ಪಾಕ್ ಜೈಲಿನಿಂದ ಬಿಡುಗಡೆಯಾದ 80 ಭಾರತೀಯ ಮೀನುಗಾರರು ಬಿಎಸ್ ಎಫ್ ಗೆ ಹಸ್ತಾಂತರ!
ಪಾಕಿಸ್ತಾನದ ಜೈಲಿನಿಂದ ಇತ್ತೀಚೆಗೆ ಬಿಡುಗಡೆಯಾದ 80 ಭಾರತೀಯ ಮೀನುಗಾರರನ್ನು ಅಮೃತಸರದ ಅಟ್ಟಾರಿ-ವಾಘಾ ಗಡಿಯಲ್ಲಿ ಗಡಿ ಭದ್ರತಾ ಪಡೆ ಅಧಿಕಾರಿಗಳಿಗೆ ಹಸ್ತಾಂತರಿಸಲಾಗಿದೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.ಕರಾಚಿಯ ಮಲಿರ್ ಜೈಲಿನಲ್ಲಿದ್ದ 80 ಭಾರತೀಯ ಮೀನುಗಾರರನ್ನು ಪಾಕಿಸ್ತಾನ ಸರ್ಕಾರ ಗುರುವಾರ ಬಿಡುಗಡೆ ಮಾಡಿತ್ತು.

ಅಮೃತಸರ: ಪಾಕಿಸ್ತಾನದ ಜೈಲಿನಿಂದ ಇತ್ತೀಚೆಗೆ ಬಿಡುಗಡೆಯಾದ 80 ಭಾರತೀಯ ಮೀನುಗಾರರನ್ನು ಅಮೃತಸರದ ಅಟ್ಟಾರಿ-ವಾಘಾ ಗಡಿಯಲ್ಲಿ ಗಡಿ ಭದ್ರತಾ ಪಡೆ ಅಧಿಕಾರಿಗಳಿಗೆ ಹಸ್ತಾಂತರಿಸಲಾಗಿದೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.
ಕರಾಚಿಯ ಮಲಿರ್ ಜೈಲಿನಲ್ಲಿದ್ದ 80 ಭಾರತೀಯ ಮೀನುಗಾರರನ್ನು ಪಾಕಿಸ್ತಾನ ಸರ್ಕಾರ ಗುರುವಾರ ಬಿಡುಗಡೆ ಮಾಡಿತ್ತು.
ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ನೀಡಿದ ತುರ್ತು ಪ್ರಯಾಣ ಪ್ರಮಾಣಪತ್ರದ ಮೂಲಕ ಅಟ್ಟಾರಿ-ವಾಘಾ ಗಡಿಯ ಭೂ ಸಾರಿಗೆ ಮಾರ್ಗದ ಮೂಲಕ ಎಲ್ಲಾ ಕೈದಿಗಳು ಶುಕ್ರವಾರ ರಾತ್ರಿ ಭಾರತಕ್ಕೆ ಮರಳಿದ್ದಾರೆ ಎಂದು ಪಂಜಾಬ್ ಪೊಲೀಸ್ ಪ್ರೋಟೋಕಾಲ್ ಅಧಿಕಾರಿ ಅರುಣ್ ಮಹಲ್ ಹೇಳಿದ್ದಾರೆ.
ನಂತರ ಅವರನ್ನು ಭಾರತೀಯ ವೈದ್ಯರ ತಂಡದಿಂದ ತಪಾಸಣೆ ನಡೆಸಲಾಯಿತು. ಮೂರು ವರ್ಷಗಳ ಹಿಂದೆ ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಯಲ್ಲಿ ತೊಡಗಿದ್ದ ಅವರ ದೋಣಿಗಳು ಪಾಕಿಸ್ತಾನದ ಕಡೆಗೆ ತೆರಳಿದಾಗ ಅವರನ್ನು ಬಂಧಿಸಲಾಗಿತ್ತು. ಭಾರತಕ್ಕೆ ವಾಪಸ್ಸಾದ ನಂತರ ಭೂಮಿಗೆ ಗೌರವಾರ್ಥವಾಗಿ ನಮಸ್ಕರಿಸಿದರು ಎಂದು ಅವರು ಹೇಳಿದರು.
ಅರೇಬಿಯನ್ ಸಮುದ್ರದಲ್ಲಿನ ಕಡಲ ಗಡಿಯನ್ನು ಸರಿಯಾಗಿ ತಿಳಿಯದಕಾರಣ ಭಾರತ ಮತ್ತು ಪಾಕಿಸ್ತಾನದ ಮೀನುಗಾರರನ್ನು ಅವರ ದೋಣಿಗಳೊಂದಿಗೆ ಆಗಾಗ್ಗೆ ಬಂಧಿಸಲಾಗುತ್ತದೆ. ಅನೇಕ ಮೀನುಗಾರಿಕಾ ದೋಣಿಗಳು ತಮ್ಮ ನಿಖರವಾದ ಸ್ಥಳವನ್ನು ಕಂಡುಹಿಡಿಯಲು ಅಗತ್ಯವಾದ ತಂತ್ರಜ್ಞಾನವನ್ನು ಹೊಂದಿಲ್ಲದಿರುವುದು ಇದಕ್ಕೆ ಪ್ರಮುಖ ಕಾರಣವಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


