ರಾಜಸ್ಥಾನ ವಿಧಾನಸಭೆ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ಗುರ್‌ಮೀತ್ ಸಿಂಗ್ ಕೂನರ್ ನಿಧನ
ರಾಜಸ್ಥಾನದ ಕರಣ್‌ಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗುರ್‌ಮೀತ್ ಸಿಂಗ್ ಕೂನರ್ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು.

ಜೈಪುರ: ರಾಜಸ್ಥಾನದ ಕರಣ್‌ಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗುರ್‌ಮೀತ್ ಸಿಂಗ್ ಕೂನರ್ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು.
ಮೂತ್ರಪಿಂಡ ಸಮಸ್ಯೆ ಹಾಗೂ ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದ ಅವರು ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆಗೆ ಸ್ಪಂದಿಸದೇ ಗುರ್‌ಮೀತ್ ಸಿಂಗ್ ಮೃತಪಟ್ಟರು ಎಂದು ವೈದ್ಯರು ಹೇಳಿದ್ದಾರೆ.
ಗುರ್‌ಮೀತ್ ಸಿಂಗ್ ಕೂನರ್ ನಿಧನವನ್ನು ಕಾಂಗ್ರೆಸ್ ಪಕ್ಷದ ಮೂಲಗಳು ಖಚಿತಪಡಿಸಿದ್ದು ಯಾವುದೇ ಹೇಳಿಕೆ ನೀಡಿಲ್ಲ. 200 ಕ್ಷೇತ್ರಗಳಿರುವ ರಾಜಸ್ಥಾನ ವಿಧಾನಸಭೆಗೆ ನವೆಂಬರ್ 25 ರಂದು ಚುನಾವಣೆ ನಡೆಯಲಿದೆ.
ಕರಣ್‌ಪುರದ ಹಾಲಿ ಶಾಸಕರಾಗಿದ್ದ ಕೂನರ್ ಅವರನ್ನು ನವೆಂಬರ್ 12 ರಂದು ದೆಹಲಿಯ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (ಎಐಐಎಂಎಸ್) ನ ಜೆರಿಯಾಟ್ರಿಕ್ ಮೆಡಿಸಿನ್ ವಾರ್ಡ್‌ಗೆ ದಾಖಲಿಸಲಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


