ಹಿಮಾಚಲ ಪ್ರದೇಶ:ಲೆಪ್ಚಾದಲ್ಲಿ ಯೋಧರೊಂದಿಗೆ ದೀಪಾವಳಿ ಆಚರಿಸಿದ ಪ್ರಧಾನಿ ಮೋದಿ
ಪ್ರತೀ ವರ್ಷ ದೀಪಾವಳಿ ಹಬ್ಬದ ವೇಳೆ ದೇಶದ ಗಡಿ ಕಾಯುವ ವೀರ ಯೋಧರ ಜೊತೆ ಹಬ್ಬ ಆಚರಿಸುವ ಪ್ರಧಾನಿ ಮೋದಿ, ಈ ಬಾರಿ ಕೂಡಾ ತಮ್ಮ ಪರಿಪಾಠವನ್ನು ಮುಂದುವರೆಸಿದ್ದಾರೆ. ಹಿಮಾಚಲ ಪ್ರದೇಶದ ಲೆಪ್ಚಾದಲ್ಲಿ ಪ್ರಧಾನಿ ಮೋದಿ ಅವರು ಭಾರತೀಯ ಸೇನೆಯ ಯೋಧರ ಜೊತೆ ದೀಪಾವಳಿ ಹಬ್ಬ ಆಚರಿಸಿದ್ದಾರೆ.

ಲೆಪ್ಚಾ (ಹಿಮಾಚಲ ಪ್ರದೇಶ): ಪ್ರತೀ ವರ್ಷ ದೀಪಾವಳಿ ಹಬ್ಬದ ವೇಳೆ ದೇಶದ ಗಡಿ ಕಾಯುವ ವೀರ ಯೋಧರ ಜೊತೆ ಹಬ್ಬ ಆಚರಿಸುವ ಪ್ರಧಾನಿ ಮೋದಿ, ಈ ಬಾರಿ ಕೂಡಾ ತಮ್ಮ ಪರಿಪಾಠವನ್ನು ಮುಂದುವರೆಸಿದ್ದಾರೆ. ಹಿಮಾಚಲ ಪ್ರದೇಶದ ಲೆಪ್ಚಾದಲ್ಲಿ ಪ್ರಧಾನಿ ಮೋದಿ ಅವರು ಭಾರತೀಯ ಸೇನೆಯ ಯೋಧರ ಜೊತೆ ದೀಪಾವಳಿ ಹಬ್ಬ ಆಚರಿಸಿದ್ದಾರೆ.
2022ರಲ್ಲಿ ಭಾರತ ಮತ್ತು ಪಾಕಿಸ್ತಾನ ಗಡಿಯ ಕಾರ್ಗಿಲ್‌ನಲ್ಲಿ ಸೈನಿಕರ ಜೊತೆ ದೀಪಾವಳಿ ಆಚರಣೆ ಮಾಡಿದ್ದ ಪ್ರಧಾನಿ ಮೋದಿ, 2023ರಲ್ಲಿ ಭಾರತ ಮತ್ತು ಚೀನಾ ಗಡಿಯ ಹಿಮಾಚಲ ಪ್ರದೇಶದ ಲೆಪ್ಚಾದಲ್ಲಿ ದೀಪಾವಳಿ ಸಂಭ್ರಮಾಚರಣೆ ನಡೆಸುವ ಮೂಲಕ ದೇಶದ ಗಮನ ಸೆಳೆದಿದ್ದಾರೆ.
ಭಾನುವಾರ ಬೆಳಗ್ಗೆಯೇ ಹಿಮಾಚಲ ಪ್ರದೇಶದ ಲೆಪ್ಚಾ ತಲುಪಿದ ಪ್ರಧಾನಿ ಮೋದಿ, ಗಡಿ ಭಾಗದ ಸೈನಿಕರಿಗೆ ಸಿಹಿ ಹಂಚಿ, ಉಡುಗೊರೆಗಳನ್ನು ನೀಡಿದರು. ಬಳಿಕ ಅವರೊಂದಿಗೆ ಜೊತೆ ಸಂವಾದ ನಡೆಸಿದರು.
ಈ ಕುರಿತಾದ ಫೋಟೋಗಳನ್ನೂ ಪ್ರಧಾನಿ ಮೋದಿ ಅವರು ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ (ಎಕ್ಸ್) ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


