ಕಾಂಗ್ರೆಸ್, ಬಿಆರ್ಎಸ್ ಕಾರ್ಯಕರ್ತರ ನಡುವೆ ಘರ್ಷಣೆ: ಬಿಆರ್ಎಸ್ ಶಾಸಕ ಆಸ್ಪತ್ರೆಗೆ ದಾಖಲು
ತೆಲಂಗಾಣ ವಿಧಾನಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿಯಿರುವಂತೆಯೇ, ಆಡಳಿತಾರೂಢ ಭಾರತ್ ರಾಷ್ಟ್ರ ಸಮಿತಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ಘರ್ಷಣೆ ನಡೆಯುತ್ತಿದೆ.

ನಾಗರಕರ್ನೂಲ್: ತೆಲಂಗಾಣ ವಿಧಾನಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿಯಿರುವಂತೆಯೇ, ಆಡಳಿತಾರೂಢ ಭಾರತ್ ರಾಷ್ಟ್ರ ಸಮಿತಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ಘರ್ಷಣೆ ನಡೆಯುತ್ತಿದೆ.
ನಾಗರಕರ್ನೂಲ್ ಜಿಲ್ಲೆಯ ಅಚಂಪೇಟೆ ಪಟ್ಟಣದಲ್ಲಿ ಶನಿವಾರ ರಾತ್ರಿ 11 ಗಂಟೆಯಲ್ಲಿ ನಡೆದ ಘರ್ಷಣೆಯಲ್ಲಿ ಆಡಳಿತ ಪಕ್ಷದ ಶಾಸಕ ಗುವ್ವಲ ಬಾಲರಾಜು ಗಾಯಗೊಂಡಿದ್ದಾರೆ ಮತ್ತು ಇತರರೊಂದಿಗೆ ಹೈದರಾಬಾದ್ನ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಶಾಸಕರು ಮತದಾರರಿಗೆ ಹಣ ಹಂಚುತ್ತಿದ್ದಾರೆ ಎಂದು ಕಾಂಗ್ರೆಸ್ ಮುಖಂಡರು ಶಂಕಿಸಿದ್ದಾರೆ. ಇದು ಮಾತಿನ ಚಕಮಕಿಗೆ ಕಾರಣವಾಗಿದ್ದು, ಘರ್ಷಣೆ ಉಂಟಾಗಿದೆ. ಕೆಲವು ಕಾಂಗ್ರೆಸ್ ಮುಖಂಡರು ಶಾಸಕರ ಮೇಲೆ ಹಲ್ಲೆಗೆ ಯತ್ನಿಸಿದರು ಎಂದು ಅಚ್ಚಂಪೇಟೆಯ ವೃತ್ತ ನಿರೀಕ್ಷಕ ಅನುದೀಪ್ ಹೇಳಿದ್ದಾರೆ.
ಇನ್ನು ಪ್ರಕರಣ ದಾಖಲಿಸಿಕೊಳ್ಳಬೇಕಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಶನಿವಾರ ಸಂಜೆ ಪ್ರಚಾರ ಮುಗಿಸಿ ಅಚಂಪೇಟೆ ಪಟ್ಟಣಕ್ಕೆ ಆಗಮಿಸಿದ್ದ ಹಾಲಿ ಬಿಆರ್ಎಸ್ ಶಾಸಕರ ಮೇಲೆ ಕೆಲ ಕಾಂಗ್ರೆಸ್ ಮುಖಂಡರು ಅಡ್ಡಿಪಡಿಸಿ ಹಲ್ಲೆಗೆ ಯತ್ನಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


