ದೆಹಲಿ ಅಬಕಾರಿ ಹಗರಣ: ಸಂಜಯ್ ಸಿಂಗ್ ನ್ಯಾಯಾಂಗ ಬಂಧನ ಅವಧಿ ನ.24ರವರೆಗೆ ವಿಸ್ತರಣೆ
ರದ್ದುಗೊಂಡಿರುವ ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧಿತರಾಗಿರುವ ಎಎಪಿ ನಾಯಕ ಸಂಜಯ್ ಸಿಂಗ್ ಅವರ ನ್ಯಾಯಾಂಗ ಬಂಧನ ಅವಧಿಯನ್ನು ದೆಹಲಿ ನ್ಯಾಯಾಲಯವು...

ನವದೆಹಲಿ: ರದ್ದುಗೊಂಡಿರುವ ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧಿತರಾಗಿರುವ ಎಎಪಿ ನಾಯಕ ಸಂಜಯ್ ಸಿಂಗ್ ಅವರ ನ್ಯಾಯಾಂಗ ಬಂಧನ ಅವಧಿಯನ್ನು ದೆಹಲಿ ನ್ಯಾಯಾಲಯವು ನವೆಂಬರ್ 24 ರವರೆಗೆ ವಿಸ್ತರಿಸಿದೆ.
ವಿಶೇಷ ನ್ಯಾಯಾಧೀಶ ಎಂಕೆ ನಾಗ್ಪಾಲ್ ಅವರು, ಸಂಸದರಾಗಿ ಅಭಿವೃದ್ಧಿ ಕಾರ್ಯಗಳಿಗೆ ಸಂಬಂಧಿಸಿದ ಕೆಲವು ದಾಖಲೆಗಳಿಗೆ ಸಹಿ ಹಾಕಲು ಸಿಂಗ್ ಅವರಿಗೆ ಅವಕಾಶ ನೀಡಿದರು. ಬಳಿಕ ಆರೋಪಿಯ ನ್ಯಾಯಾಂಗ ಬಂಧನವನ್ನು 14 ದಿನಗಳ ಕಾಲ ವಿಸ್ತರಿಸಿದರು.
ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಅಕ್ಟೋಬರ್ 4 ರಂದು ರಾಜ್ಯಸಭಾ ಸದಸ್ಯ ಸಂಜಯ್ ಸಿಂಗ್ ಅವರ ನಿವಾಸದ ಮೇಲೆ ದಾಳಿ ನಡೆಸಿದ್ದ ಇಡಿ ಅಧಿಕಾರಿಗಳು, ಸತತ 11 ಗಂಟೆಗಳ ವಿಚಾರಣೆ ಬಳಿಕ ಅವರನ್ನು ಬಂಧಿಸಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


