ಛತ್ತೀಸಗಢದಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೇರಿದರೆ ಮಹಿಳೆಯರಿಗೆ ವಾರ್ಷಿಕ 15,000 ರೂ. ನೆರವು: ಭೂಪೇಶ್ ಬಘೇಲ್
ಛತ್ತೀಸಗಢದಲ್ಲಿ ಕಾಂಗ್ರೆಸ್ ಅಧಿಕಾರವನ್ನು ಉಳಿಸಿಕೊಂಡರೆ, ರಾಜ್ಯದಲ್ಲಿ ಮಹಿಳೆಯರಿಗೆ ವಾರ್ಷಿಕ 15,000 ರೂಪಾಯಿ ಆರ್ಥಿಕ ನೆರವು ನೀಡಲಾಗುವುದು ಎಂದು ಮುಖ್ಯಮಂತ್ರಿ ಭೂಪೇಶ್ ಬಘೇಲ್ ಭಾನುವಾರ ಹೇಳಿದ್ದಾರೆ.

ರಾಯ್ಪುರ: ಛತ್ತೀಸಗಢದಲ್ಲಿ ಕಾಂಗ್ರೆಸ್ ಅಧಿಕಾರವನ್ನು ಉಳಿಸಿಕೊಂಡರೆ, ರಾಜ್ಯದಲ್ಲಿ ಮಹಿಳೆಯರಿಗೆ ವಾರ್ಷಿಕ 15,000 ರೂಪಾಯಿ ಆರ್ಥಿಕ ನೆರವು ನೀಡಲಾಗುವುದು ಎಂದು ಮುಖ್ಯಮಂತ್ರಿ ಭೂಪೇಶ್ ಬಘೇಲ್ ಭಾನುವಾರ ಹೇಳಿದ್ದಾರೆ.
ನವೆಂಬರ್ 17ರಂದು ನಡೆಯಲಿರುವ ಛತ್ತೀಸ್ಗಢದ ಎರಡನೇ ಹಂತದ ಚುನಾವಣೆಗೆ ಮುಂಚಿತವಾಗಿ ಈ ಘೋಷಣೆ ಮಾಡಿದ್ದು, ವಿವಾಹಿತ ಮಹಿಳೆಯರಿಗೆ ವರ್ಷಕ್ಕೆ 12,000 ರೂಪಾಯಿಗಳನ್ನು ನೀಡುವ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿನ ಪ್ರತಿಪಕ್ಷ ಬಿಜೆಪಿಯ ಭರವಸೆಗೆ ಪ್ರತಿಯಾಗಿ ನೀಡಲಾಗಿದೆ.
ಇಂದು ದೀಪಾವಳಿಯ ಶುಭ ಸಂದರ್ಭದಲ್ಲಿ, ಮಾ ಲಕ್ಷ್ಮಿ ಜಿ ಮತ್ತು ಛತ್ತೀಸ್ಗಢ ಮಹತಾರಿ ಅವರ ಆಶೀರ್ವಾದದೊಂದಿಗೆ, ಮಹಿಳಾ ಸಬಲೀಕರಣಕ್ಕಾಗಿ ಮಹತ್ವದ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಘೇಲ್ ರಾಯ್ಪುರದಲ್ಲಿ ಸುದ್ದಿಗಾರರಿಗೆ ತಿಳಿಸಿದರು.
ಛತ್ತೀಸ್ಗಢದಲ್ಲಿ ಮತ್ತೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ, ರಾಜ್ಯದ ಮಹಿಳೆಯರಿಗೆ ಛತ್ತೀಸಗಢ ಗೃಹ ಲಕ್ಷ್ಮಿ ಯೋಜನೆ ಅಡಿಯಲ್ಲಿ ನೇರವಾಗಿ ಅವರ ಬ್ಯಾಂಕ್ ಖಾತೆಗಳಿಗೆ ವಾರ್ಷಿಕ 15,000 ರೂ.ಗಳ ಸಹಾಯವನ್ನು ಒದಗಿಸಲಾಗುವುದು ಎಂದು ಅವರು ಹೇಳಿದರು.
ಇದನ್ನೂ ಓದಿ: ಛತ್ತೀಸ್ ಗಢ ಬಿಜೆಪಿ ಪ್ರಣಾಳಿಕೆ ಬಿಡುಗಡೆ: ವಿವಾಹಿತ ಮಹಿಳೆಯರಿಗೆ ವಾರ್ಷಿಕ 12,000 ರೂ. ಸೇರಿ ಹಲವು ಭರವಸೆ
ಇದರೊಂದಿಗೆ, ಬಘೇಲ್ ರಾಜ್ಯದ ಜನತೆಗೆ ದೀಪಾವಳಿ ಹಬ್ಬದ ಶುಭಾಶಯ ಕೋರಿದ್ದಾರೆ.
ರಾಜ್ಯದ ಒಟ್ಟು 90 ವಿಧಾನಸಭಾ ಕ್ಷೇತ್ರಗಳ ಪೈಕಿ 20 ಕ್ಷೇತ್ರಗಳಿಗೆ ನವೆಂಬರ್ 7ರಂದು ಮೊದಲ ಹಂತದ ಮತದಾನ ನಡೆದಿತ್ತು. ಉಳಿದ 70 ಸ್ಥಾನಗಳಿಗೆ ನವೆಂಬರ್ 17ರಂದು ಮತದಾನ ನಡೆಯಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


