ಛತ್ತೀಸ್ ಗಢದ ಗರಿಯಾಬಾದ್ ನಲ್ಲಿ ನಕ್ಸಲ್ ಸ್ಫೋಟ: ಐಟಿಬಿಪಿ ಯೋಧ ಹುತಾತ್ಮ
ಛತ್ತೀಸ್ ಗಢ ವಿಧಾನಸಭೆ ಚುನಾವಣೆಯ ಎರಡನೇ ಹಂತದ ಮತದಾನ ನಡೆದ ಗರಿಯಾಬಂದ್ ಜಿಲ್ಲೆಯಲ್ಲಿ ಇಂದು ಶುಕ್ರವಾರ ನಕ್ಸಲೀಯರು ನಡೆಸಿದ ಸ್ಫೋಟದಲ್ಲಿ ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ (ITBP) ಯೋಧರೊಬ್ಬರು ಹುತಾತ್ಮರಾಗಿದ್ದಾರೆ.

ಗರಿಯಾಬಂದ್: ಛತ್ತೀಸ್ ಗಢ ವಿಧಾನಸಭೆ ಚುನಾವಣೆಯ ಎರಡನೇ ಹಂತದ ಮತದಾನ ನಡೆದ ಗರಿಯಾಬಂದ್ ಜಿಲ್ಲೆಯಲ್ಲಿ ಇಂದು ಶುಕ್ರವಾರ ನಕ್ಸಲೀಯರು ನಡೆಸಿದ ಸ್ಫೋಟದಲ್ಲಿ ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ (ITBP) ಯೋಧರೊಬ್ಬರು ಹುತಾತ್ಮರಾಗಿದ್ದಾರೆ.
ಭದ್ರತಾ ಸಿಬ್ಬಂದಿಯ ಬೆಂಗಾವಲಿನಲ್ಲಿ ಬಂದಿದ್ದ ಮತಗಟ್ಟೆ ತಂಡವು ಮತದಾನ ಮುಗಿಸಿ ಹಿಂತಿರುಗುತ್ತಿದ್ದಾಗ ಬಡೇ ಗೊಬ್ರಾ ಗ್ರಾಮದ ಬಳಿ ಈ ಘಟನೆ ನಡೆದಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ನಕ್ಸಲೀಯರು ಸ್ಫೋಟವನ್ನು ಪ್ರಚೋದಿಸಿದ್ದು, ಹುತಾತ್ಮ ಐಟಿಬಿಪಿ ಸಿಬ್ಬಂದಿಯನ್ನು ಹೆಡ್ ಕಾನ್‌ಸ್ಟೆಬಲ್ ಜೋಗಿಂದರ್ ಸಿಂಗ್ ಎಂದು ಗುರುತಿಸಲಾಗಿದೆ.
ಛತ್ತೀಸ್‌ಗಢದ ಎರಡನೇ ಹಂತದ ಚುನಾವಣೆಗೆ ಶುಕ್ರವಾರ ರಾಜ್ಯದ ಒಟ್ಟು 90 ವಿಧಾನಸಭಾ ಕ್ಷೇತ್ರಗಳ ಪೈಕಿ 70 ಕ್ಷೇತ್ರಗಳಲ್ಲಿ ಮತದಾನ ನಡೆದಿದೆ. ನವೆಂಬರ್ 7 ರಂದು ಮೊದಲ ಹಂತದ ಚುನಾವಣೆ ನಡೆದಿದ್ದು, ಡಿಸೆಂಬರ್ 3 ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


