ದೇಶ

ಯಮುನೋತ್ರಿಯಲ್ಲಿ ನಿರ್ಮಾಣ ಹಂತದ ಸುರಂಗ ಕುಸಿತ, 40 ಕಾರ್ಮಿಕರು ಸಿಲುಕಿರುವ ಶಂಕೆ

ಉತ್ತರಕಾಶಿಯ ಬ್ರಹ್ಮಖಾಲ್-ಯಮುನೋತ್ರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಿಲ್ಕ್ಯಾರಾ ಮತ್ತು ದಾಂಡಲ್‌ಗಾಂವ್ ನಡುವೆ ನಿರ್ಮಾಣ ಹಂತದ ಸುರಂಗ ಕುಸಿತಗೊಂಡಿದ್ದು, ಸುಮಾರು 40 ಮಂದಿ ಕಾರ್ಮಿಕರು ಸಿಲುಕಿಗೊಂಡಿರುವ ಶಂಕೆಗಳು ವ್ಯಕ್ತವಾಗಿವೆ.

ಯಮುನೋತ್ರಿಯಲ್ಲಿ ನಿರ್ಮಾಣ ಹಂತದ ಸುರಂಗ ಕುಸಿತ, 40 ಕಾರ್ಮಿಕರು ಸಿಲುಕಿರುವ ಶಂಕೆ
ಘಟನಾ ಸ್ಥಳ.
Published On :

ಉತ್ತರಕಾಶಿ: ಉತ್ತರಕಾಶಿಯ ಬ್ರಹ್ಮಖಾಲ್-ಯಮುನೋತ್ರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಿಲ್ಕ್ಯಾರಾ ಮತ್ತು ದಾಂಡಲ್‌ಗಾಂವ್ ನಡುವೆ ನಿರ್ಮಾಣ ಹಂತದ ಸುರಂಗ ಕುಸಿತಗೊಂಡಿದ್ದು, ಸುಮಾರು 40 ಮಂದಿ ಕಾರ್ಮಿಕರು ಸಿಲುಕಿಗೊಂಡಿರುವ ಶಂಕೆಗಳು ವ್ಯಕ್ತವಾಗಿವೆ.

ಭಾನುವಾರ ಬೆಳಗ್ಗೆ 5.30ರ ಸುಮಾರಿಗೆ ಅವಘಡ ಸಂಭವಿಸಿದೆ. ಸಿಲ್ಕ್ಯಾರಾ-ದಂಡಲ್ವಾಲ್ ಸುರಂಗದ ಮುಂಭಾಗದ ಭಾಗವು ಮುರಿದುಹೋಗಿದೆ ಎಂದು ವರದಿಗಳು ತಿಳಿಸಿವೆ.

ಸುದ್ದಿ ತಿಳಿಯುತ್ತಿದ್ದಂತೆಯೇ ಉನ್ನತ ಪೊಲೀಸ್ ಮತ್ತು ಆಡಳಿತಾಧಿಕಾರಿಗಳು ಸ್ಥಳಕ್ಕೆ ಆಗಮಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಎನ್​ಡಿಆರ್​ಎಫ್ ತಂಡಗಳು ಪರಿಹಾರ ಮತ್ತು ರಕ್ಷಣಾ ಕಾರ್ಯದಲ್ಲಿ ತೊಡಗಿವೆ. ಎಲ್ಲಾ ಕಾರ್ಮಿಕರನ್ನು ಸುರಕ್ಷಿತವಾಗಿ ಸ್ಥಳಾಂತರಿಸುವ ಕಾರ್ಯ ನಡೆಯುತ್ತಿದೆ.

ಘಟನೆಯಲ್ಲಿ ಇದುವರೆಗೆ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಜೆಸಿಬಿ ಸಹಾಯದಿಂದ ಅವಶೇಷಗಳನ್ನು ತೆಗೆಯಲಾಗುತ್ತಿದೆ.

ಸ್ಥಳದಲ್ಲಿ ಸುಮಾರು 2700 ಮೀಟರ್ ವ್ಯಾಪ್ತಿಯಲ್ಲಿ 40 ರಿಂದ 50 ಕೂಲಿ ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಕೆಲಸದ ಸ್ಥಳಕ್ಕೆ ಆಮ್ಲಜನಕ ಪೂರೈಸಲು ಹಾಕಿದ್ದ ಲೈನ್ ಕೂಡ ಅವಶೇಷಗಳಿಂದ ನಾಶವಾಗಿದೆ. ಆದರೆ, ಒಳಗೆ ಸಾಕಷ್ಟು ನೀರು ಮತ್ತು ಆಮ್ಲಜನಕ ಲಭ್ಯವಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.