ಕೇರಳ: ಅಲುವಾ ಅತ್ಯಾಚಾರ, ಕೊಲೆ ಪ್ರಕರಣ- ಅಪರಾಧಿಗೆ ಮರಣದಂಡನೆ
ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಅಪರಾಧಿಯಾಗಿದ್ದ ವ್ಯಕ್ತಿಗೆ ಕೇರಳ ನ್ಯಾಯಾಲಯ ಮಂಗಳವಾರ ಮರಣದಂಡನೆ ವಿಧಿಸಿದೆ.

ಅಲುವಾ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಅಪರಾಧಿಯಾಗಿದ್ದ ವ್ಯಕ್ತಿಗೆ ಕೇರಳ ನ್ಯಾಯಾಲಯ ಮಂಗಳವಾರ ಮರಣದಂಡನೆ ವಿಧಿಸಿದೆ.
ಬಿಹಾರದ 5 ವರ್ಷದ ಬಾಲಕಿಯನ್ನು ಅತ್ಯಾಚಾರ ಮಾಡಿ ಕೊಂದ ವಲಸೆ ಕಾರ್ಮಿಕ ಅಶ್ವಕ್ ಆಲಂಗೆ ಪೋಕ್ಸೋ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಕೆ ಸೋಮನ್ ಅವರ ಉಗ್ರ ಶಿಕ್ಷೆಯನ್ನು ಪ್ರಕಟಿಸಿದರು.ದೇಶಾದ್ಯಂತ ಮಕ್ಕಳ ದಿನಾಚರಣೆ ದಿನದಂದೇ ಈ ಶಿಕ್ಷೆಯನ್ನು ಪ್ರಕಟಿಸಲಾಯಿತು.
ಆಲಂಗೆ ಶಿಕ್ಷೆ ವಿಧಿಸಿದಾಗ ಸಂತ್ರಸ್ತೆಯ ಪೋಷಕರು ನ್ಯಾಯಾಲಯಕ್ಕೆ ಹಾಜರಾಗಿದ್ದರು. ಪ್ರಕರಣ ಅಪರೂಪದ-ಅಪರೂಪದ ವರ್ಗಕ್ಕೆ ಸೇರುತ್ತದೆ ಮತ್ತು ಆದ್ದರಿಂದ ಅಪರಾಧಿಗೆ ಮರಣದಂಡನೆ ವಿಧಿಸಬೇಕು ಎಂದು ಪ್ರಾಸಿಕ್ಯೂಷನ್ ವಾದಿಸಿತ್ತು. ಶಿಕ್ಷೆ ಕುರಿತ ವಾದದ ಸಮಯದಲ್ಲಿ, ಇತರ ಆರೋಪಿಗಳನ್ನು ಬಿಡಲಾಗಿದ್ದು, ನನನ್ನು ಮಾತ್ರ ಪ್ರಕರಣದಲ್ಲಿ ಸಿಲುಕಿಸಿದ್ದಾರೆ ಎಂದು ಆಲಂ ನ್ಯಾಯಾಲಯದಲ್ಲಿ ಹೇಳಿದ್ದರು ಮತ್ತು ಅದನ್ನು ಮೀರಿ ಅವರು ಯಾವುದೇ ಸಲ್ಲಿಕೆಯನ್ನು ಮಾಡಲಿಲ್ಲ ಎಂದು ಪ್ರಾಸಿಕ್ಯೂಷನ್ ಹೇಳಿದೆ.
ಚಾರ್ಜ್ ಶೀಟ್‌ನಲ್ಲಿ ಎಲ್ಲಾ 16 ಅಪರಾಧಗಳಲ್ಲಿ ಆಲಂ ತಪ್ಪಿತಸ್ಥನೆಂದು ನ್ಯಾಯಾಲಯ ತೀರ್ಪು ನೀಡಿತ್ತು. 16ರಲ್ಲಿ ಐದು ಅಪರಾಧಗಳಿಗೆ ಮರಣದಂಡನೆ ಶಿಕ್ಷೆಯಾಗುತ್ತದೆ ಎಂದು ಪ್ರಾಸಿಕ್ಯೂಷನ್ ಈ ಹಿಂದೆ ಹೇಳಿತ್ತು.
ಜುಲೈ 28 ರಂದು ಅಪ್ರಾಪ್ತ ಬಾಲಕಿಯನ್ನು ಬಾಡಿಗೆ ಮನೆಯಿಂದ ಅಪಹರಿಸಿದ ನಂತರ ಆಕೆಯ ಮೇಲೆ ಅಮಾನುಷ ಅತ್ಯಾಚಾರ ನಡೆಸಿ ಕತ್ತು ಹಿಸುಕಿ ಹತ್ಯೆ ಮಾಡಲಾಗಿತ್ತು. ಬಳಿಕ ಆಲುವಾದಲ್ಲಿನ ಸ್ಥಳೀಯ ಮಾರುಕಟ್ಟೆಯ ಹಿಂಭಾಗದ ಪ್ರದೇಶದಲ್ಲಿ ಬಾಲಕಿಯ ಶವವನ್ನು ಬಣವೆಯಲ್ಲಿ ಎಸೆದಿರುವುದು ಪತ್ತೆಯಾಗಿತ್ತು. ಸಿಸಿಟಿವಿ ದೃಶ್ಯಗಳನ್ನು ಆಧರಿಸಿ ಆರೋಪಿಯನ್ನು ಬಂಧಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


