ಪ್ರಧಾನಿ ಮೋದಿ ಒಳಗೊಂಡ 'ಅಬಂಡನ್ಸ್ ಇನ್ ಮಿಲೆಟ್ಸ್' ಹಾಡು ಗ್ರ್ಯಾಮಿ ಪ್ರಶಸ್ತಿಗೆ ನಾಮನಿರ್ದೇಶನ
ಪ್ರಧಾನಿ ನರೇಂದ್ರ ಮೋದಿ ಅವರನ್ನು ಒಳಗೊಂಡ, ಸಿರಿಧಾನ್ಯಗಳ ಮಹತ್ವವನ್ನು ಸಾರುವ ವಿಶೇಷ ಹಾಡು 'ಅಬಂಡನ್ಸ್ ಇನ್ ಮಿಲೆಟ್ಸ್' ಈ ವರ್ಷದ(Grammy award 2024) ಗ್ರ್ಯಾಮಿ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿದೆ.

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರನ್ನು ಒಳಗೊಂಡ, ಸಿರಿಧಾನ್ಯಗಳ ಮಹತ್ವವನ್ನು ಸಾರುವ ವಿಶೇಷ ಹಾಡು 'ಅಬಂಡನ್ಸ್ ಇನ್ ಮಿಲೆಟ್ಸ್' ಈ ವರ್ಷದ(Grammy award 2024) ಗ್ರ್ಯಾಮಿ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿದೆ.
'ಅಬಂಡನ್ಸ್ ಇನ್ ಮಿಲೆಟ್ಸ್' ಹಾಡು ಅತ್ಯುತ್ತಮ ಜಾಗತಿಕ ಸಂಗೀತ ಪ್ರದರ್ಶನ ವಿಭಾಗದಲ್ಲಿ ಗ್ರ್ಯಾಮಿ ಪ್ರಶಸ್ತಿಗೆ ನಾಮನಿರ್ದೇಶನ ಮಾಡಲಾಗಿದೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ. ಈ ಹಾಡಿಗೆ ಭಾರತೀಯ ಮೂಲದ ಅಮೆರಿಕನ್ ಗಾಯಕಿ ಫಲ್ಗುಣಿ ಶಾ ಸಂಗೀತ ನೀಡಿದ್ದು, ಅವರ ಪತಿ ಗೌರವ್ ಶಾ ಅವರು ಹಾಡಿದ್ದಾರೆ.
ಅತ್ಯುತ್ತಮ ಜಾಗತಿಕ ಸಂಗೀತ ಪ್ರದರ್ಶನ ವಿಭಾಗದ ಅಡಿಯಲ್ಲಿ, "ಫಾಲು ಮತ್ತು ಗೌರವ್ ಶಾ (ಪ್ರಧಾನಿ ನರೇಂದ್ರ ಮೋದಿ ಅವರನ್ನು ಒಳಗೊಂಡಿರುವ) ಅವರ ಅಬಂಡನ್ಸ್ ಇನ್ ಮಿಲೆಟ್ಸ್ ಹಾಡು ಗ್ರ್ಯಾಮಿ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿದೆ ಎಂದು ಅವರು ಹೇಳಿದ್ದಾರೆ.
ಸಿರಿಧಾನ್ಯಗಳ ಮಹತ್ವವನ್ನು ಸಾರುವುದಕ್ಕಾಗಿ ಈ ಹಾಡನ್ನು ಲಾಂಚ್ ಮಾಡಲಾಗಿತ್ತು. ಇಡೀ ಜಗತ್ತು, 2023ರ ವಷವನ್ನು ಅಂತಾರಾಷ್ಟ್ರೀಯ ಸಿರಿಧಾನ್ಯಗಳ ವರ್ಷವನ್ನಾಗಿ ಆಚರಿಸುತ್ತಿದೆ. ಸಿರಿಧಾನ್ಯಗಳನ್ನು ಉತ್ತೇಜಿಸುವುದಕ್ಕಾಗಿ ಸೃಷ್ಟಿಸಲಾದ ಈ ಹಾಡಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕಾಣಿಸಿಕೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


