ಕೇರಳ ಸರಣಿ ಬಾಂಬ್ ಸ್ಫೋಟ ಪ್ರಕರಣ: ಮತ್ತೊಬ್ಬ ಗಾಯಾಳು ಸಾವು, ಸಾವಿನ ಸಂಖ್ಯೆ 5ಕ್ಕೆ ಏರಿಕೆ
ಕೇರಳದ ಕ್ರಿಶ್ಚಿಯನ್ ಧಾರ್ಮಿಕ ಸಭೆಯಲ್ಲಿ ಸಂಭವಿಸಿದ ಸರಣಿ ಬಾಂಬ್ ಸ್ಫೋಟ ಪ್ರಕರಣದಲ್ಲಿ ಮೃತಪಟ್ಟವರ ಸಂಖ್ಯೆ 5ಕ್ಕೆ ಏರಿದೆ.

ಕೊಚ್ಚಿ: ಕೇರಳದ ಕ್ರಿಶ್ಚಿಯನ್ ಧಾರ್ಮಿಕ ಸಭೆಯಲ್ಲಿ ಸಂಭವಿಸಿದ ಸರಣಿ ಬಾಂಬ್ ಸ್ಫೋಟ ಪ್ರಕರಣದಲ್ಲಿ ಮೃತಪಟ್ಟವರ ಸಂಖ್ಯೆ 5ಕ್ಕೆ ಏರಿದೆ.
ಸ್ಫೋಟದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಪ್ರದೀಪ್ ಎಂಬ ವ್ಯಕ್ತಿ ಇಂದು ಮೃತಪಟ್ಟಿದ್ದಾರೆ. ಘಟನೆ ಬಳಿಕ ಇವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗಿನ ಜಾವ ಮೃತಪಟ್ಟಿದ್ದಾರೆ.
ಎರ್ನಾಕುಲಂ ಜಿಲ್ಲೆಯ ಮಲಯತ್ತೂರ್ನ ಲಿಬಿನಾ ಎಂಬ 12 ವರ್ಷದ ಬಾಲಕಿ ಕೂಡ ಅಕ್ಟೋಬರ್ 30 ರಂದು ಕಲಮಸ್ಸೆರಿ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಳು. ನವೆಂಬರ್ 6 ರಂದು 61 ವರ್ಷದ ವೃದ್ಧ ಮಹಿಳೆ ಸಾವನ್ನಪ್ಪಿದ್ದರು. ಅಷ್ಟು ಮಾತ್ರವಲ್ಲದೆ ಘಟನೆ ನಡೆದ ದಿನವೇ ಇಬ್ಬರು ಮಹಿಳೆಯರು ಮೃತಪಟ್ಟಿದ್ದರು ಇದರೊಂದಿಗೆ ಸ್ಪೋಟದಲ್ಲಿ ಮೃತಪಟ್ಟವರ ಸಂಖ್ಯೆ 5ಕ್ಕೆ ಏರಿಕೆಯಾಗಿದೆ.
ಕೇರಳದ ಕಲಮಸ್ಸೆರಿಯ ಅಂತಾರಾಷ್ಟ್ರೀಯ ಧಾರ್ಮಿಕ ಕೇಂದ್ರದಲ್ಲಿ ನಡೆದ ಬಹು ಸ್ಫೋಟಗಳ ಸಂದರ್ಭದಲ್ಲಿ 50 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು. ಕೆಲವರಿಗೆ ಗಂಭೀರವಾಗಿ ಗಾಯವಾಗಿತ್ತು. ಸ್ಫೋಟ ನಡೆದ ಕೆಲವು ಗಂಟೆಗಳ ನಂತರ ಡೊಮಿನಿಕ್ ಮಾರ್ಟಿನ್ ಎಂಬ ವ್ಯಕ್ತಿ, ಸ್ಫೋಟಕ್ಕೆ ಹೊಣೆ ಹೊತ್ತುಕೊಂಡು ಪೊಲೀಸರಿಗೆ ಶರಣಾಗಿದ್ದ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


