ಭಾರತದ ಮೋಸ್ಟ್ ವಾಂಟೆಡ್ ಲಷ್ಕರ್-ಎ-ತೈಬಾ ಉಗ್ರ ಸಂಘಟನೆ ಮಾಜಿ ಕಮಾಂಡರ್ ಅಕ್ರಮ್ ಘಾಜಿ ಹತ್ಯೆ
ಲಷ್ಕರ್-ಎ-ತೈಬಾ ಉಗ್ರ ಸಂಘಟನೆಯ ಮಾಜಿ ಕಮಾಂಡರ್ನನ್ನು ಅಪರಿಚಿತ ದುಷ್ಕರ್ಮಿಗಳು ಗುಂಡಿಟ್ಟು ಹತ್ಯೆ ಮಾಡಿದ್ದಾರೆ.

ಇಸ್ಲಮಾಬಾದ್ : ಲಷ್ಕರ್-ಎ-ತೈಬಾ ಉಗ್ರ ಸಂಘಟನೆಯ ಮಾಜಿ ಕಮಾಂಡರ್ನನ್ನು ಅಪರಿಚಿತ ದುಷ್ಕರ್ಮಿಗಳು ಗುಂಡಿಟ್ಟು ಹತ್ಯೆ ಮಾಡಿದ್ದಾರೆ.
ಲಷ್ಕರ್-ಎ-ತೈಬಾ ಉಗ್ರ ಸಂಘಟನೆಯ ಮಾಜಿ ಕಮಾಂಡರ್ ಅಕ್ರಮ್ ಖಾನ್ ಅಲಿಯಾಸ್ ಅಕ್ರಮ್ ಘಾಜಿ ಕೊಲೆಯಾದವನು. ಪಾಕಿಸ್ತಾನದ ಬಜೌರ್ ಜಿಲ್ಲೆಯಲ್ಲಿ ಅಪರಿಚಿತನೊಬ್ಬ ಗನ್ನಿಂದ ಮಾಜಿ ಕಮಾಂಡರ್ ಅಕ್ರಮ್ ಖಾನ್ನನ್ನು ಶೂಟ್ ಮಾಡಿದ್ದಾನೆ. ಬಳಿಕ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ಹೇಳಲಾಗುತ್ತಿದೆ.
ಅಕ್ರಮ್ ಖಾನ್ ಅಲಿಯಾಸ್ ಘಾಜಿ 2018-2020 ರ ಅವಧಿಯಲ್ಲಿ ಲಷ್ಕರ್‌ಗೆ ಉನ್ನತ ನೇಮಕಾತಿದಾರರಲ್ಲಿ ಒಬ್ಬನಾಗಿದ್ದ. ಕಳೆದ ಎರಡು ವರ್ಷಗಳಲ್ಲಿ ಕಾಶ್ಮೀರ ಕಣಿವೆಗೆ ಅನೇಕ ಬ್ಯಾಚ್‌ಗಳಲ್ಲಿ ನುಸುಳಿದ ಹಲವಾರು ಭಯೋತ್ಪಾದಕರ ಜವಾಬ್ದಾರಿಯನ್ನು ಹೊತ್ತಿದ್ದ. ಈ ವೇಳೆ ಉಗ್ರ ಸಂಘಟನೆಗೆ ಬೇಕಾದ ಯುವಕರನ್ನು ಉದ್ಯೋಗದ ಹೆಸರಲ್ಲಿ ನೇಮಕ ಮಾಡಿಕೊಂಡು ಅವರಿಗೆ ಭಯೋತ್ಪಾದನೆ ಬಗ್ಗೆ ತರಬೇತಿ ಕೊಡುತ್ತಿದ್ದನು ಎನ್ನಲಾಗಿದೆ.
ಜಮ್ಮು ಮತ್ತು ಕಾಶ್ಮೀರದಲ್ಲಿ 2018 ರ ಸುಂಜ್ವಾನ್ ಭಯೋತ್ಪಾದನಾ ದಾಳಿಯ ಮಾಸ್ಟರ್‌ಮೈಂಡ್‌ಗಳಲ್ಲಿ ಒಬ್ಬನಾಗಿದ್ದ ಖ್ವಾಜಾ ಶಾಹಿದ್‌ನನ್ನು ಭಾನುವಾರ ಅಪಹರಿಸಲಾಗಿತ್ತು. ಪಾಕ್ ಆಕ್ರಮಿತ ಕಾಶ್ಮೀರದ ಗಡಿ ನಿಯಂತ್ರಣ ರೇಖೆಯ ಬಳಿ ಶಿರಚ್ಛೇದ ಮಾಡಲಾಯಿತು.
ಘಾಜಿ ಹತ್ಯೆಯಲ್ಲಿ ವಿವಿಧ ಭಯೋತ್ಪಾದಕ ಗುಂಪುಗಳು ಸೇರಿದಂತೆ ಸ್ಥಳೀಯ ವಿರೋಧಿಗಳ ಪಾತ್ರ ಇರಬಹುದು ಎನ್ನಲಾಗಿದೆ. ಘಾಜಿ ಲಷ್ಕರ್‌ನ ಕೇಂದ್ರ ನೇಮಕಾತಿ ಸೆಲ್‌ನ ಪ್ರಮುಖ ಸದಸ್ಯನಾಗಿದ್ದ. ಭಾರತದ ವಿರುದ್ಧ ದ್ವೇಷ ತುಂಬಿದ ಭಾಷಣಗಳಿಗೆ ಹೆಸರುವಾಸಿಯಾಗಿದ್ದ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


