ನಾಗಾಲ್ಯಾಂಡ್; ಪಟಾಕಿ ಕಿಡಿ ತಗುಲಿ ಬೆಂಕಿ ಅವಘಡ, ಮಕ್ಕಳು ಸೇರಿ ಒಂದೇ ಕುಟುಂಬದ ಐವರು ಸಜೀವ ದಹನ
ನಾಗಾಲ್ಯಾಂಡ್‌ನ ದಿಮಾಪುರ್ ಜಿಲ್ಲೆಯ ನಹರ್ಬರಿ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡು ಮೂವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಐವರು ಸಜೀವ ದಹನಗೊಂಡಿದ್ದಾರೆ ಎಂದು ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ.

ದಿಮಾಪುರ: ನಾಗಾಲ್ಯಾಂಡ್‌ನ ದಿಮಾಪುರ್ ಜಿಲ್ಲೆಯ ನಹರ್ಬರಿ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡು ಮೂವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಐವರು ಸಜೀವ ದಹನಗೊಂಡಿದ್ದಾರೆ ಎಂದು ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ.
ಭಾನುವಾರ ರಾತ್ರಿ 10.45 ರ ಸುಮಾರಿಗೆ ಈ ಘಟನೆ ಸಂಭವಿಸಿದ್ದು, ನಾಗ ಸಮುದಾಯವಲ್ಲದ ಜನರು ವಾಸಿಸುವ ಹುಲ್ಲಿನ ಮನೆಗಳ ಸಾಲುಗಳಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಅವರು ಹೇಳಿದರು.
ದೀಪಾವಳಿ ಆಚರಣೆ ವೇಳೆ ಪಟಾಕಿ ಸಿಡಿಸಿದ್ದರಿಂದ ಬೆಂಕಿ ಹೊತ್ತಿಕೊಂಡಿರುವ ಸಾಧ್ಯತೆ ಇದೆ. ಬೆಂಕಿಯಿಂದಾಗಿ ಸುಮಾರು 50 ಕುಟುಂಬಗಳು ತೊಂದರೆಗೀಡಾಗಿವೆ ಎಂದು ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಅಧಿಕಾರಿ ತಿಳಿಸಿದ್ದಾರೆ.
ಆರು ಅಗ್ನಿಶಾಮಕ ವಾಹನಗಳು ಸುಮಾರು ಎರಡು ಗಂಟೆಗಳ ಕಾರ್ಯಾಚರಣೆಯ ನಂತರ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿವೆ.
ಆದರೆ, ಅಗ್ನಿ ಅವಘಡಕ್ಕೆ ನಿಖರ ಕಾರಣ ತನಿಖೆಯ ನಂತರವೇ ತಿಳಿಯಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮೃತರ ಶವಗಳನ್ನು ಪೊಲೀಸರಿಗೆ ಹಸ್ತಾಂತರಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


