ಅನಾರೋಗ್ಯ ಪೀಡಿತ ಪತ್ನಿ ಭೇಟಿಯಾಗಲು ಸಿಸೋಡಿಯಾಗೆ ಕೋರ್ಟ್ ಅನುಮತಿ
ಅನಾರೋಗ್ಯದಿಂದ ಬಳಲುತ್ತಿರುವ ತಮ್ಮ ಪತ್ನಿಯನ್ನು ಭೇಟಿಯಾಗಲು ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರಿಗೆ ರೋಸ್ ಅವೆನ್ಯೂ ನ್ಯಾಯಾಲಯ ಶುಕ್ರವಾರ ಅನುಮತಿ ನೀಡಿದೆ. ಅವರು ಐದು ದಿನಗಳ ಕಾಲ ಅನುಮತಿಯನ್ನು ಕೋರಿದ್ದರು.

ನವದೆಹಲಿ: ಅನಾರೋಗ್ಯದಿಂದ ಬಳಲುತ್ತಿರುವ ತಮ್ಮ ಪತ್ನಿಯನ್ನು ಭೇಟಿಯಾಗಲು ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರಿಗೆ ರೋಸ್ ಅವೆನ್ಯೂ ನ್ಯಾಯಾಲಯ ಶುಕ್ರವಾರ ಅನುಮತಿ ನೀಡಿದೆ. ಅವರು ಐದು ದಿನಗಳ ಕಾಲ ಅನುಮತಿಯನ್ನು ಕೋರಿದ್ದರು.
ಸಿಸೋಡಿಯಾ ತಮ್ಮ ಮನೆಯಲ್ಲಿ ಬೆಳಗ್ಗೆ 10 ರಿಂದ 4 ರ ನಡುವೆ ಪೊಲೀಸ್ ಕಸ್ಟಡಿಯಲ್ಲಿ ತಮ್ಮ ಅನಾರೋಗ್ಯ ಪೀಡಿತ ಪತ್ನಿಯನ್ನು ಭೇಟಿಯಾಗಲು ವಿಶೇಷ ನ್ಯಾಯಾಧೀಶ ಎಂ ಕೆ ನಾಗ್ಪಾಲ್ ಅವರು ಅನುಮತಿ ನೀಡಿದರು.
ಈ ಮಧ್ಯೆ ದೆಹಲಿ ಅಬಕಾರಿ ನೀತಿ ಹಣ ವರ್ಗಾವಣೆ ಪ್ರಕರಣದಲ್ಲಿ ಸಂಸದ ಸಂಜಯ್ ಸಿಂಗ್ ಅವರ ನ್ಯಾಯಾಂಗ ಬಂಧನವನ್ನು ನ್ಯಾಯಾಲಯ ನವೆಂಬರ್ 24, 2023 ರವರೆಗೆ ವಿಸ್ತರಿಸಿದೆ. ಮಾನನಷ್ಟ ಮೊಕದ್ದಮೆಯಲ್ಲಿ ಪಂಜಾಬ್‌ನ ಅಮೃತಸರದ ಸಿಜೆಎಂ ನ್ಯಾಯಾಲಯದ ಮುಂದೆ ಸಂಜಯ್ ಸಿಂಗ್ ಅವರನ್ನು ಇದೇ ತಿಂಗಳ 18 ರಂದು ಹಾಜರುಪಡಿಸಲು ವಿಶೇಷ ನ್ಯಾಯಾಧೀಶರು ಅನುಮತಿ ನೀಡಿದರು.
ಸಂಜಯ್ ಸಿಂಗ್ ಅವರ ಆರೋಗ್ಯ ಸಮಸ್ಯೆ ಮತ್ತು ಬದಲಾಗಿರುವ ಹವಾಮಾನವನ್ನು ಗಮನದಲ್ಲಿಟ್ಟುಕೊಂಡು ರಾಜಧಾನಿಯಿಂದ ರೈಲಿನಲ್ಲಿ ಪಂಜಾಬ್‌ಗೆ ಕರೆದುಕೊಂಡು ಹೋಗಿ ಅದೇ ದಿನ ವಾಪಸ್ ಬರುವಂತೆ ಜೈಲು ಅಧಿಕಾರಿಗಳಿಗೆ ನಿರ್ದೇಶನ ನೀಡಿರುವ ನ್ಯಾಯಾಲಯ, ಸೂಕ್ತ ಭದ್ರತಾ ವ್ಯವಸ್ಥೆ ಮಾಡುವಂತೆಯೂ ಸೂಚಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


