ್‌ವೇಯಲ್ಲಿ ನಿನ್ನೆ ಬುಧವಾರ ರಾತ್ರಿ ಚಲಿಸುತ್ತಿದ್ದ ಸ್ಲೀಪರ್ ಬಸ್‌ಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಇಬ್ಬರು ಪ್ರಯಾಣಿಕರು ಸಜೀವ ದಹನವಾಗಿದ್ದು, 12 ಮಂದಿ ಪ್ರಯಾಣಿಕರು ಸುಟ್ಟು ಗಾಯಗೊಂಡಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಬೆಂಕಿಯಿಂದ ಬಸ್ ಸುಟ್ಟು ಕರಕಲಾಗಿದೆ. ಬೆಂಕಿ ಅವಘಡಕ್ಕೆ ಕಾರಣ ತಕ್ಷಣಕ್ಕೆ ತಿಳಿದುಬಂದಿಲ್ಲ.
ಗಾಯಗೊಂಡ ಐವರನ್ನು ಮೇದಾಂತ ಆಸ್ಪತ್ರೆಗೆ ಮತ್ತು ಏಳು ಮಂದಿಯನ್ನು ಗುರುಗ್ರಾಮ್‌ನ ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ದೆಹಲಿಯಿಂದ ರಾಜಸ್ಥಾನದ ಜೈಪುರಕ್ಕೆ ಹೋಗುವ ಮುಖ್ಯ ರಸ್ತೆಯಲ್ಲಿರುವ ಝಾರ್ಸಾ ಮೇಲ್ಸೇತುವೆ ಬಳಿ ಕಳೆದ ರಾತ್ರಿ 8:30 ರ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಅಗ್ನಿಶಾಮಕ ಇಲಾಖೆ ಉಪನಿರ್ದೇಶಕ ಗುಲ್ಶನ್ ಕಲ್ರಾ ತಿಳಿಸಿದ್ದಾರೆ.
ಎಆರ್ 01 ಕೆ 7707 ನೋಂದಣಿ ಸಂಖ್ಯೆ ಹೊಂದಿರುವ ಸ್ಲೀಪರ್ ಬಸ್ ಕ್ಯಾರೇಜ್‌ವೇಯಲ್ಲಿ ಬೆಂಕಿ ಹೊತ್ತಿಕೊಂಡಿದೆ ಎಂಬ ಮಾಹಿತಿಯನ್ನು ನಾವು ಪಡೆದ ನಂತರ ಮೂರು ಅಗ್ನಿಶಾಮಕ ಟೆಂಡರ್‌ಗಳನ್ನು ಸ್ಥಳಕ್ಕೆ ಕಳುಹಿಸಿದೆವು ಎಂದು ಪೊಲೀಸ್ ಅಧಿಕಾರಿ ಕಲ್ರಾ ತಿಳಿಸಿದ್ದಾರೆ. ಬೆಂಕಿಯನ್ನು ಹತೋಟಿಗೆ ತರುವಷ್ಟರಲ್ಲಿ ಇಬ್ಬರು ಪ್ರಯಾಣಿಕರು ಸುಟ್ಟು ಕರಕಲಾದರು.
ಇತರ ಕೆಲವು ಪ್ರಯಾಣಿಕರಿಗೆ ಸುಟ್ಟ ಗಾಯಗಳಾಗಿವೆ. ಗಾಯಗೊಂಡಿರುವ ಏಳು ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಸಿವಿಲ್ ಆಸ್ಪತ್ರೆಯ ಡಾ.ಮಾನವ್ ಖಚಿತಪಡಿಸಿದ್ದಾರೆ. ಎಲ್ಲಾ ಗಾಯಗೊಂಡವರು ಶೇಕಡಾ 30 ರಿಂದ 50ರಷ್ಟು ಸುಟ್ಟುಗಾಯಗೊಂಡಿದ್ದಾರೆ, ಅವರ ಆರೋಗ್ಯ ಸ್ಥಿರವಾಗಿದೆ ಎಂದು ಮಾನವ್ ತಿಳಿಸಿದ್ದಾರೆ.
ಘಟನೆಯ ಬಗ್ಗೆ ಮಾಹಿತಿ ಪಡೆದ ಜಿಲ್ಲಾಧಿಕಾರಿ ನಿಶಾಂತ್ ಕುಮಾರ್ ಯಾದವ್ ಮತ್ತು ಗುರುಗ್ರಾಮ್ ಪೊಲೀಸ್ ಕಮಿಷನರ್ ವಿಕಾಸ್ ಕುಮಾರ್ ಅರೋರಾ ಕೂಡ ಸ್ಥಳಕ್ಕೆ ಆಗಮಿಸಿದರು. ಘಟನಾ ಸ್ಥಳದ ವಿಡಿಯೊದಲ್ಲಿ ಬಸ್ ಗೆ ಬೆಂಕಿ ಹತ್ತಿಕೊಂಡಿರುವುದು ಕಂಡುಬರುತ್ತದೆ. ಬೆಂಕಿ ಎಷ್ಟು ಭಯಾನಕವಾಗಿದೆ ಎಂದರೆ ರಾತ್ರಿಯಲ್ಲಿ ಹೊಗೆ ಆಕಾಶದತ್ತ ಹೊರಬರುತ್ತಿರುವುದು ಸಹ ಕಾಣಿಸಿಕೊಂಡಿದೆ.
ಇದನ್ನೂ ಓದಿ: ಆಂಧ್ರ ಪ್ರದೇಶ: ಏಕಾಏಕಿ ಚಲಿಸಿದ ಬಸ್; 3 ಸಾವು
ಬೆಂಕಿ ಅವಘಡಕ್ಕೆ ಕಾರಣ ತಕ್ಷಣಕ್ಕೆ ತಿಳಿದುಬಂದಿಲ್ಲ. ಹಬ್ಬ ಹರಿದಿನಗಳಲ್ಲಿ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬಸ್‌ಗಳಲ್ಲಿ ಪ್ರಯಾಣಿಸುತ್ತಾರೆ. ರೈಲಿನಲ್ಲಿ ಟಿಕೆಟ್ ಸಿಗದಿದ್ದರೆ ಹೆಚ್ಚಿನ ಸಂಖ್ಯೆಯ ಪ್ರಯಾಣಿಕರು ಪ್ರಯಾಣಿಸಲು ಮತ್ತು ಮನೆಗೆ ತಲುಪಲು ಬಸ್‌ಗಳ ಸಹಾಯವನ್ನು ತೆಗೆದುಕೊಳ್ಳುತ್ತಾರೆ.
ಟೆಂಟ್ ಗೋದಾಮಿನಲ್ಲಿ ಬೆಂಕಿ: ದೆಹಲಿಯ ಮೈದಾನ್ ಪ್ರದೇಶದಲ್ಲಿ ಕಳೆದ ರಾತ್ರಿ ಬೃಹತ್ ಮಟ್ಟದ ಬೆಂಕಿ ಅವಘಡ ಸಂಭವಿಸಿದ್ದು ಯಾವುದೇ ಸಾವು ನೋವು ವರದಿಯಾಗಿಲ್ಲ. ರಾತ್ರಿ 8.10ಕ್ಕೆ ನಮಗೆ ಬೆಂಕಿ ಹತ್ತಿಕೊಂಡು ಉರಿಯುತ್ತಿರುವ ಬಗ್ಗೆ ಕರೆ ಬಂತು. ತಕ್ಷಣ ತಂಡ ಸ್ಥಳಕ್ಕೆ ಧಾವಿಸಿದೆ. ಬೆಂಕಿ ನಿಯಂತ್ರಣದಲ್ಲಿದೆ. ಯಾವುದೇ ಕಾರಣಗಳ ಬಗ್ಗೆ ವರದಿಯಾಗಿಲ್ಲ. ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಯುತ್ತಿದೆ ಎಂದು ದೆಹಲಿ ಅಗ್ನಿಶಾಮಕ ಸೇವೆಯ ಎಡಿಒ ರಾಜೇಶ್ ಕುಮಾರ್ ಶುಕ್ಲಾ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


