ಟೆಲಿಗ್ರಾಂನಲ್ಲಿ ಮಕ್ಕಳ ಪೋರ್ನ್ ಉಚಿತವಾಗಿ ಲಭ್ಯ: ತೆಲಂಗಾಣ ಪೊಲೀಸರಿಗೆ ಕಾರ್ಯಕರ್ತೆ ದೂರು
ಸಾಮಾಜಿಕ ಕಾರ್ಯಕರ್ತೆ ಸುನೀತಾ ಕೃಷ್ಣನ್ ಅವರು ನೀಡಿದ ದೂರಿನ ಆಧಾರದ ಮೇಲೆ ಸಂದೇಶ ಕಳುಹಿಸುವ ಅಪ್ಲಿಕೇಶನ್‌ಗಳಲ್ಲಿ ಮಕ್ಕಳ ಲೈಂಗಿಕ ನಿಂದನೆ ಮೆಟೀರಿಯಲ್(ಸಿಎಸ್‌ಎಎಂ) ಲಭ್ಯತೆಗೆ ಕಡಿವಾಣ ಹಾಕಲು ತೆಲಂಗಾಣ ಪೊಲೀಸರು...

ಹೈದರಾಬಾದ್: ಸಾಮಾಜಿಕ ಕಾರ್ಯಕರ್ತೆ ಸುನೀತಾ ಕೃಷ್ಣನ್ ಅವರು ನೀಡಿದ ದೂರಿನ ಆಧಾರದ ಮೇಲೆ ಸಂದೇಶ ಕಳುಹಿಸುವ ಅಪ್ಲಿಕೇಶನ್‌ಗಳಲ್ಲಿ ಮಕ್ಕಳ ಲೈಂಗಿಕ ನಿಂದನೆ ಮೆಟೀರಿಯಲ್(ಸಿಎಸ್‌ಎಎಂ) ಲಭ್ಯತೆಗೆ ಕಡಿವಾಣ ಹಾಕಲು ತೆಲಂಗಾಣ ಪೊಲೀಸರು ಮುಂದಾಗಿದ್ದಾರೆ.
ಕೃಷ್ಣನ್ ಅವರು ಡಿಜಿಪಿ ಅಂಜನಿ ಕುಮಾರ್ ಅವರಿಗೆ ನೀಡಿದ ದೂರಿನಲ್ಲಿ, ಟೆಲಿಗ್ರಾಮ್‌ನಂತಹ ಮೆಸೇಜಿಂಗ್ ಪ್ಲಾಟ್‌ಫಾರ್ಮ್‌ಗಳಲ್ಲಿ ಸಿಎಸ್‌ಎಎಂ ಉಚಿತ ಲಭ್ಯತೆ ಮತ್ತು ಮಕ್ಕಳ ಪೋರ್ನ್ ವಿಡಿಯೋಗೆ ಪ್ರವೇಶಿಸಲು ಫೋನ್‌ಪೇ ಮತ್ತು ಪೇಟಿಎಂನಂತಹ ಪಾವತಿ ಸೌಲಭ್ಯಗಳನ್ನು ಸುಲಭವಾಗಿ ಬಳಸಿಕೊಳ್ಳುವ ಗಂಭೀರ ಸಮಸ್ಯೆಯನ್ನು ಎತ್ತಿದ್ದಾರೆ.
ಪ್ರಜ್ವಲ ಸಂಸ್ಥೆಯ ಸಹ ಸಂಸ್ಥಾಪಕಿಯಾಗಿರುವ ಸಾಮಾಜಿಕ ಕಾರ್ಯಕರ್ತೆಯಾಗಿರುವ ಕೃಷ್ಣನ್ ಅವರು ಮಕ್ಕಳ ದಿನಾಚರಣೆಯಂದು ದೂರು ದಾಖಲಿಸಿದ್ದಾರೆ. ತಮ್ಮ ಚಾನೆಲ್‌ಗಳಲ್ಲಿ ವಿನಿಮಯವಾಗುತ್ತಿರುವ ವಿಷಯವನ್ನು ಫಿಲ್ಟರ್ ಮಾಡುವ ಜವಾಬ್ದಾರಿಯನ್ನು ಮೆಸೇಜಿಂಗ್ ಪ್ಲಾಟ್‌ಫಾರ್ಮ್‌ಗಳು ತೆಗೆದುಕೊಳ್ಳುತ್ತಿಲ್ಲ. ಹೀಗಾಗಿ ಅವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.
ಈ ಬಗ್ಗೆ ದಿ ನ್ಯೂ ಇಂಡಿಯನ್ ಎಕ್ರ್ ಪ್ರೆಸ್ ಗೆ ಪ್ರತಿಕ್ರಿಯಿಸಿದ ಮಹಿಳಾ ಸುರಕ್ಷತಾ ವಿಭಾಗದ ಎಡಿಜಿಪಿ ಶಿಖಾ ಗೋಯೆಲ್ ಅವರು CSAM ಚಲಾವಣೆಯಲ್ಲಿದೆ ಎಂದು ಒಪ್ಪಿಕೊಂಡಿದ್ದಾರೆ.
ನಮ್ಮ ಇಲಾಖೆಯು ಈ ಬಗ್ಗೆ ಇನ್ನೂ ಯಾವುದೇ ದೂರನ್ನು ಸ್ವೀಕರಿಸದಿದ್ದರೂ, ಅಂತಹ ವಸ್ತುಗಳ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


