ವ್ಯಭಿಚಾರವನ್ನು ಮತ್ತೆ ಅಪರಾಧದ ವ್ಯಾಪ್ತಿಗೆ ತನ್ನಿ: ಸುಪ್ರೀಂ ತೀರ್ಪಿಗೆ ವ್ಯತಿರಿಕ್ತವಾಗಿ ಸಂಸದೀಯ ಸಮಿತಿ ಶಿಫಾರಸು!
ವಿವಾಹ (ಗೃಹಸ್ಥ) ವ್ಯವಸ್ಥೆ ಪಾವಿತ್ರ್ಯತೆಯನ್ನು ಹೊಂದಿದೆ. ಆದ್ದರಿಂದ ವ್ಯಭಿಚಾರವನ್ನು ಮತ್ತೆ ಅಪರಾಧದ ವ್ಯಾಪ್ತಿಗೆ ತರಬೇಕು ಎಂದು ಸಂಸದೀಯ ಸಮಿತಿ ಸರ್ಕಾರಕ್ಕೆ ಶಿಫಾರಸು ಮಾಡಿದೆ.

ನವದೆಹಲಿ: ವಿವಾಹ (ಗೃಹಸ್ಥ) ವ್ಯವಸ್ಥೆ ಪಾವಿತ್ರ್ಯತೆಯನ್ನು ಹೊಂದಿದೆ. ಆದ್ದರಿಂದ ವ್ಯಭಿಚಾರವನ್ನು ಮತ್ತೆ ಅಪರಾಧದ ವ್ಯಾಪ್ತಿಗೆ ತರಬೇಕು ಎಂದು ಸಂಸದೀಯ ಸಮಿತಿ ಸರ್ಕಾರಕ್ಕೆ ಶಿಫಾರಸು ಮಾಡಿದೆ.
2018 ರ ಸೆಪ್ಟೆಂಬರ್ ನಲ್ಲಿ ತೀರ್ಪು ಪ್ರಕಟಿಸಿದ್ದ ಸುಪ್ರೀಂ ಕೋರ್ಟ್, ವ್ಯಭಿಚಾರವನ್ನು ಅಪರಾಧವಲ್ಲ ಎಂಬ ತೀರ್ಪು ಪ್ರಕಟಿಸಿತ್ತು.
ಈಗ, ಈ ವರ್ಷ ಸೆಪ್ಟೆಂಬರ್ ನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಂಡಿಸಿದ್ದ ಭಾರತೀಯ ನ್ಯಾಯ ಸಂಹಿತೆ ಮಸೂದೆಗೆ ಸಂಬಂಧಿಸಿದ ವರದಿಯಲ್ಲಿ ಸಂಸದೀಯ ಮಂಡಳಿ ಈ ಶಿಫಾರಸ್ಸನ್ನು ಮುಂದಿಟ್ಟಿದೆ.
ಪರಿಷ್ಕೃತ ವ್ಯಭಿಚಾರ ಕಾನೂನಿನಲ್ಲಿ ಇದನ್ನು "ಲಿಂಗ-ತಟಸ್ಥ" ಅಪರಾಧ ಎಂದು ಪರಿಗಣಿಸಬೇಕು ಎಂದು ವರದಿ ಹೇಳಿದೆ ಮತ್ತು ಪುರುಷ ಮತ್ತು ಮಹಿಳೆ - ಎರಡೂ ಪಕ್ಷಗಳನ್ನು ಸಮಾನ ಹೊಣೆಗಾರರನ್ನಾಗಿ ಮಾಡಲು ಒತ್ತಾಯಿಸಿದೆ.
ಸಮಿತಿಯ ವರದಿಯನ್ನು ಸರ್ಕಾರವು ಅಂಗೀಕರಿಸಿದರೆ, "ವ್ಯಭಿಚಾರ ಅಪರಾಧವಾಗಬಾರದು ಎಂಬ 2018 ರ ಸುಪ್ರೀಂ ಕೋರ್ಟ್‌ನ ಪಂಚ ಸದಸ್ಯ ಪೀಠ ನೀಡಿದ್ದ ಮಹತ್ವದ ತೀರ್ಪಿಗೆ ವ್ಯತಿರಿಕ್ತವಾಗಿರಲಿದೆ.
ಭಾರತೀಯ ನ್ಯಾಯ ಸಂಹಿತಾವು ಭಾರತೀಯ ದಂಡ ಸಂಹಿತೆ, ಕ್ರಿಮಿನಲ್ ಪ್ರಕ್ರಿಯಾ ಸಂಹಿತೆ ಮತ್ತು ಭಾರತೀಯ ಪುರಾವೆಗಳ ಕಾಯಿದೆಯನ್ನು ಬದಲಿಸುವ ಮೂರು ಗುಂಪಿನ ಭಾಗವಾಗಿದೆ. ಇದನ್ನು ಹೆಚ್ಚಿನ ಪರಿಶೀಲನೆಗಾಗಿ ಬಿಜೆಪಿ ಸಂಸದ ಬ್ರಿಜ್ ಲಾಲ್ ನೇತೃತ್ವದ ಗೃಹ ವ್ಯವಹಾರಗಳ ಸ್ಥಾಯಿ ಸಮಿತಿಗೆ ಆಗಸ್ಟ್‌ನಲ್ಲಿ ಕಳುಹಿಸಲಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


