ದೇಶ

ಛತ್ತೀಸ್‌ಗಢದಿಂದ ಕಾಂಗ್ರೆಸ್ ನಿರ್ಗಮನಕ್ಕೆ ಕ್ಷಣಗಣನೆ ಆರಂಭ: ಪ್ರಧಾನಿ ಮೋದಿ

ಛತ್ತೀಸ್‌ಗಢದಲ್ಲಿ ಕಾಂಗ್ರೆಸ್ ಸರ್ಕಾರದ ನಿರ್ಗಮನಕ್ಕೆ ಕ್ಷಣಗಣನೆ ಆರಂಭವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಪ್ರತಿಪಾದಿಸಿದ್ದಾರೆ. ಛತ್ತೀಸ್‌ಗಢದ ಮುಂಗೇಲಿಯಲ್ಲಿ ಚುನಾವಣಾ ಪ್ರಚಾರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಪ್ರಧಾನಿ,ಮೊದಲ ಹಂತದ ಚುನಾವಣೆಯ ನಂತರ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಂತ್ಯಗೊಳ್ಳಲಿದೆ ಎಂದು ಭವಿಷ್ಯ ನುಡಿದರು.

ಛತ್ತೀಸ್‌ಗಢದಿಂದ ಕಾಂಗ್ರೆಸ್ ನಿರ್ಗಮನಕ್ಕೆ ಕ್ಷಣಗಣನೆ ಆರಂಭ: ಪ್ರಧಾನಿ ಮೋದಿ
ಪ್ರಧಾನಿ ನರೇಂದ್ರ ಮೋದಿ
Published On :

ಮುಂಗೇಲಿ: ಛತ್ತೀಸ್‌ಗಢದಲ್ಲಿ ಕಾಂಗ್ರೆಸ್ ಸರ್ಕಾರದ ನಿರ್ಗಮನಕ್ಕೆ ಕ್ಷಣಗಣನೆ ಆರಂಭವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಪ್ರತಿಪಾದಿಸಿದ್ದಾರೆ. ಛತ್ತೀಸ್‌ಗಢದ ಮುಂಗೇಲಿಯಲ್ಲಿ ಚುನಾವಣಾ ಪ್ರಚಾರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಪ್ರಧಾನಿ,ಮೊದಲ ಹಂತದ ಚುನಾವಣೆಯ ನಂತರ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಂತ್ಯಗೊಳ್ಳಲಿದೆ ಎಂದು ಭವಿಷ್ಯ ನುಡಿದರು.

ಕಾಂಗ್ರೆಸ್‌ನ ಕೆಟ್ಟ ಆಡಳಿತದ ಅಂತ್ಯದ ಮಾತುಗಳು ಕೇಳಿಬರುತ್ತಿದೆ. ಇದೀಗ ಕಾಂಗ್ರೆಸ್ ನ 'ಬಿದಾಯಿ'ಯ ಕ್ಷಣಗಣನೆ ಶುರುವಾಗಿದೆ. ಐದು ವರ್ಷ ನಿಮ್ಮನ್ನು ಲೂಟಿ ಮಾಡಿದ ಕಾಂಗ್ರೆಸ್ ನಾಯಕರ ಬೀಳ್ಕೊಡುವ ಸಮಯ ಬಂದಿದೆ. ರಾಜ್ಯದಿಂದ ಕಾಂಗ್ರೆಸ್ ಕಿತ್ತೂಗೆಯಲು ರಾಜ್ಯದ ಜನರು ಉತ್ಸುಕರಾಗಿದ್ದಾರೆ. ಸಾರ್ವಜನಿಕರು ಇನ್ನು ಮುಂದೆ ಕಾಂಗ್ರೆಸ್ ಬಯಸುವುದಿಲ್ಲ ಎಂದು ಪ್ರಧಾನಿ ಹೇಳಿದರು.

ಛತ್ತೀಸ್‌ಗಢದ ಸಿಎಂ ಭೂಪೇಶ್ ಬಘೇಲ್ ಅವರ ವಿರುದ್ಧದ  ಭ್ರಷ್ಟಾಚಾರದ ಆರೋಪದ ವಿರುದ್ಧ ವಾಗ್ದಾಳಿ ನಡೆಸಿದ ಪ್ರಧಾನಿ ಮೋದಿ, ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಭ್ರಷ್ಟಾಚಾರದ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.