ಜಾರ್ಖಂಡ್‌ನಲ್ಲಿ ಮೂವರು ಮಾವೋವಾದಿಗಳ ಬಂಧನ, ಐಇಡಿ ತಯಾರಿಕೆ ಸಾಮಗ್ರಿ ವಶ
ಜಾರ್ಖಂಡ್‌ನ ಪಶ್ಚಿಮ ಸಿಂಗ್‌ಭೂಮ್ ಜಿಲ್ಲೆಯಲ್ಲಿ ಶುಕ್ರವಾರ ನಿಷೇಧಿತ ಸಿಪಿಐ-ಮಾವೋವಾದಿ ಸಂಘಟನೆಯ ಮೂವರು ಸದಸ್ಯರನ್ನು ಬಂಧಿಸಲಾಗಿದ್ದು, ಅವರಿಂದ ಸುಧಾರಿತ ಸ್ಫೋಟಕ ಸಾಧನಗಳನ್ನು ತಯಾರಿಸಲು ಬಳಸುತ್ತಿದ್ದ...

ಸಿಂಗ್‌ಭೂಮ್: ಜಾರ್ಖಂಡ್‌ನ ಪಶ್ಚಿಮ ಸಿಂಗ್‌ಭೂಮ್ ಜಿಲ್ಲೆಯಲ್ಲಿ ಶುಕ್ರವಾರ ನಿಷೇಧಿತ ಸಿಪಿಐ-ಮಾವೋವಾದಿ ಸಂಘಟನೆಯ ಮೂವರು ಸದಸ್ಯರನ್ನು ಬಂಧಿಸಲಾಗಿದ್ದು, ಅವರಿಂದ ಸುಧಾರಿತ ಸ್ಫೋಟಕ ಸಾಧನಗಳನ್ನು ತಯಾರಿಸಲು ಬಳಸುತ್ತಿದ್ದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಖಚಿತ ಮಾಹಿತಿ ಮೇರೆಗೆ ಪೊಲೀಸರು ಗೋಯಿಲ್ಕೆರಾ ಪೊಲೀಸ್ ಠಾಣಾ ವ್ಯಾಪ್ತಿಯ ರೆಂಗ್ರಾ ಗ್ರಾಮದಲ್ಲಿ ದಾಳಿ ನಡೆಸಿ ಮಾವೋವಾದಿಗಳನ್ನು ಬಂಧಿಸಿದ್ದಾರೆ.
ಬಂಧಿತ ಮೂವರು ಮಾವೋವಾದಿಗಳು ಐಇಡಿ ಬಳಸಿ ಸಿಆರ್‌ಪಿಎಫ್ ಕ್ಯಾಂಪ್‌ಗೆ ಪಡಿತರ ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಅನ್ನು ಸ್ಫೋಟಿಸಿ ಜನರನ್ನು ಹತ್ಯೆ ಮಾಡಿದ ಪ್ರಕರಣ ಸೇರಿದಂತೆ ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದಾರೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಅಶುತೋಷ್ ಶೇಖರ್ ಚೈಬಾಸಾದಲ್ಲಿ ಸುದ್ದಿಗಾರರಿಗೆ ತಿಳಿಸಿದ್ದಾರೆ.
ಬಂಧಿತ ಮಾವೋವಾದಿಗಳನ್ನು ಪಶ್ಚಿಮ ಸಿಂಗ್‌ಭೂಮ್ ಜಿಲ್ಲೆಯ ನಿವಾಸಿಗಳಾದ ಡೆಬಾಯ್ ಪುರ್ತಿ ಅಲಿಯಾಸ್ ಲೆಗಾಸಿ ಪುರ್ತಿ (28), ಜುರಿಯಾ ಬಹಂಡಾ ಅಲಿಯಾಸ್ ಮಾತಾ ಬಹಂಡಾ (28) ಮತ್ತು ಲೆಬಿಯಾ ಬೋಯಿಪೈ (21) ಎಂದು ಗುರುತಿಸಲಾಗಿದೆ ಎಂದು ಎಸ್‌ಪಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


