ಮುಳುವಾಯ್ತು ಮಹಿಳಾ ಸಹಪಾಠಿ ಜೊತೆ ಸಲುಗೆ: ಕೈ ಬೆರಳು ಕಳೆದುಕೊಂಡ ವಿದ್ಯಾರ್ಥಿ!
ಮಹಿಳಾ ಸಹಪಾಠಿಯ ಜತೆ ಸಲುಗೆಯಿಂದ ಮಾತನಾಡಿದ್ದಕ್ಕೆ 12ನೇ ತರಗತಿಯ ವಿದ್ಯಾರ್ಥಿಯ ಮೇಲೆ ಹಿರಿಯ ವಿದ್ಯಾರ್ಥಿಯೊಬ್ಬ ಹಲ್ಲೆ ನಡೆಸಿ, ಆತನ ಬೆರಳುಗಳನ್ನು ಕತ್ತರಿಸಿರುವ ಘಟನೆ ದೆಹಲಿಯ ದಕ್ಷಿಣ ದ್ವಾರಕದಲ್ಲಿ ನಡೆದಿದೆ.

ನವದೆಹಲಿ: ಮಹಿಳಾ ಸಹಪಾಠಿಯ ಜತೆ ಸಲುಗೆಯಿಂದ ಮಾತನಾಡಿದ್ದಕ್ಕೆ 12ನೇ ತರಗತಿಯ ವಿದ್ಯಾರ್ಥಿಯ ಮೇಲೆ ಹಿರಿಯ ವಿದ್ಯಾರ್ಥಿಯೊಬ್ಬ ಹಲ್ಲೆ ನಡೆಸಿ, ಆತನ ಬೆರಳುಗಳನ್ನು ಕತ್ತರಿಸಿರುವ ಘಟನೆ ದೆಹಲಿಯ ದಕ್ಷಿಣ ದ್ವಾರಕದಲ್ಲಿ ನಡೆದಿದೆ.
ಆರೋಪಿ ಅದೇ ಶಾಲೆಯ ಹಿರಿಯ ವಿದ್ಯಾರ್ಥಿಯಾಗಿದ್ದು, ಈಗಾಗಲೇ ಪದವಿಯನ್ನೂ ಮುಗಿಸಿದ್ದಾನೆ. ಅಕ್ಟೋಬರ್ 21 ರಂದು ಘಟನೆ ನಡೆದಿದ್ದು, ಭಯಗೊಂಡಿದ್ದ ವಿದ್ಯಾರ್ಥಿ, ಬೈಕ್ ಚೈನ್‌ಗೆ ಕೈ ಸಿಲುಕಿ ಬೆರಳುಗಳು ಕತ್ತರಿಸಿವೆ ಎಂದು ಪೋಷಕರಿಗೆ ಸುಳ್ಳು ಹೇಳಿದ್ದ ಎಂದು ಪೊಲೀಸರು ಹೇಳಿದ್ದಾರೆ.
ಶುಕ್ರವಾರ, ನೈಜ ಘಟನೆಯ ಬಗ್ಗೆ ಪೋಷಕರಿಗೆ ವಿದ್ಯಾರ್ಥಿ ತಿಳಿಸಿದ್ದಾನೆ. ಬಳಿಕ ದಾಖಲಾದ ದೂರಿನ ಅನ್ವಯ ಎಫ್‌ಐಆರ್ ದಾಖಲಿಸಲಾಗಿದೆ. ಆರೋಪಿಯು ನನ್ನನ್ನು ಶಾಲೆಯ ಹೊರಗಡೆ ಭೇಟಿಯಾಗಿ ಪಾರ್ಕ್‌ಗೆ ಕರೆದುಕೊಂಡು ಹೋಗಿದ್ದ.
ಈ ವೇಳೆ ಮಹಿಳಾ ಸಹಪಾಠಿ ಜತೆಗಿನ ಸ್ನೇಹದ ಬಗ್ಗೆ ತಕರಾರು ಎತ್ತಿ, ಕಲ್ಲಿನಿಂದ ಹಲ್ಲೆ ಮಾಡಿದ್ದಎಂದು ಹಲ್ಲೆಗೊಳಗಾದ ವಿದ್ಯಾರ್ಥಿ ಪೊಲೀಸರ ಬಳಿ ಹೇಳಿದ್ದಾನೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


